Home ರಾಜ್ಯ ಇತರೆ ಮಂಡ್ಯದಲ್ಲಿ ಸುಮಲತಾ ಗೆದ್ದಿದ್ದಕ್ಕೆ ಶಿವಮೊಗ್ಗದಲ್ಲಿ ಬಾಡೂಟ..!

ಮಂಡ್ಯದಲ್ಲಿ ಸುಮಲತಾ ಗೆದ್ದಿದ್ದಕ್ಕೆ ಶಿವಮೊಗ್ಗದಲ್ಲಿ ಬಾಡೂಟ..!

ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಮಂಡ್ಯ ಕ್ಷೇತ್ರವೇ, ಒಂದು ರೀತಿಯಲ್ಲಿ ಇಂಡ್ಯ ಎಂಬ ಪರಿಸ್ಥಿತಿ ನಿರ್ಮಾಣವಾಗಿತ್ತು. ಮಂಡ್ಯ ಇಡೀ ದೇಶದ ಗಮನವನ್ನು ಸೆಳೆದಿತ್ತು. ನಿಖಿಲ್ ಕುಮಾರಸ್ವಾಮಿ ಮತ್ತು ಸುಮಲತಾ ನಡುವಿನ ಸ್ಪರ್ಧೆ ನಾಡಿನ ಜನರಿಗೆ ತುದಿಗಾಲಲ್ಲಿ ಕೂರುವಂತೆ, ಮಾಡಿತ್ತು. ಸುಮಲತಾ ಹಾಗೂ ನಿಖಿಲ್ ಅಭಿಮಾನಿಗಳು ತಮ್ಮ ನೆಚ್ಚಿನ ನಾಯಕರು ಗೆಲ್ಲಲಿ ಅಂತ ಹರಕೆ, ಬೆಟ್ಟಿಂಗ್ ಸೇರಿದಂತೆ, ವಿವಿಧ ರೀತಿಯಲ್ಲಿ ತಮ್ಮ ನಾಯಕರ ಪರವಾಗಿ ಬ್ಯಾಟಿಂಗ್ ನಡೆಸಿದ್ರು. ಆದ್ರೆ, ಇಲ್ಲೊಬ್ಬ ಅಂಬರೀಷ್ ಅವರ ಕಟ್ಟಾ ಅಭಿಮಾನಿ, ಸುಮಲತಾ ಗೆದ್ದಿದ್ದಕ್ಕೆ ಬಾಡೂಟ ಹಾಕಿಸಿದ್ದಾರೆ.
ಹೌದು ಮಂಡ್ಯದಲ್ಲಿ ನಿಖಿಲ್ ಕುಮಾರಸ್ವಾಮಿ ವಿರುದ್ಧ ಸುಮಲತಾ ಅಂಬರೀಷ್ ಗೆದ್ದಿದ್ದಕ್ಕೆ, ಶಿವಮೊಗ್ಗದಲ್ಲಿ, ಅಂಬರೀಷ್ ಅಭಿಮಾನಿಯೊಬ್ರು, 2 ಕುರಿ ಕಡಿದು ಬಾಡೂಟ ಹಾಕಿಸಿದ್ದಾರೆ. ನಗರದ ಜೆ.ಹೆಚ್. ಪಟೇಲ್ ನಿವಾಸಿಯಾಗಿರುವ ಹನುಮಂತಪ್ಪ ಅವರು ಮಂಡ್ಯದಲ್ಲಿ ಸುಮಲತಾ ಗೆದ್ದರೆ, ಬಾಡೂಟ ಹಾಕಿಸುತ್ತೇನೆ ಎಂದು ಚುನಾವಣೆ ಸಂದರ್ಭದಲ್ಲಿ ತಮ್ಮ ಸ್ನೇಹಿತರಿಗೆ ಭಾಷೆ ನೀಡಿದ್ದರಂತೆ.  ಆ ಮಾತನ್ನ ಉಳಿಸಿಕೊಳ್ಳಲು, ಹನುಮಂತಪ್ಪ, ಈಗ ಬಾಡೂಟ ಹಾಕಿಸಿ, ತಾವು ಕೊಟ್ಟ ಮಾತನ್ನ ಉಳಿಸಿಕೊಂಡಿದ್ದಾರೆ.
ಸುಮಾರು 200 ರಿಂದ 250 ಜನರಿಗೆ ಬಾಡೂಟ ಹಾಕಿಸಿದ್ದಾರೆ. ಚುನಾವಣೆಯಲ್ಲಿ ಸುಮಲತಾ ಗೆಲ್ಲಲಿ ಅಂತ ದೇವರಿಗೆ ಹರಕೆಯನ್ನೂ ಕಟ್ಟಿಕೊಂಡಿದ್ದರಂತೆ.
ಒಟ್ಟಿನಲ್ಲಿ, ಮಂಡ್ಯದಲ್ಲಿ ಸುಮಲತಾ ಗೆಲುವಿನ ನಗೆ ಬೀರಿದ್ದಕ್ಕೆ, ಶಿವಮೊಗ್ಗದಲ್ಲಿ ಹನುಮಂತಪ್ಪ ಸ್ನೇಹಿತರು ಬಾಡೂಟ ಸವಿದು ಬಾಯಿ ಚಪ್ಪರಿಸಿದ್ದಾರೆ.

