Home ಸಿನಿ ಪವರ್ ನಟಿ ಹರ್ಷಿಕಾ ಪೂಣಚ್ಚಗೆ ಕಿರುಕುಳ - ಒಬ್ಬನ ಬಂಧನ

ನಟಿ ಹರ್ಷಿಕಾ ಪೂಣಚ್ಚಗೆ ಕಿರುಕುಳ – ಒಬ್ಬನ ಬಂಧನ

ಮಡಿಕೇರಿ: ಸ್ಯಾಂಡಲ್​ವುಡ್​ ನಟಿ ಹರ್ಷಿಕಾ ಪೂಣಚ್ಚ ಅವರಿಗೆ ಕಿರುಕುಳ ನೀಡಿರೋ ಆರೋಪ ಕೇಳಿ ಬಂದಿದೆ. ಈ ಸಂಬಂಧ ಬನ್ಸಿ ನಾಣಯ್ಯ ಎಂಬಾತನನ್ನು ಪೊಲೀಸರು ಬಂಧಿಸಿದ್ದು ಇನ್ನೊಬ್ಬನಿಗಾಗಿ ಹುಡುಕಾಟ ನಡೆಸಿದ್ದಾರೆ.

ಮಡಿಕೇರಿಯ ನೀರುಕೊಲ್ಲಿ ಗ್ರಾಮದ ರೆಸಾರ್ಟ್​ನಲ್ಲಿ ನಿನ್ನೆ ರಾತ್ರಿ ಹರ್ಷಿಕಾ ಅವರ ಸಂಬಂಧಿಕರ ನಿಶ್ಚಿತಾರ್ಥ ನಡೆದಿತ್ತು. ಈ ಸಮಾರಂಭದಲ್ಲಿ ಹರ್ಷಿಕಾ ಅವರೂ ಭಾಗವಹಿಸಿದ್ದರು. ಈ ಸಂದರ್ಭ ಬನ್ಸಿ ನಾಣಯ್ಯ, ಬಿಪಿನ್ ದೇವಯ್ಯ ಎಂಬ ಯುವಕರು ನಟಿ ಹರ್ಷಿಕಾ ಜೊತೆ ಅಸಭ್ಯವಾಗಿ ವರ್ತಿಸಿದ್ದಾರೆ. ದುರ್ವರ್ತನೆ ತೋರಿದ ಇಬ್ಬರ ವಿರುದ್ಧ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

354, 323, 326 ಸೆಕ್ಷನ್ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದ್ದು, ಮಡಿಕೇರಿಯ ಜೆಎಂಎಫ್‌ಸಿ ನ್ಯಾಯಾಲಯಕ್ಕೆ ಬಂಧಿತನನ್ನು ಹಾಜರುಪಡಿಸಲಾಗಿದೆ. ತಲೆಮರೆಸಿಕೊಂಡಿರುವ ಬಿಪಿನ್ ದೇವಯ್ಯನಿಗಾಗಿ ಪೊಲೀಸರಿಂದ ಶೋಧ ಮುಂದುವರಿಸಿದ್ದು, ನೆನ್ನೆ ರಾತ್ರಿ ನಡೆದ ಘಟನೆಯಲ್ಲಿ ಬಿಗ್​ಬಾಸ್​ ಸ್ಪರ್ಧಿ, ನಟ ಭುವನ್ ಗಾಯಗೊಂಡಿದ್ದರು. ನೆನ್ನೆ ರಾತ್ರಿ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಭುವನ್ ಬೆಂಗಳೂರಿಗೆ ತೆರಳಿದ್ದಾರೆ. ಭುವನ್ ಜೊತೆಯಲ್ಲೇ ಹರ್ಷಿಕಾ ಪೂಣಚ್ಚ ಅವರೂ ಬೆಂಗಳೂರಿಗೆ ಮರಳಿದ್ದಾರೆ.

