Home ಕ್ರೀಡೆ P.Cricket ಕ್ರಿಕೆಟ್ ಅ, ಆ, ಇ, ಈ ಕಲಿಸಿದ ಗುರುವಿಗೆ ಕ್ರಿಕೆಟ್​ ದೇವರ ನಮನ..!

ಕ್ರಿಕೆಟ್ ಅ, ಆ, ಇ, ಈ ಕಲಿಸಿದ ಗುರುವಿಗೆ ಕ್ರಿಕೆಟ್​ ದೇವರ ನಮನ..!

ಕ್ರಿಕೆಟ್​ ದೇವರು, ಮಾಸ್ಟರ್​ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ತಮಗೆ ಕ್ರಿಕೆಟ್​ನ ಅ, ಆ, ಇ, ಈ ಹೇಳಿಕೊಟ್ಟ ಗುರು ರಮಾಕಾಂತ್​ ಅಚ್ರೇಕರ್​​ರಿಗೆ ನಮನ ಸಲ್ಲಿಸಿದ್ದಾರೆ.
ಗುರು ಪೂರ್ಣಿಮೆ ದಿನವಾದ ನಿನ್ನೆ (ಮಂಗಳವಾರ), ಅಚ್ರೇಕರ್​​ರನ್ನು ನೆನೆದ ಸಚಿನ್, ‘ವಿದ್ಯಾರ್ಥಿಗಳಲ್ಲಿನ ಅಜ್ಞಾನದ ಕತ್ತಲೆಯನ್ನು ಹೋಗಲಾಡಿಸುವವನೇ ಗುರು. ನನ್​​​​ ಪಾಲಿಗೆ ಇಂಥಾ ಗುರುವಾಗಿದ್ದಕ್ಕೆ ಧನ್ಯವಾದಗಳು ಅಚ್ರೇಕರ್ ಸರ್. ನನ್ನೆಲ್ಲಾ ಸಾಧನೆಗಳಿಗೆ ಮಾರ್ಗದರ್ಶಕರು ನೀವು” ಅಂತ ಟ್ವೀಟ್ ಮಾಡಿದ್ದಾರೆ.
ಅಚ್ರೇಕರ್ ಸಚಿನ್ ಮತ್ತು ವಿನೋದ್ ಕಾಂಬ್ಳಿ ಅವರ ಕ್ರಿಕೆಟ್​ ಗುರು. ಅವರು 1990ರಲ್ಲಿ ದ್ರೋಣಾಚಾರ್ಯ ಪ್ರಶಸ್ತಿ, 2010ರಲ್ಲಿ ಪದ್ಮಶ್ರೀ ಪ್ರಶಸ್ತಿಗೆ ಭಾಜನರಾಗಿದ್ದರು. ಕಳೆದ ಜನವರಿಯಲ್ಲಿ (2019) ಅಚ್ರೇಕರ್ ತಮ್ಮ 87ನೇ ವಯಸ್ಸಲ್ಲಿ ಇಹಲೋಕ ತ್ಯಜಿಸಿದ್ದರು.

LEAVE A REPLY

Please enter your comment!
Please enter your name here

- Advertisment -

Most Popular

5 ವರ್ಷದ ಬಾಲಕಿ ಕಾಣೆ

ಬೆಂಗಳೂರು : ನಗರದ ಮೆಜೆಸ್ಟಿಕ್ ಬಸ್ ನಿಲ್ದಾಣದಲ್ಲಿ 5 ವರ್ಷದ ಬಾಲಕಿ ಕಾಣೆಯಾಗಿದ್ದಾಳೆ. ಲೋಕಿತ ಕೆ.ಮರನ್ ಕಾಣೆಯಾಗಿರುವ ಬಾಲಕಿ‌. ಈಕೆ ತನ್ನ ತಾತನ ಜೊತೆ ಸೆ.18 ರಂದು ಮನೆಯಿಂದ ತೆರಳಿದ್ದಳು. ಮೆಜೆಸ್ಟಿಕ್ ನಿಲ್ದಾಣದಲ್ಲಿ...

ಅಕ್ಕ ಗೌರಿ ಲಂಕೇಶ್​ರನ್ನು ನೆನೆದು ಕಣ್ಣೀರಿಟ್ಟ ಇಂದ್ರಜಿತ್ ಲಂಕೇಶ್..!

ಬೆಂಗಳೂರು : ಸ್ಯಾಂಡಲ್​​ವುಡ್​ ಡ್ರಗ್ಸ್​ ಮಾಫಿಯಾ ವಿಚಾರಕ್ಕೆ ಸಂಬಂಧಿಸಿದಂತೆ ಸೋಮವಾರ ಸಿಸಿಬಿ ವಿಚಾರಣೆ ಎದುರಿಸಿದ್ದ ನಿರ್ದೇಶಕ ಇಂದ್ರಜಿತ್ ಲಂಕೇಶ್ ಇಂದು ಮತ್ತೊಮ್ಮೆ ಸಿಸಿಬಿ ಅಧಿಕಾರಿಗಳ ಮುಂದೆ ಹಾಜರಾಗುತ್ತಿದ್ದಾರೆ.  ಇಂದು ಸಿಸಿಬಿ ವಿಚಾರಣೆಗೆ ಹೋಗುವ...

ಸ್ಯಾಂಡಲ್​​ವುಡ್​​​​​ನಲ್ಲಿ ಡ್ರಗ್​ ಮಾಫಿಯಾ : ಇಂದು ಸಿಸಿಬಿಯಿಂದ ನಟಿ ರಾಗಿಣಿ ವಿಚಾರಣೆ

ಬೆಂಗಳೂರು :  ಸ್ಯಾಂಡಲ್​​​​ವುಡ್​​ನಲ್ಲಿ ಡ್ರಗ್​​ ಮಾಫಿಯಾದ ಬಗ್ಗೆ ಬಿಸಿಬಿಸಿ ಚರ್ಚೆ ನಡೀತಾ ಇದೆ. ಚಂದನವನಕ್ಕೆ ಮಾದಕ ಜಾಲ ಹಬ್ಬಿದೆಯೇ ಅಥವಾ ಇಲ್ಲವೇ ಅನ್ನೋದು ಸದ್ಯದ ಗಾಂಧಿನಗರದ ಹಾಟ್ ಸುದ್ದಿ. ಇದಕ್ಕೆ ಸಂಬಂಧಿಸಿದಂತೆ ನಟಿ ರಾಗಿಣಿ...

ಕೊರೋನಾದಿಂದ ಮಾಜಿ ಶಾಸಕ ಅಪ್ಪಾಜಿ ಗೌಡ ನಿಧನ

ಶಿವಮೊಗ್ಗ : ಭದ್ರಾವತಿಯ ಜೆಡಿಎಸ್ ನ ಮಾಜಿ ಶಾಸಕ ಅಪ್ಪಾಜಿಗೌಡ ವಿಧಿವಶರಾಗಿದ್ದಾರೆ. ಕಳೆದ ಕೆಲ ದಿನಗಳಿಂದ ಕೊರೋನಾ ಸೋಂಕಿಗೆ ಒಳಗಾಗಿದ್ದ ಅವರು,  ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ. ಅಪ್ಪಾಜಿಗೌಡರಿಗೆ 69 ವರ್ಷ ವಯಸ್ಸಾಗಿತ್ತು. ಪತ್ನಿ...

Recent Comments