LEAVE A REPLY

Please enter your comment!
Please enter your name here

- Advertisment -

Most Popular

ದೇಶದಲ್ಲಿ  24 ಗಂಟೆಗಳಲ್ಲಿ 48,648 ಕೊರೋನಾ ಕೇಸ್ ಪತ್ತೆ!

ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 48,648 ಮಂದಿಯಲ್ಲಿ ಕೊರೋನಾ ಸೋಂಕು ಪತ್ತೆಯಾಗಿದೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 80,88,851ಕ್ಕೆ ತಲುಪಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ...

 ಸಿನಿಮೀಯ ರೀತಿಯಲ್ಲಿ ನಗರಸಭೆ ಸದಸ್ಯ ಕಿಡ್ನಾಪ್​!

ಕೊಪ್ಪಳ : ಸಿನಿಮೀಯ ರೀತಿಯಲ್ಲಿ ನಗರಸಭೆ ಸದಸ್ಯನನ್ನು ಕಿಡ್ನಾಪ್ ಮಾಡಲಾಗಿದೆ. ಕಿಡ್ನಾಪ್​ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಕೊಪ್ಪಳ ಜಿಲ್ಲೆಯ ಗಂಗಾವತಿಯಲ್ಲಿ ನವೆಂಬರ್ 2 ರಂದು ನಗರಸಭೆ ಚುನಾವಣೆ ನಡೆಯಲಿದ್ದು, ಗಂಗಾವತಿ ನಗರಸಭೆ ಕಾಂಗ್ರೆಸ್ ಸದಸ್ಯ...

ಅಲಹಬಾದ್​ ಹೈಕೋರ್ಟ್ ನಿಗಾದಲ್ಲಿ ಹತ್ರಾಸ್​ ಗ್ಯಾಂಗ್ ರೇಪ್​ ಕೇಸ್ ತನಿಖೆಗೆ ಸುಪ್ರೀಂ ಆದೇಶ

ನವದೆಹಲಿ : ಉತ್ತರ ಪ್ರದೇಶ ಹತ್ರಾಸ್​​​​ ಗ್ಯಾಂಗ್​ ರೇಪ್​​ ಪ್ರಕರಣದ ತನಿಖೆ ಅಲಹಬಾದ್​ ಹೈಕೋರ್ಟ್​ ನಿಗಾದಲ್ಲಿ ನಡೆಯಬೇಕೆಂದು ಸುಪ್ರೀಂ ಕೋರ್ಟ್​ ಆದೇಶಿಸಿದೆ. ಸದ್ಯ ಸಿಬಿಐ ಪ್ರಕರಣದ ತನಿಖೆಯನ್ನು ನಡೆಸುತ್ತಿದ್ದು, ತನಿಖಾ ತಂಡದಲ್ಲಿರುವ ಅಧಿಕಾರಿಗಳನ್ನು ರಾಜ್ಯದಿಂದ...

ಡಿ.ಬಾಸ್​​ಗಾಗಿ ಕನ್ನಡ ಕಲಿತ ಜಗಮಪತಿ ಬಾಬು..!

ಸಾಲ್ಟ್ ಅಂಡ್ ಪೆಪ್ಪರ್ ಲುಕ್​ನಲ್ಲಿ ಸೌತ್​ನಲ್ಲಿ ಸಂಚಲನ ಸೃಷ್ಠಿಸಿರೋ ಜಗಪತಿ ಬಾಬು, ಮತ್ತೊಂದು ನೂತನ ದಾಖಲೆ ಬರೆದಿದ್ದಾರೆ. ಅದೂ ಡಿ ಬಾಸ್ ದರ್ಶನ್​ಗಾಗಿ ಅನ್ನೋದು ವಿಶೇಷ. ಇಷ್ಟಕ್ಕೂ ಮೋಸ್ಡ್ ಡಿಮ್ಯಾಂಡಿಂಗ್ ಜಗಪತಿ ಬಾಬು...

Recent Comments