ನವದೆಹಲಿ : ಜವಾಹರಲಾಲ್ ನೆಹರು ವಿಶ್ವವಿದ್ಯಾಲಯ (ಜೆಎನ್ಯು) ಕ್ಯಾಂಪಸ್ಗೆ ನುಗ್ಗಿ ಮುಸುಕುಧಾರಿ ದುಷ್ಕರ್ಮಿಗಳು ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಸಿರುವ ಘಟನೆಗೆ ಸಂಬಂಧಿಸಿದಂತೆ ಜೆಎನ್ಯು ಸಾಬರಮತಿ ಹಾಸ್ಟೆಲ್ ವಾರ್ಡನ್ ಮೀನಾ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ಶಕ್ತಿ ಮೀರಿ ಪ್ರಯತ್ನಿಸಿದ್ರೂ ಹಿಂಸಾಚಾರ ತಡೆಯಲಾಗ್ಲಿಲ್ಲ ಅಂತ ಪತ್ರದಲ್ಲಿ ಉಲ್ಲೇಖಿಸಿ, ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಿದ್ದಾರೆ. ಹಿಂಸಾಚಾರವನ್ನು ತಡೆಯಲು ಎಷ್ಟು ಪ್ರಯತ್ನಪಟ್ಟರೂ ಸಾಧ್ಯವಾಗಲಿಲ್ಲ. ಹೀಗಾಗಿ ನನ್ನ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿದ್ದೇನೆ ಎಂದು ಮೀನಾ ಪತ್ರದಲ್ಲಿ ತಿಳಿಸಿದ್ದಾರೆ.
R. Meena, senior warden of Sabarmati Hostel of Jawaharlal Nehru University (JNU) has resigned stating, 'we tried but could not provide security to hostel.' #JNUViolence pic.twitter.com/9K68Fe1LIX
— ANI (@ANI) January 6, 2020