Home ರಾಜ್ಯ ಶಿವಮೊಗ್ಗ ಜಿಲ್ಲಾ ನ್ಯಾಯಾಲಯ ಮಹತ್ವದ ತೀರ್ಪು : ಅಪಘಾತ ಕುಟುಂಬಕ್ಕೆ 80 ಲಕ್ಷ ಪರಿಹಾರ

ಶಿವಮೊಗ್ಗ ಜಿಲ್ಲಾ ನ್ಯಾಯಾಲಯ ಮಹತ್ವದ ತೀರ್ಪು : ಅಪಘಾತ ಕುಟುಂಬಕ್ಕೆ 80 ಲಕ್ಷ ಪರಿಹಾರ

ಶಿವಮೊಗ್ಗ: ಶಿವಮೊಗ್ಗ ಮೂಲದ ಸಹನಾ ಎಂಬುವವರು ತಮ್ಮ ಕುಟುಂಬದೊಂದಿಗೆ ಮೂಡಿಗೆರೆಯಲ್ಲಿ ಪ್ರಯಾಣ ಮಾಡುತ್ತಿದ್ದಾಗ ಆಕಸ್ಮಿಕವಾಗಿ ಬಸ್ ಅಪಘಾತಕ್ಕೊಳಗಾಗಿ ತಮ್ಮ ಪತಿಯನ್ನು ಕಳೆದುಕೊಂಡಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿವಮೊಗ್ಗದ ಘನ ನ್ಯಾಯಾಲಯದಲ್ಲಿ ದಾಖಲಾದ ಪ್ರಕರಣವನ್ನು ಇಂದಿನ ಲೋಕ ಅದಾಲತ್‍ನಲ್ಲಿ ದೂರುದಾರರು ಹಾಗೂ ವಿಮಾ ಕಂಪನಿಗಳ ಮುಖ್ಯಸ್ಥರನ್ನು ಕರೆದು ನ್ಯಾಯಾಧೀಶರು ವಿಚಾರಣೆ ನಡೆಸಿದ್ದರ ಫಲವಾಗಿ ವಿಮಾ ಕಂಪನಿಯು 80 ಲಕ್ಷ ರೂ.ಗಳ ಪರಿಹಾರ ಧನವನ್ನು ನೀಡಲು ನ್ಯಾಯಾಲಯವು ಆದೇಶ ಹೊರಡಿಸಿದೆ. 

ಇಂದಿನ ಲೋಕ ಅದಾಲತ್‍ಗೆ ಸಂಬಂಧಿಸಿದಂತೆ ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶ ಮುಸ್ತಫಾ ಹುಸೇನ್ ಅವರು ಮಾಧ್ಯಮಗಳಿಗೆ ಮಾಹಿತಿ ನೀಡಿ, ಮೋಟಾರು ವಾಹನ ಅಪಘಾತ ಪ್ರಕರಣಗಳಲ್ಲಿ ಅತಿ ಹೆಚ್ಚು ಮೊತ್ತ ಘೋಷಿಸಿದ ರಾಜ್ಯದಲ್ಲಿಯೇ ವಿಶೇಷ ಪ್ರಕರಣ ಇದಾಗಿದೆ ಎಂದರು.

ಸದರಿ ಪ್ರಕರಣದಲ್ಲಿ ದೂರುದಾರರು ಇನ್ಶೂರೆನ್ಸ್ ಕಂಪನಿಯವರಿಂದ 1.20 ಕೋಟಿ ರೂ.ಗಳ ಪರಿಹಾರ ನೀಡುವಂತೆ ನ್ಯಾಯಾಲಯಕ್ಕೆ ಮನವಿ ಮಾಡಿದ್ದರು ಎಂದ ಅವರು, ಈ ಬಾರಿಯ ಲೋಕ ಅದಾಲತ್‍ನಲ್ಲಿ ಮೋಟಾರು ವಾಹನಗಳ ಒಟ್ಟು 1800 ಪ್ರಕರಣಗಳಲ್ಲಿ 595 ಪ್ರಕರಣಗಳನ್ನು ಕೈಗೆತ್ತಿಕೊಳ್ಳಲಾಗಿದ್ದು, ಅವುಗಳಲ್ಲಿ ಸುಮಾರು 125 ಕ್ಕೂ ಹೆಚ್ಚಿನ ಪ್ರಕರಣಗಳು ಇತ್ಯರ್ಥಗೊಳ್ಳಲಿವೆ ಎಂದರು.

ಅಲ್ಲದೇ ನ್ಯಾಯಾಲಯದ ವಿವಿಧ ಶಾಖೆಗಳಲ್ಲಿ ಈವರೆಗೆ ದಾಖಲಾಗಿರುವ ಮೊಕದ್ದಮೆಗಳಲ್ಲಿ ರಾಜೀಸಂಧಾನದ ಮೂಲಕ ಇತ್ಯರ್ಥ ಪಡಿಸಬಹುದಾದವು ಗಳನ್ನು ಗುರುತಿಸಿ ಅಂತಹ ಮೊಕದ್ದಮೆಗಳನ್ನು ಕೈಗೆತ್ತಿಕೊಂಡು ಲೋಕ ಅದಾಲತ್‍ನಲ್ಲಿ ಉಭಯ ಪಕ್ಷಗಳ ಕಕ್ಷಿದಾರರ ಅಪೇಕ್ಷೆಯಂತೆ ಇತ್ಯರ್ಥಪಡಿಸಲಾಗುವುದು ಎಂದ ಅವರು ಮುಂದಿನ ದಿನಗಳಲ್ಲಿ ಇನ್ನಷ್ಟು ಪ್ರಕರಣಗಳನ್ನು ಕೈಗೆತ್ತಿಕೊಂಡು ನ್ಯಾಯವಾದಿಗಳು ಹಾಗೂ ನ್ಯಾಯಾಧೀಶರ ಸಹಕಾರದೊಂದಿಗೆ ಇತ್ಯರ್ಥ ಪಡಿಸುವ ಆಶಯ ತಮಗಿರುವುದಾಗಿ ಅವರು ತಿಳಿಸಿದರು.

