Tuesday, January 18, 2022
Powertv Logo
Homeರಾಜಕೀಯಮತದಾರರಿಂದ ಉತ್ತಮ ಪ್ರತಿಕ್ರಿಯೆ : ಸಚಿನ್ ಪಾಟೀಲ

ಮತದಾರರಿಂದ ಉತ್ತಮ ಪ್ರತಿಕ್ರಿಯೆ : ಸಚಿನ್ ಪಾಟೀಲ

ಗದಗ : ಸ್ಥಳೀಯ ಸಂಸ್ಥೆಯಿಂದ ವಿಧಾನ ಪರಿಷತ್‌ಗೆ ಡಿ.೧೦ ರಂದು ನಡೆಯಲಿರುವ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಲೀಂ ಅಹ್ಮದ ಅವರು ಡಿ.೨ ರಿಂದ ಜಿಲ್ಲೆಯಲ್ಲಿ ಮೂರು ದಿನಗಳ ಕಾಲ ಚುನಾವಣಾ ಪ್ರಚಾರ ನಡೆಸುವರು ಎಂದು ಎಂದು ಜಿಲ್ಲಾ ಕಾಂಗ್ರೆಸ್ ಯುವ ಮುಖಂಡ ಸಚಿನ್ ಪಾಟೀಲ ಹೇಳಿದರು.

ನಗರದ ಪತ್ರಿಕಾ ಭವನದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಡಿ. ೨ರಂದು ರೋಣ ಮತ್ತು ನರಗುಂದ, ಡಿ.೩ ರಂದು ಧಾರವಾಡ ಜಿಲ್ಲೆಯ ನವಲಗುಂದ, ಕುಂದಗೋಳ, ಡಿ.೪ ರಂದು ಶಿರಹಟ್ಟಿ ಮತ್ತು ಗದಗನಲ್ಲಿ ಚುನಾವಣಾ ಪ್ರಚಾರ ನಡೆಸುವರು. ಡಿ.೪ ರಂದು ಬೆಳಗ್ಗೆ ಶಿರಹಟ್ಟಿಯಲ್ಲಿ ಹಾಗೂ ಸಂಜೆ ೩ ಗಂಟೆಗೆ ಗದಗ ನಗರದ ಕಾಟನ್ ಸೇಲ್ ಸೊಸೈಟಿ ಆವರಣದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಪ್ರಚಾರ ಸಭೆ ನಡೆಯಲಿದೆ.

ಪಕ್ಷದ ಜಿಲ್ಲಾಧ್ಯಕ್ಷ ಜಿ.ಎಸ್.ಪಾಟೀಲ, ಮಾಜಿ ಸಚಿವರಾದ ಎಚ್.ಕೆ.ಪಾಟೀಲ, ಬಿ.ಆರ್.ಯಾವಗಲ್, ಮಾಜಿ ಶಾಸಕರಾದ ಡಿ.ಆರ್.ಪಾಟೀಲ, ಜಿ.ಎಸ್.ಗಡ್ಡದೇವರಮಠ, ಶ್ರೀಶೈಲಪ್ಪ ಬಿದರೂರು, ರಾಮಕೃಷ್ಣ ದೊಡ್ಡಮನಿ ಹಾಗೂ ಪಕ್ಷದ ಪ್ರಮುಖರು ಪಾಲ್ಗೊಳ್ಳುವರು ಎಂದು ತಿಳಿಸಿದರು.

ಕ್ಷೇತ್ರದಲ್ಲಿ ಸುಮಾರು ೮ ಸಾವಿರ ಮತಗಳಿದ್ದು, ಧಾರವಾಡ, ಹಾವೇರಿ ಮತ್ತು ಗದಗ ಜಿಲ್ಲೆಗಳ ನಗರ ಸ್ಥಳೀಯ ಸಂಸ್ಥೆಗಳು, ಗ್ರಾ.ಪಂ.ಗಳಲ್ಲಿ ಕಾಂಗ್ರೆಸ್ ಬೆಂಬಲಿತ ಹಾಗೂ ಪಕ್ಷದ ಸದಸ್ಯರೇ ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ಈ ಬಾರಿ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸೇರಿದಂತೆ ಒಟ್ಟು ೧೧ ಜನ ಸ್ಪರ್ಧೆಗಳಿದಿದ್ದರೂ, ಕಾಂಗ್ರೆಸ್‌ನ ಸಲೀಂ ಅಹ್ಮದ್ ಅವರು ೨೫೦೦ಕ್ಕಿಂತ ಹೆಚ್ಚು ಮೊದಲ ಪ್ರಾಶಸ್ತ್ಯ ಮತಗಳೊಂದಿಗೆ ಗೆಲುವು ದಾಖಲಿಸುವರು ಎಂದು ವಿಶ್ವಾಸ ವ್ಯಕ್ತಪಡಿಸಿದರು.

ತೆಲಂಗಾಣ ಪ್ರದೇಶ ಕಾಂಗ್ರೆಸ್ ಸಮಿತಿ ರಾಜ್ಯ ಕಾರ್ಯದರ್ಶಿ ಸಾಬೀರ್ ಅಲಿ ಮಾತನಾಡಿ, ತೆಲಂಗಾಣ ರಾಜ್ಯ ಉಸ್ತುವಾರಿ ವಹಿಸಿಕೊಂಡಿರುವ ಸಲೀಂ ಅಹ್ಮದ್ ಅವರ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ೨೦೧೮ರ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಗಳ ಗೆಲುವಿಗೆ ರಣ ತಂತ್ರವನ್ನೇ ರೂಪಿಸಿದ್ದರು. ಜೊತೆಗೆ ೧೯೯೩ ರಿಂದ ನಾನು ಸಲೀಂ ಅಹ್ಮದ್ ಅವರೊಂದಿಗೆ ಗುರುತಿಸಿಕೊಂಡಿದ್ದೇನೆ. ಈ ಬಾರಿ ಧಾರವಾಡ ಸ್ಥಳೀಯ ಸಂಸ್ಥೆ ಕ್ಷೇತ್ರದಿಂದ ಸ್ಪರ್ಧಿಸಿದ್ದು, ಗೆಲುವು ಸಾಧಿಸುವುದು ನಿಶ್ಚಿತ. ಅವರ ಪರ ಪ್ರಚಾರದ ನಿಮಿತ್ತ ವಿವಿಧ ಕ್ಷೇತ್ರ ವ್ಯಾಪ್ತಿಯ ವಿವಿಧ ಗ್ರಾಮ, ನಗರಗಳಿಗೆ ಭೇಟಿ ನೀಡಿದಾಗ ಮತದಾರರಿಂದಲೂ ಉತ್ತಮ ಪ್ರತಿಕ್ರಿಯೆ ಬಂದಿದೆ ಎಂದು ತಿಳಿಸಿದರು.

ಮಹಲಿಂಗೇಶ್ ಹಿರೇಮಠ ಗದಗ

4 COMMENTS

LEAVE A REPLY

Please enter your comment!
Please enter your name here

- Advertisment -

Most Popular

Recent Comments