Home ರಾಜ್ಯ ಸತ್ಯನಾರಾಯಣ್ ಪುತ್ರ ಸತ್ಯಪ್ರಕಾಶನ್ನು ಬಿಜೆಪಿಗೆ ತರಲು ಶತಪ್ರಯತ್ನ!

ಸತ್ಯನಾರಾಯಣ್ ಪುತ್ರ ಸತ್ಯಪ್ರಕಾಶನ್ನು ಬಿಜೆಪಿಗೆ ತರಲು ಶತಪ್ರಯತ್ನ!

ತುಮಕೂರು : ಜಿಲ್ಲೆಯ ಶಿರಾ ವಿಧಾನಸಭಾ ಕ್ಷೇತ್ರ ಹಾಲಿ ಶಾಸಕ ಸತ್ಯ ನಾರಾಯಣ್ ನಿಧನದಿಂದಾಗಿ ತೆರವಾಗಿದ್ದು, ಉಪ ಚುನಾವಣೆ ಘೋಷಣೆಗೂ ಮುನ್ನವೇ ಶಿರಾ ವಿಧಾನ ಸಭಾ ಕ್ಷೇತ್ರದ ರಾಜಕೀಯ ಚಟುವಟಿಕೆ ಗರಿಗೆದರಿದೆ ಸದ್ಯ ಶಿರಾ ವಿಧಾನಸಭಾ ಕ್ಷೇತ್ರದ ಹಾಲಿ ಶಾಸಕರಾಗಿದ್ದ ಸತ್ಯನಾರಾಯಣ ಪುತ್ರ ಸತ್ಯಪ್ರಕಾಶ್ ರನ್ನ ಬಿಜೆಪಿಗೆ ಕರೆತರಲು ಶತಪ್ರಯತ್ನ ನಡೆದಿದೆ.

ಬಿಜೆಪಿ ಈಗಾಗಲೇ ಸತ್ಯಪ್ರಕಾಶ್ ರೊಂದಿಗೆ ಎರಡು ಸುತ್ತಿನ ಮಾತುಕತೆ ನಡೆದಿದೆ ಎನ್ನಲಾಗಿದ್ದು, ಸದ್ಯ ಸತ್ಯಪ್ರಕಾಶ್ ತಂದೆಯನ್ನು ಗೆಲ್ಲಿಸಿದ ಕಾರ್ಯಕರ್ತರೊಂದಿಗೆ ಮಾತನಾಡಿದ ಬಳಿಕ ತಮ್ಮ ತೀರ್ಮಾನ ತಿಳಿಸುವುದಾಗಿ ಹೇಳಿದ್ದಾರೆ ಎನ್ನಲಾಗಿದೆ. ಅಲ್ಲದೆ ಸತ್ಯಪ್ರಕಾಶ್ ಕರೆತರುವ ಹೊಣೆ ಹೊತ್ತಿರುವ ಜಿಲ್ಲಾ ಉಸ್ತುವಾರಿ ಸಚಿವ ಮಾಧುಸ್ವಾಮಿ ಎರಡು ಭಾರೀ ಸತ್ಯಪ್ರಕಾಶ್ ಭೇಟಿ ಮಾಡಿದ್ದು ಶಿರಾಚುನಾವಣೆಯಲ್ಲಿ ಗೆಲ್ಲಿಸಿಕೊಂಡು ಬರುವ ಭರವಸೆ ನೀಡಿದ್ದಾರೆ ಎನ್ನಲಾಗಿದೆ. ಒಟ್ಟಾರೆ ಸತ್ಯಪ್ರಕಾಶ್ ನಿರ್ಧಾರ ತಂದೆಯನ್ನ ಬೆಳೆಸಿದ ಜೆಡಿಎಸ್ ನಲ್ಲೋ ಅಥವಾ ಬಿಜೆಪಿಯಲ್ಲೋ ಕಾದುನೋಡಬೇಕಾಗಿದೆ.

