Home ರಾಜ್ಯ ಇತರೆ 'ಕೆರೆ ಸಂಜೀವಿನಿ' ಯೋಜನೆಯಡಿ ಬಾದಾಮಿಯ 93 ಕೆರೆಗಳ ಅಭಿವೃದ್ಧಿ..!

‘ಕೆರೆ ಸಂಜೀವಿನಿ’ ಯೋಜನೆಯಡಿ ಬಾದಾಮಿಯ 93 ಕೆರೆಗಳ ಅಭಿವೃದ್ಧಿ..!

ರಾಯಚೂರು: ಹಲವು ವರ್ಷಗಳಿಂದ ಆ ಕೆರೆ ಹೂಳಿನಿಂದ ತುಂಬಿ ಹೋಗಿತ್ತು. ಸತತ ಬರಗಾಲದಿಂದ ಕೆರೆಯಂಗಳ ಬರಿದಾಗಿತ್ತು. ಇದೀಗ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಡಿಯಲ್ಲಿ ಹೂಳೆತ್ತುವ ಕಾಯಕ ಭರದಿಂದ ಸಾಗಿದೆ. ಮತ್ತೊಂದೆಡೆ ರಾಯಚೂರಿನಲ್ಲಿ ಜನ ಗುಳೆ ಹೊರಟಿದ್ದಾರೆ.

‘ಕೆರೆ ಸಂಜೀವಿನಿ’ ಯೋಜನೆಯಡಿ ಬಾದಾಮಿಯ 93 ಕೆರೆಗಳ ಅಭಿವೃದ್ಧಿಗೆ ಸರ್ಕಾರ ಮುಂದಾಗಿದೆ. ಮುಷ್ಟಿಗೇರಿಯಲ್ಲಿ ಈ ಕೆಲಸವನ್ನ ಮಾಡಲು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಸಂಸ್ಥೆಗೆ ಜವಾಬ್ದಾರಿ ವಹಿಸಲಾಗಿದೆ. 18 ಲಕ್ಷ ರೂಪಾಯಿ ವೆಚ್ಚದಲ್ಲಿ 15 ಎಕರೆ ವಿಶಾಲ ಕೆರೆ ಹೂಳೆತ್ತುವ ಕೆಲಸ ಕೈಗೊಳ್ಳಲಾಗಿದೆ. ಕೆರೆ ಹೂಳೆತ್ತಿದ ಮಣ್ಣು ಫಲವತ್ತಾಗಿರುತ್ತೆ. ಅದನ್ನ ರೈತರು ತಮ್ಮ ಹೊಲಕ್ಕೆ ಹಾಕಿಸಿಕೊಳ್ಳಬೇಕಾದ್ರೆ ಪ್ರತಿ ಟ್ರ್ಯಾಕ್ಟರ್​​ಗೆ 50 ರೂಪಾಯಿ​ ನಿಗದಿ ಮಾಡಲಾಗಿದೆ. ಸಾಕಷ್ಟು ರೈತರು ತಮ್ಮ ಸ್ವಂತ ವೆಚ್ಚದಲ್ಲಿ ಟ್ರ್ಯಾಕ್ಟರ್ ಮೂಲಕ ಹೂಳು ತೆಗೆದುಕೊಂಡು ಹೋಗಿದ್ದಾರೆ.

ಒಂದು ಕಡೆ ನೀರಿಗಾಗಿ ಹೂಳೆತ್ತೋ ಕೆಲಸ ನಡೀತಿದ್ರೆ , ಮತ್ತೊಂದೆಡೆ ಬರಗಾಲಕ್ಕೆ ತುತ್ತಾಗಿರೋ ಬಿಸಿಲನಾಡು ರಾಯಚೂರು ಜನ ಬೆಂಡಾಗಿದ್ದಾರೆ. ಮಳೆ ಬೆಳೆ ಇಲ್ಲದೇ ಹೊಟ್ಟೆ ಪಾಡಿಗಾಗಿ ಗಂಟು ಮೂಟೆ ಕಟ್ಟಿಕೊಂಡು ಪುಟ್ಟ ಪುಟ್ಟ ಮಕ್ಕಳೊಂದಿಗೆ ನಗರಗಳಿಗೆ ಗುಳೆ ಹೊರಟಿದ್ದಾರೆ. ಮಾನ್ವಿ ತಾಲೂಕಿನಲ್ಲಿ ಕೂಲಿ ಮಾಡುವ ನೂರಾರು ಕುಟುಂಬಗಳು ಗುಳೆ ಹೋಗಿದ್ದಾರೆ.

