Home ರಾಜ್ಯ ಶಿವಮೊಗ್ಗದ ಹೊರವರ್ತುಲ ರಸ್ತೆಗೆ 100 ಕೋಟಿ ರೂ ಅನುದಾನ : ನಾಗರಿಕರ ಪರವಾಗಿ ಡಿ.ಎಸ್ ಅರುಣ್...

ಶಿವಮೊಗ್ಗದ ಹೊರವರ್ತುಲ ರಸ್ತೆಗೆ 100 ಕೋಟಿ ರೂ ಅನುದಾನ : ನಾಗರಿಕರ ಪರವಾಗಿ ಡಿ.ಎಸ್ ಅರುಣ್ ಅಭಿನಂದನೆ

ಶಿವಮೊಗ್ಗ :  ನಗರದ ಹೊರವರ್ತುಲ ರಸ್ತೆಗೆ ರಾಜ್ಯ ಸರ್ಕಾರ 100 ಕೋಟಿ ರೂ. ಅನುದಾನ ಮಂಜೂರು ಮಾಡಿರುವುದಕ್ಕೆ, ಶಿವಮೊಗ್ಗ ನಾಗರಿಕರ ಪರವಾಗಿ, ರಾಜ್ಯ ಆರ್ಯವೈಶ್ಯ ಸಮುದಾಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಡಿ.ಎಸ್. ಅರುಣ್ ಅಭಿನಂದನೆ ಸಲ್ಲಿಸಿದ್ದಾರೆ.

ಸಂಸದ ಬಿ.ವೈ. ರಾಘವೇಂದ್ರ ಅವರ ನಿರಂತರ ಪ್ರಯತ್ನದಿಂದ ಸಿಎಂ ಬಿ.ಎಸ್.ಯಡಿಯೂರಪ್ಪ ಅವರ ನೇತೃತ್ವದ ಸರ್ಕಾರ ಗುರುವಾರ ಬೆಂಗಳೂರಿನಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಹೊರವರ್ತುಲ ರಸ್ತೆಯ ಎರಡನೇ ಹಂತದ ಭೂಸ್ವಾಧೀನಕ್ಕೆ 100 ಕೋಟಿ ರೂ. ಬಿಡುಗಡೆಗೆ ಒಪ್ಪಿಗೆ ನೀಡಿದೆ.  ಶಿವಮೊಗ್ಗ ನಗರದ ಹೊರ ವರ್ತುಲ ರಸ್ತೆ ಯೋಜನೆಯ ಮೊದಲ ಹಂತಕ್ಕೆ ಈಗಾಗಲೇ ಚಾಲನೆ ನೀಡಲಾಗಿದೆ. ರಸ್ತೆ ನಿರ್ಮಾಣ ಕೂಡ ಆರಂಭಗೊಂಡಿದೆ. ಇದೀಗ ಯೋಜನೆಯ ಎರಡನೇ ಹಂತದ ಭೂಸ್ವಾಧೀನ ಪ್ರಕ್ರಿಯೆ ನಡೆಯಬೇಕಿದೆ. ಅದಕ್ಕಾಗಿ ರಾಜ್ಯ ಸರ್ಕಾರ ಹಣ ಮಂಜೂರು ಮಾಡಿದೆ. ಲೋಕಸಭೆ ಸದಸ್ಯ ಬಿ.ವೈ ರಾಘವೇಂದ್ರ ಕೆಲ ತಿಂಗಳ ಹಿಂದೆ 2ನೇ ಹಂತದ ವರ್ತುಲ ರಸ್ತೆ ಅನುಷ್ಠಾನಕ್ಕೆ ಸಂಬಂಧಿಸಿ ಕೇಂದ್ರ ಸಾರಿಗೆ ಹಾಗೂ ಹೆದ್ದಾರಿ ಇಲಾಖೆ ಸಚಿವ ನೀತಿನ್ ಗಡ್ಕರಿಯವರಿಗೆ ಮನವಿ ಮಾಡಿದ್ದರು. ರಾಜ್ಯ ಸರ್ಕಾರದಿಂದಲೂ ಪ್ರಸ್ತಾವನೆ ಸಲ್ಲಿಕೆಯಾಗುವಂತೆ ಮಾಡಿದ್ದರು. ಯೋಜನೆ ಅನುಷ್ಠಾನಕ್ಕೆ ಸಮ್ಮತಿಸಿದ ರಾಷ್ಟ್ರೀಯ ಹೆದ್ದಾರಿ ಇಲಾಖೆಯು ಅಧಿಕಾರಿಗಳ ತಂಡವನ್ನು ಶಿವಮೊಗ್ಗಕ್ಕೆ ಕಳುಹಿಸಿ ವರದಿ ಪಡೆದಿತ್ತು. ಹೊರವರ್ತುಲ ರಸ್ತೆ ಯೋಜನೆ ಜಾರಿಗೆ ಅಗತ್ಯವಾದ ಭೂಸ್ವಾಧೀನ ಹಾಗೂ ಕಾಮಗಾರಿ ವೆಚ್ಚದ ಜಿಎಸ್‍ಟಿ ವಿನಾಯಿತಿ ಕಲ್ಪಿಸಿದರೆ ಕಾಲಮಿತಿಯಲ್ಲಿ ಯೋಜನೆ ಜಾರಿಗೊಳಿಸುವ ಷರತ್ತು ಹಾಕಿತ್ತು.