-ಹೇಮಂತ್ ಕುಮಾರ್. ಜೆ.ಎಸ್ 

LEAVE A REPLY

Please enter your comment!
Please enter your name here

- Advertisment -

Most Popular

ನಿರಂತರ ಜ್ಯೋತಿ ಯೋಜನೆಯಲ್ಲಿ ಅವ್ಯವಹಾರ: ಕೆ.ಎಸ್. ಈಶ್ವರಪ್ಪ

ಶಿವಮೊಗ್ಗ: ಗ್ರಾಮೀಣ ಪ್ರದೇಶಗಳಲ್ಲಿ ಮನೆಗಳಿಗೆ ನಿರಂತರ ವಿದ್ಯುತ್ ಸಂಪರ್ಕ ಕಲ್ಪಿಸುವ ನಿರಂತರ ಜ್ಯೋತಿ ಯೋಜನೆ ಅನುಷ್ಠಾನದಲ್ಲಿ ಜಿಲ್ಲೆಯಲ್ಲಿ ಅವ್ಯವಹಾರ ನಡೆದಿರುವುದು ಮೇಲ್ನೋಟಕ್ಕೆ ಕಂಡು ಬಂದಿದ್ದು, ಈ ಕುರಿತು ಸೂಕ್ತ ಕ್ರಮ ಜರುಗಿಸಿ ಎಂದು...

‘ಪಿಬಿ ರಸ್ತೆ ಮೇಲ್ದರ್ಜೆಗೆ ಏರಿಸುವಂತೆ ಗಬ್ಬೂರು ಬೈಪಾಸ್ ಬಂದ್’

ಹುಬ್ಬಳ್ಳಿ: ಪುಣಾ-ಬೆಂಗಳೂರ ಬೈಪಾಸ್ ರಸ್ತೆಯು ಕಿರಿದಾಗಿದ್ದು, ಇದರಿಂದಾಗಿ ಪದೇ ಪದೇ ಅಪಘಾತಗಳು ಸಂಭವಿಸುತ್ತಿದ್ದು, ಕೂಡಲೇ ಈ ರಸ್ತೆಯನ್ನು ಮೇಲ್ದರ್ಜೆಗೆ ಏರಿಸಿ ಚತುಷ್ಪಥ ರಸ್ತೆಯಾಗಿ ಅಭಿವೃದ್ಧಿಪಡಿಸಬೇಕೆಂದು ಒತ್ತಾಯಿಸಿ ಕಾಂಗ್ರೆಸ್ ಕಾರ್ಯಕರ್ತರು ಗಬ್ಬೂರು ಬೈಪಾಸ್ ಗೆ...

ಜ. 26 ರಂದು ಪರ್ಯಾಯ ರೈತ ಗಣರಾಜ್ಯೋತ್ಸವ ಪರೆಡ್: ಶಾಂತಕುಮಾರ

ಹುಬ್ಬಳ್ಳಿ : ದೆಹಲಿ ರೈತರ ಹೋರಾಟ ಬೆಂಬಲಿಸಿ ಜ. 26 ರಂದು ರೈತರ ಪರ್ಯಾಯ ಗಣರಾಜ್ಯೋತ್ಸವ ಪರೆಡ್ ಹಮ್ಮಿಕೊಳ್ಳಲಾಗಿದೆ. ಅಂದು ಬೆಂಗಳೂರಿನಲ್ಲಿ ಟ್ರ್ಯಾಕ್ಟರ್ , ಮೋಟಾರ್ ಬೈಕ್ ರ್ಯಾಲಿ ಹಮ್ಮಿಕೊಳ್ಳಲಾಗಿದೆ ಎಂದು ರಾಜ್ಯ...

‘ಠಾಕ್ರೆ ಟ್ವೀಟ್ ಖಂಡಿಸಿ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಪ್ರತಿಭಟನೆ’

ಬೆಂಗಳೂರು: ಮಾಹಾರಾಷ್ಟ್ರ ಸಿಎಂ ಉದ್ದವ್ ಠಾಕ್ರೆ ಟ್ವೀಟ್ ಖಂಡಿಸಿ ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸಲಾಗುತ್ತಿದೆ. ಮೈಸೂರು ಬ್ಯಾಂಕ್ ಸರ್ಕಲ್ ಬಳಿ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಕನ್ನಡ ಪರ ಸಂಘಟನೆಗಳು ಧರಣಿ ನಡೆಸುತ್ತಿವೆ. ಉದ್ದವ್ ಠಾಕ್ರೆ ಭೂತದಹನ...

Recent Comments