Sunday, May 29, 2022
Powertv Logo
Homeರಾಜ್ಯಇಂದಿನಿಂದ ದ್ವಿತೀಯ ಪಿಯುಸಿ ಪರೀಕ್ಷೆ : ಸಮವಸ್ತ್ರ ಪಾಲನೆ ಕಡ್ಡಾಯ

ಇಂದಿನಿಂದ ದ್ವಿತೀಯ ಪಿಯುಸಿ ಪರೀಕ್ಷೆ : ಸಮವಸ್ತ್ರ ಪಾಲನೆ ಕಡ್ಡಾಯ

ಬೆಂಗಳೂರು : ಇಂದಿನಿಂದ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭಗವಾಗಿದ್ದು ಮೇ 18ರವರೆಗೆ ಎಕ್ಸಾಂ ನಡೆಯಲಿದೆ. ರಾಜ್ಯದ ಒಟ್ಟು 1,076 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ. ಒಟ್ಟಾರೆ 6,84,255 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದು, ಪರೀಕ್ಷೆ ಬರೆಯಲಿರುವ ವಿದ್ಯಾರ್ಥಿಗಳಿಗೆ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಸೇರಿದಂತೆ ಹಲವು ಗಣ್ಯರು ಶುಭ ಕೋರಿದ್ದಾರೆ.

ಎಸ್ಎಸ್ಎಲ್​​ಸಿ ಪರೀಕ್ಷೆಯಂತೆಯೇ ಪಿಯು ಪರೀಕ್ಷೆಗೂ ಯಾವುದೇ ಧರ್ಮ ಸೂಚಕ ಉಡುಪು ಧರಿಸುವುದನ್ನು ಸರ್ಕಾರ ಈಗಾಗಲೇ ನಿಷೇಧಿಸಿದ್ದು, ಅದರಂತೆ ತಮ್ಮ ಕಾಲೇಜಿನಲ್ಲಿ ನಿಗದಿಪಡಿಸಿದ ಸಮವಸ್ತ್ರವನ್ನು ವಿದ್ಯಾರ್ಥಿಗಳು ಧರಿಸಬೇಕಿದೆ. ಸಮವಸ್ತ್ರ ಇಲ್ಲದಿದ್ದಲ್ಲಿ ಯಾವುದೇ ಧರ್ಮ ಸೂಚಕವಲ್ಲದ ಉಡುಪು ಧರಿಸಿ ಹಾಜರಾಗಲು ಸೂಚಿಸಿದೆ.

ಮುಖ್ಯ ಅಧೀಕ್ಷಕರನ್ನು ಬಿಟ್ಟು ಉಳಿದ ಸಿಬ್ಬಂದಿ-ವಿದ್ಯಾರ್ಥಿಗಳಿಗೆ ಮೊಬೈಲ್ ನಿಷೇಧಿಸಲಾಗಿದೆ. ಬಪರೀಕ್ಷಾ ಅಕ್ರಮಗಳ ಮೇಲೆ ನಿಗಾವಹಿಸಲು 2900ಕ್ಕೂ ಹೆಚ್ಚು ಜಿಲ್ಲಾ, ತಾಲ್ಲೂಕು ಮತ್ತು ವಿಶೇಷ ಜಾಗೃತ ದಳ ರಚಿಸಲಾಗಿದೆ. ಪ್ರಶ್ನೆ ಪತ್ರಿಕೆ ಸೋರಿಕೆ ಸೇರಿ ಯಾವುದೇ ಅಕ್ರಮಗಳಿಗೆ ಅವಕಾಶವಾಗದಂತೆ ಕ್ರಮ ವಹಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

 ದ್ವಿತೀಯ ಪಿಯುಸಿ ಪರೀಕ್ಷಾ ವೇಳಾಪಟ್ಟಿ :
ಏ. 22 – ತರ್ಕಶಾಸ್ತ್ರ, ವ್ಯವಹಾರ ಅಧ್ಯಯನ
ಏ. 23 – ಗಣಿತ ಶಾಸ್ತ್ರ, ಶಿಕ್ಷಣ ಶಾಸ್ತ್ರ
ಏ. 25 – ಅರ್ಥಶಾಸ್ತ್ರ
ಏ. 26 – ಮನಶ್ಶಾಸ್ತ್ರ, ರಸಾಯನ ಶಾಸ್ತ್ರ, ಹಿಂದೂಸ್ಥಾನಿ ಸಂಗೀತ
ಏ. 28 – ಕನ್ನಡ
ಮೇ 4 – ಭೂಗೋಳಶಾಸ್ತ್ರ, ಜೀವಶಾಸ್ತ್ರ
ಮೇ 5 – ಮಾಹಿತಿ ತಂತ್ರಜ್ಞಾನ, ರಿಟೈಲ್ ಆಟೋಮೊಬೈಲ್, ಹೆಲ್ತ್ ಕೇರ್ ಬ್ಯೂಟಿ ಅಂಡ್ ವೆಲ್ ನೆಸ್
ಮೇ 6 – ಇಂಗ್ಲಿಷ್
ಮೇ 10 – ಇತಿಹಾಸ, ಭೌತಶಾಸ್ತ್ರ
ಮೇ 12 – ರಾಜ್ಯಶಾಸ್ತ್ರ, ಸಂಖ್ಯಾಶಾಸ್ತ್ರ
ಮೇ 14 – ಸಮಾಜಶಾಸ್ತ್ರ, ಗಣಕ ವಿಜ್ಞಾನ, ವಿದ್ಯುನ್ಮಾನ ಶಾಸ್ತ್ರ
ಮೇ 17 – ಐಚ್ಚಿಕ ಕನ್ನಡ, ಲೆಕ್ಕ ಶಾಸ್ತ್ರ, ಭೂಗರ್ಭ ಶಾಸ್ತ್ರ, ಗೃಹವಿಜ್ಞಾನ
ಮೇ 18 – ಹಿಂದಿ

- Advertisment -

Most Popular

Recent Comments