ರಾಯಚೂರಿನಲ್ಲಿ ಮಧು ಪ್ರಕರಣವನ್ನು ಹರ್ಷಿಕಾ ತೀವ್ರವಾಗಿ ಖಂಡಿಸಿದ್ದರು. ಮಧು ಮನೆಯವರಿಗೆ ಕರೆ ಮಾಡಿ ಸಾಂತ್ವನ ಹೇಳಿದ್ದರು. ಜಸ್ಟೀಸ್​ ಫಾರ್ ಮಧು ಹೋರಾಟದಲ್ಲೂ ಹರ್ಷಿಕಾ ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here

- Advertisment -

Most Popular

ದೇಶದಲ್ಲಿ  24 ಗಂಟೆಗಳಲ್ಲಿ 48,648 ಕೊರೋನಾ ಕೇಸ್ ಪತ್ತೆ!

ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 48,648 ಮಂದಿಯಲ್ಲಿ ಕೊರೋನಾ ಸೋಂಕು ಪತ್ತೆಯಾಗಿದೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 80,88,851ಕ್ಕೆ ತಲುಪಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ...

 ಸಿನಿಮೀಯ ರೀತಿಯಲ್ಲಿ ನಗರಸಭೆ ಸದಸ್ಯ ಕಿಡ್ನಾಪ್​!

ಕೊಪ್ಪಳ : ಸಿನಿಮೀಯ ರೀತಿಯಲ್ಲಿ ನಗರಸಭೆ ಸದಸ್ಯನನ್ನು ಕಿಡ್ನಾಪ್ ಮಾಡಲಾಗಿದೆ. ಕಿಡ್ನಾಪ್​ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಕೊಪ್ಪಳ ಜಿಲ್ಲೆಯ ಗಂಗಾವತಿಯಲ್ಲಿ ನವೆಂಬರ್ 2 ರಂದು ನಗರಸಭೆ ಚುನಾವಣೆ ನಡೆಯಲಿದ್ದು, ಗಂಗಾವತಿ ನಗರಸಭೆ ಕಾಂಗ್ರೆಸ್ ಸದಸ್ಯ...

ಅಲಹಬಾದ್​ ಹೈಕೋರ್ಟ್ ನಿಗಾದಲ್ಲಿ ಹತ್ರಾಸ್​ ಗ್ಯಾಂಗ್ ರೇಪ್​ ಕೇಸ್ ತನಿಖೆಗೆ ಸುಪ್ರೀಂ ಆದೇಶ

ನವದೆಹಲಿ : ಉತ್ತರ ಪ್ರದೇಶ ಹತ್ರಾಸ್​​​​ ಗ್ಯಾಂಗ್​ ರೇಪ್​​ ಪ್ರಕರಣದ ತನಿಖೆ ಅಲಹಬಾದ್​ ಹೈಕೋರ್ಟ್​ ನಿಗಾದಲ್ಲಿ ನಡೆಯಬೇಕೆಂದು ಸುಪ್ರೀಂ ಕೋರ್ಟ್​ ಆದೇಶಿಸಿದೆ. ಸದ್ಯ ಸಿಬಿಐ ಪ್ರಕರಣದ ತನಿಖೆಯನ್ನು ನಡೆಸುತ್ತಿದ್ದು, ತನಿಖಾ ತಂಡದಲ್ಲಿರುವ ಅಧಿಕಾರಿಗಳನ್ನು ರಾಜ್ಯದಿಂದ...

ಡಿ.ಬಾಸ್​​ಗಾಗಿ ಕನ್ನಡ ಕಲಿತ ಜಗಮಪತಿ ಬಾಬು..!

ಸಾಲ್ಟ್ ಅಂಡ್ ಪೆಪ್ಪರ್ ಲುಕ್​ನಲ್ಲಿ ಸೌತ್​ನಲ್ಲಿ ಸಂಚಲನ ಸೃಷ್ಠಿಸಿರೋ ಜಗಪತಿ ಬಾಬು, ಮತ್ತೊಂದು ನೂತನ ದಾಖಲೆ ಬರೆದಿದ್ದಾರೆ. ಅದೂ ಡಿ ಬಾಸ್ ದರ್ಶನ್​ಗಾಗಿ ಅನ್ನೋದು ವಿಶೇಷ. ಇಷ್ಟಕ್ಕೂ ಮೋಸ್ಡ್ ಡಿಮ್ಯಾಂಡಿಂಗ್ ಜಗಪತಿ ಬಾಬು...

Recent Comments