ಸ್ಪೀಕರ್ ಅರ್ಜಿ ತುರ್ತು ವಿಚಾರಣೆಗೆ ಸುಪ್ರೀಂ ನಕಾರ..!

0
1105

ಬೆಂಗಳೂರು : ರಾಜ್ಯ ರಾಜಕಾರಣಕ್ಕೆ ಸಂಬಂಧಿಸಿದಂತೆ ಕ್ಷಣಕ್ಕೊಂದು ಬೆಳವಣಿಗೆಗಳು ನಡೆಯುತ್ತಿವೆ. ಸ್ಪೀಕರ್ ರಮೇಶ್ ಕುಮಾರ್ ಅವರ ಅರ್ಜಿಯ ತುರ್ತು ವಿಚಾರಣೆಗೆ ಸುಪ್ರೀಂಕೋರ್ಟ್ ನಿರಾಕರಿಸಿದೆ.
ಕಾಂಗ್ರೆಸ್ ಮತ್ತು ಜೆಡಿಎಸ್​ ಶಾಸಕರ ರಾಜೀನಾಮೆಗೆ ಸಂಬಂಧಿಸಿದಂತೆ ಇಂದೇ ನಿರ್ಧಾರ ತೆಗೆದುಕೊಳ್ಳಬೇಕು ಅನ್ನೋ ಸುಪ್ರೀಕೋರ್ಟ್ ಆದೇಶಕ್ಕೆ ಸಂಬಂಧಿಸಿದಂತೆ ಸ್ಪೀಕರ್ ರಮೇಶ್ ಕುಮಾರ್ ಸುಪ್ರೀಕೋರ್ಟ್ ಮೆಟ್ಟಿಲೇರಿದ್ದರು. ಸಂಜೆ 6 ಗಂಟೆಯೊಳಗೆ ರಾಜೀನಾಮೆ ಅರ್ಜಿಗಳನ್ನು ಇತ್ಯರ್ಥ ಮಾಡಲು ಸಾಧ್ಯವಿಲ್ಲ ಅಂತ ರಮೇಶ್ ಕುಮಾರ್ ಸುಪ್ರೀಂಗೆ ಅರ್ಜಿಯನ್ನು ಸಲ್ಲಿಸಿದ್ರು. ಹಾಗೆಯೇ ಮಧ್ಯಾಹ್ನದೊಳಗೆ ತನ್ನ ಅರ್ಜಿಯನ್ನು ಇತ್ಯರ್ಥ ಮಾಡ್ಬೇಕು ಅಂತ ಕೇಳಿಕೊಂಡಿದ್ರು. ರಮೇಶ್ ಕುಮಾರ್ ಅವರ ಅರ್ಜಿಯ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ ಸಾಧ್ಯವಿಲ್ಲ ಎಂದಿದೆ.
ಅತೃಪ್ತ ಶಾಸಕರು ಸ್ವ-ಇಚ್ಛೆಯಿಂದ ರಾಜೀನಾಮೆ ನೀಡಿದ್ದಾರೆಯೇ, ಇಲ್ಲವೇ ಅನ್ನೋದನ್ನು ವಿಚಾರಣೆ ನಡೆಸಬೇಕು. ಹಾಗಾಗಿ ತಮಗೆ ವಿಚಾರಣೆಗೆ ಕಾಲಾವಕಾಶ ಬೇಕು. ಇಂದೇ ವಿಚಾರಣೆ ಸಾಧ್ಯವಿಲ್ಲ ಎಂದು ಸುಪ್ರೀಂಗೆ ಮನವಿ ಮಾಡಿದ್ದರು.

LEAVE A REPLY

Please enter your comment!
Please enter your name here