ಜಿಲ್ಲಾಡಳಿತ ಉದ್ಯೋಗ ಖಾತ್ರಿ ಯೋಜನೆ ಆರಂಭಿಸ್ತೇವೆ ಅಂತ ಹೇಳಿತ್ತು. ಅದನ್ನ ಜಾರಿಗೆ ತರುವಲ್ಲಿ ವಿಫಲ ಆಗಿರೋದು ಕಂಡುಬರ್ತಿದೆ. ಇನ್ನು ಕೆಲವೆಡೆ ಕೆಲಸ ಮಾಡಿದ್ರೂ ಕೂಲಿ ಹಣ ಸಕಾಲಕ್ಕೆ ಸಿಗ್ತಿಲ್ಲ. ಅಧಿಕಾರಿಗಳ ಬೇಜವಾಬ್ದಾರಿ ಖಂಡಿಸಿ ಸಾಲು ಸಾಲು ಪ್ರತಿಭಟನೆ ಮಾಡಿದ್ರೂ ಪ್ರಯೋಜನ ಇಲ್ಲದಂತಾಗಿದೆ.

 ರಾಯಚೂರು ಜಿಲ್ಲೆಯ ಬಡ ಕುಟುಂಬಗಳು ತುತ್ತಿನ ಚೀಲ ತುಂಬಿಸಿಕೊಳ್ಳಲು ಮಹಾನಗರಗಳತ್ತ ಮುಖ ಮಾಡಿವೆ. ಅಧಿಕಾರಿಗಳು, ಜನಪ್ರತಿನಿಧಿಗಳು ಇನ್ನಾದ್ರು ಎಚ್ಚೆತ್ತುಕೊಳ್ಳಬೇಕಿದೆ.

LEAVE A REPLY

Please enter your comment!
Please enter your name here

- Advertisment -

Most Popular

ದೇಶದಲ್ಲಿ  24 ಗಂಟೆಗಳಲ್ಲಿ 48,648 ಕೊರೋನಾ ಕೇಸ್ ಪತ್ತೆ!

ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 48,648 ಮಂದಿಯಲ್ಲಿ ಕೊರೋನಾ ಸೋಂಕು ಪತ್ತೆಯಾಗಿದೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 80,88,851ಕ್ಕೆ ತಲುಪಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ...

 ಸಿನಿಮೀಯ ರೀತಿಯಲ್ಲಿ ನಗರಸಭೆ ಸದಸ್ಯ ಕಿಡ್ನಾಪ್​!

ಕೊಪ್ಪಳ : ಸಿನಿಮೀಯ ರೀತಿಯಲ್ಲಿ ನಗರಸಭೆ ಸದಸ್ಯನನ್ನು ಕಿಡ್ನಾಪ್ ಮಾಡಲಾಗಿದೆ. ಕಿಡ್ನಾಪ್​ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಕೊಪ್ಪಳ ಜಿಲ್ಲೆಯ ಗಂಗಾವತಿಯಲ್ಲಿ ನವೆಂಬರ್ 2 ರಂದು ನಗರಸಭೆ ಚುನಾವಣೆ ನಡೆಯಲಿದ್ದು, ಗಂಗಾವತಿ ನಗರಸಭೆ ಕಾಂಗ್ರೆಸ್ ಸದಸ್ಯ...

ಅಲಹಬಾದ್​ ಹೈಕೋರ್ಟ್ ನಿಗಾದಲ್ಲಿ ಹತ್ರಾಸ್​ ಗ್ಯಾಂಗ್ ರೇಪ್​ ಕೇಸ್ ತನಿಖೆಗೆ ಸುಪ್ರೀಂ ಆದೇಶ

ನವದೆಹಲಿ : ಉತ್ತರ ಪ್ರದೇಶ ಹತ್ರಾಸ್​​​​ ಗ್ಯಾಂಗ್​ ರೇಪ್​​ ಪ್ರಕರಣದ ತನಿಖೆ ಅಲಹಬಾದ್​ ಹೈಕೋರ್ಟ್​ ನಿಗಾದಲ್ಲಿ ನಡೆಯಬೇಕೆಂದು ಸುಪ್ರೀಂ ಕೋರ್ಟ್​ ಆದೇಶಿಸಿದೆ. ಸದ್ಯ ಸಿಬಿಐ ಪ್ರಕರಣದ ತನಿಖೆಯನ್ನು ನಡೆಸುತ್ತಿದ್ದು, ತನಿಖಾ ತಂಡದಲ್ಲಿರುವ ಅಧಿಕಾರಿಗಳನ್ನು ರಾಜ್ಯದಿಂದ...

ಡಿ.ಬಾಸ್​​ಗಾಗಿ ಕನ್ನಡ ಕಲಿತ ಜಗಮಪತಿ ಬಾಬು..!

ಸಾಲ್ಟ್ ಅಂಡ್ ಪೆಪ್ಪರ್ ಲುಕ್​ನಲ್ಲಿ ಸೌತ್​ನಲ್ಲಿ ಸಂಚಲನ ಸೃಷ್ಠಿಸಿರೋ ಜಗಪತಿ ಬಾಬು, ಮತ್ತೊಂದು ನೂತನ ದಾಖಲೆ ಬರೆದಿದ್ದಾರೆ. ಅದೂ ಡಿ ಬಾಸ್ ದರ್ಶನ್​ಗಾಗಿ ಅನ್ನೋದು ವಿಶೇಷ. ಇಷ್ಟಕ್ಕೂ ಮೋಸ್ಡ್ ಡಿಮ್ಯಾಂಡಿಂಗ್ ಜಗಪತಿ ಬಾಬು...

Recent Comments