ಪ್ರವಾಹ ಸಂತ್ರಸ್ತರ ನೆರವಿಗೆ ಚಾಲೆಂಜಿಂಗ್ ಸ್ಟಾರ್​ ದರ್ಶನ್​

0
450

ಬೆಂಗಳೂರು: ಸ್ಯಾಂಡಲ್​ವುಡ್​​ ಸುಲ್ತಾನ ದರ್ಶನ್​ ಕಷ್ಟದಲ್ಲಿರೋರಿಗೆ ಸಹಾಯ ಮಾಡೋದ್ರಲ್ಲಿ ಎತ್ತಿದ ಕೈ. ಈಗ ಪ್ರವಾಹದಿಂದ ತತ್ತರಿಸಿರುವ ಉತ್ತರ ಕರ್ನಾಟಕದ ಜನ್ರ ನೆರವಿಗೆ ನಿಂತಿದ್ದಾರೆ. ಕೆಲದಿನಗಳ ಹಿಂದೆ​ ಭೀಕರ ಪ್ರವಾಹದಿಂದ ನಿರಾಶ್ರಿತರಾಗಿರುವ ಉತ್ತರ ಕರ್ನಾಟಕದ ಜನರ ಸಂಕಷ್ಟಕ್ಕೆ ಸ್ಪಂದಿಸಬೇಕೆಂದು ಚಾಲೆಂಜಿಂಗ್​​ ಸ್ಟಾರ್​​​ ಟ್ವಿಟರ್​ ಮೂಲಕ ತಮ್ಮ ಅಭಿಮಾನಿಗಳಿಗೆ ಮನವಿ ಮಾಡಿಕೊಂಡಿದ್ದರು. ಇಂದು ಸ್ವತಃ ಅವರೇ ನೆರೆ ಸಂತ್ರಸ್ತರ ನೆರವಿಗೆ ಧಾವಿಸಿದ್ದಾರೆ.
ಪ್ರವಾಹದಿಂದ ಮನೆ ಮಠಗಳನ್ನು ಕಳೆದುಕೊಂಡಿರುವ ಜನ್ರಿಗಾಗಿ ದರ್ಶನ್​ ಬೆಂಗಳೂರಿನಿಂದ ಲಾರಿಯಲ್ಲಿ ಅಗತ್ಯ ವಸ್ತಗಳನ್ನು ಹುಬ್ಬಳ್ಳಿಗೆ ಕಳುಹಿಸಿಕೊಟ್ಟಿದ್ದಾರೆ. ಆಹಾರ, ನೀರು ಅಗತ್ಯ ವಸ್ತುಗಳನ್ನ ತುಂಬಿದ್ದ ಲಾರಿ ಹುಬ್ಬಳ್ಳಿಗೆ ಆಗಮಿಸಿದ್ದು ಅಲ್ಲಿ ದಚ್ಚು ಫ್ಯಾನ್ಸ್​​ ವಸ್ತಗಳನ್ನು ವಿತರಿಸುವ ಕಾರ್ಯವನ್ನು ಮಾಡ್ತಿದ್ದಾರೆ.

LEAVE A REPLY

Please enter your comment!
Please enter your name here