ಅಂದಹಾಗೆ, ಭೂಸ್ವಾಧೀನಕ್ಕೆ ಬಿ.ವೈರಾಘವೇಂದ್ರ ಅವರು ಸಿಎಂ ಬಿ.ಎಸ್.ಯಡಿಯೂರಪ್ಪ ಅವರಲ್ಲಿ ಮನವಿ ಮಾಡಿದ್ದರು. ಅದರಂತೆ ರಾಜ್ಯ ಸರ್ಕಾರವು ಭೂಸ್ವಾಧೀನಕ್ಕಾಗಿ ಹಣ ಮಂಜೂರು ಮಾಡಿದೆ. ಶಿವಮೊಗ್ಗ ಹೊರವರ್ತುಲ ರಸ್ತೆ ಯೋಜನೆ ಶೀಘ್ರದಲ್ಲೇ ಅನುಷ್ಠಾನಗೊಳ್ಳಲಿದೆ. ಯೋಜನೆ ವೇಗಗತಿಯಲ್ಲಿ ಸಾಗಿ ಆದಷ್ಟು ಬೇಗ ಕಾಮಗಾರಿ ಪೂರ್ಣಗೊಂಡು ನಾಗಕರಿಕರ ಬಳಕೆಗೆ ರಹದಾರಿಯಾಗಲೀ ಎಂದು ಡಿ.ಎಸ್. ಅರುಣ್ ಶಿವಮೊಗ್ಗ ನಾಗರಿಕರ ಪರವಾಗಿ ಅಭಿನಂದಿಸಿದ್ದಾರೆ.

LEAVE A REPLY

Please enter your comment!
Please enter your name here

- Advertisment -

Most Popular

ಡ್ರಗ್ ಜಾಲದ ಹಿಂದೆ ದೊಡ್ಡ ದೊಡ್ಡ ಕುಳಗಳಿವೆ: ಇಂದ್ರಜಿತ್ ಲಂಕೇಶ್

ಬೆಂಗಳೂರು: ಡ್ರಗ್ಸ್ ಜಾಲದ ಹಿಂದೆ ದೊಡ್ಡ ಕುಳಗಳಿವೆ ಎಂದು ಇಂದ್ರಜಿತ್ ಲಂಕೇಶ್ ಕಮೀಷನರ್ ಕಚೇರಿ ಬಳಿ ಹೇಳಿದ್ದಾರೆ. ಡ್ರಗ್ಸ್ ಜಾಲದಲ್ಲಿ ಸಣ್ಣ ಸಣ್ಣ ಮೀನು ಹಿಡಿದಿದ್ದಾರೆ. ಡೊಡ್ಡವರನ್ನು ಹಿಡಿಯಬೇಕು ಎಂದಿದ್ದಾರೆ. ಡಿಸಿಪಿ ಬಸವರಾಜ್ ಅಂಗಡಿ...

‘ಶಾಲಾ ಶುಲ್ಕದ ವಿಚಾರವಾಗಿ ಸರ್ಕಾರಕ್ಕೆ ಡೆಡ್‌ ಲೈನ್ ಕೊಟ್ಟ ಪೋಷಕರು’

ಬೆಂಗಳೂರು: ಖಾಸಗಿ ಶಾಲಾ ಶುಲ್ಕದ ಟಾರ್ಚರ್ ಹಿನ್ನಲೆಯಲ್ಲಿ ಶುಲ್ಕದ ವಿಚಾರವಾಗಿ ಪೋಷಕರು ಸರ್ಕಾರಕ್ಕೆ ಡೆಡ್ ಲೈನ್ ಕೊಟ್ಟಿದ್ದಾರೆ. ಶಾಲಾ ಶುಲ್ಕದ ಬಗ್ಗೆ ಸೂಕ್ತ ನಿರ್ಧಾರ ತೆಗೆದುಕೊಳ್ಳುವಂತೆ ಪೋಷಕರು ಆಗ್ರಹಿಸಿದ್ದಾರೆ. ಈ ಹಿಂದೆ ಮೂರು ಭಾರಿ...

‘ಒಂದೇ ಕುಟುಂಬದ ನಾಲ್ವರು ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ’

ರಾಯಬಾಗ: ರೈಲಿಗೆ ತಲೆ ಕೊಟ್ಟು ಒಂದೇ ಕುಟುಂಬದ 4 ಜನ ಆತ್ಮಹತ್ಯೆ ಮಾಡಿಕೊಂಡ ಆಘಾತಕಾರಿ ಘಟನೆಯೊಂದು ನಡೆದಿದೆ.  ಬೆಳಗಾವಿ ಜಿಲ್ಲೆ ರಾಯಬಾಗ ರೈಲು ನಿಲ್ದಾಣ ಬಳಿ ಈ ಘಟನೆ ನಡೆದಿದ್ದು,  ವೃದ್ಧ ತಂದೆ, ತಾಯಿ,...

ಕುಡಿದ ಮತ್ತಿನಲ್ಲಿ ಜಗಳ ಯುವಕರಿಬ್ಬರ ಮೇಲೆ ಮಾರಾಣಾಂತಿಕ ಹಲ್ಲೆ : ಓರ್ವ ಸಾವು

ಶಿವಮೊಗ್ಗ: ಕುಡಿದ ಮತ್ತಿನಲ್ಲಿ ಬೆಳೆದ ಮಾತಿಗೆ ಮಾತು, ಓರ್ವನ ಕೊಲೆಯಲ್ಲಿ ಅಂತ್ಯವಾಗಿದೆ.  ನಗರದ ಎನ್.ಟಿ. ರಸ್ತೆಯ ಸುಂದರ ಆಶ್ರಯ ಪಕ್ಕದ ವಿಠಲ ದೇವಾಲಯದ ಬಳಿಯೇ ಈ ಘಟನೆ ನಡೆದಿದ್ದು, ಐದಾರು ಯುವಕರ ತಂಡ...

Recent Comments