ನ್ಯಾಯಾಲಯಕ್ಕೆ ದಾಖಲಾಗುವ ಸಿವಿಲ್ ಮತ್ತು ಕ್ರಿಮಿನಲ್ ಸೇರಿದಂತೆ ವಿವಿಧ ಮಾದರಿಯ ಪ್ರಕರಣಗಳನ್ನು ರಾಜೀ ಸಂಧಾನದ ಮೂಲಕ ಲೋಕ ಅದಾಲತ್‍ನಲ್ಲಿ ಇತ್ಯರ್ಥಪಡಿಸುವ ಸದುದ್ದೇಶದಿಂದ ಸರ್ವೋಚ್ಚ ನ್ಯಾಯಾಲಯದ ಮಾರ್ಗದರ್ಶನದಂತೆ ಕಾಲ ಕಾಲಕ್ಕೆ ಲೋಕ ಅದಾಲತ್‍ನ್ನು ಏರ್ಪಡಿಸಿ, ತ್ವರಿತ ಹಾಗೂ ಶೀಘ್ರಗತಿಯ ನ್ಯಾಯದಾನ ನೀಡಲು ಹಾಗೂ ಪ್ರಕರಣಗಳನ್ನು ಇತ್ಯರ್ಥಪಡಿಸಲಾಗುತ್ತಿದೆ ಎಂದು ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶ ಮುಸ್ತಫಾ ಹುಸೇನ್ ಅವರು ಹೇಳಿದರು.

LEAVE A REPLY

Please enter your comment!
Please enter your name here

- Advertisment -

Most Popular

ಪರೀಕ್ಷೆ ಬೇಡ ಅಂತ ಕಾನೂನು ವಿದ್ಯಾರ್ಥಿಗಳ ಪ್ರತಿಭಟನೆ

ಬೆಂಗಳೂರು : ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾನಿಲಯ ಹಿಂದಿನ ಸೆಮಿಸ್ಟರ್ ವಿದ್ಯಾರ್ಥಿಗಳಿಗೆ ಭೌತಿಕ ಪರೀಕ್ಷೆ ನಡೆಸಲು ಸಿದ್ಧತೆ ನಡೆಸಿದೆ, ಇದನ್ನು ಖಂಡಿಸಿ ನಗರದ ಮೌರ್ಯ ಸರ್ಕಲ್​ನಲ್ಲಿ  ಎನ್​​​ಎಸ್​​ಯುಐ ಸಂಘಟನೆ ಪ್ರತಿಭಟನೆ ನಡೆಸಿತು. ರಾಜ್ಯ...

ಸಚಿವ ಶಾಸಕರುಗಳ ಗುಪ್ತ ಗುಪ್ತ ಸಭೆ

ಚಿಕ್ಕಮಗಳೂರು : ಸಂಪುಟ ವಿಸ್ತರಣೆ ಖಾತೆ ಹಂಚಿಕೆ ಅಸಮಾಧಾನದ ಬೇಗುದಿ ಮಧ್ಯೆ ಬಿಜೆಪಿಯೊಳಗೆ ಹೊಸ ಬಂಡಾಯ ಬೂದಿ ಮುಚ್ಚಿದಂತೆ ಇದೆ ಪಕ್ಷದೊಳಗೆ ಒಂದೆರಡಲ್ಲ, ಹಲವು ಬಣಗಳು ರೂಪುಗೊಂಡಂತೆ ತೋರುತ್ತಿವೆ. ಸಚಿವ ಸ್ಥಾನ ಸಿಗದವರದ್ದು...

ಮಗಳಿಂದ ತಂದೆಯ ಅಂತ್ಯ ಸಂಸ್ಕಾರ

ಕಾರವಾರ : ಹೃದಯಾಘಾತದಿಂದ ಮೃತಪಟ್ಟಿದ್ದ ತಂದೆಯ ಅಂತ್ಯ ಸಂಸ್ಕಾರವನ್ನು ಮಗಳೇ ನೆರವೇರಿಸಿದ ಘಟನೆ ತಾಲೂಕಿನ ಮಲ್ಲಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುರ್ನಿಪೇಟೆಯಲ್ಲಿ ನಡೆದಿದೆ.ಕುರ್ನಿಪೇಟೆಯ ಚಂದ್ರಕಾಂತ ಬುದೊ ಪಾಗಿ (56) ಹೃದಯಾಘಾತದಿಂದ ಮೃತಪಟ್ಟಿದ್ದರು. 9...

ಉದ್ಧವ್ ಠಾಕ್ರೆ ಹೇಳಿಕೆಗೆ ಸಿಲಿಕಾನ್ ಸಿಟಿ ಮರಾಠಿಗರಿಂದ ವಿರೋಧ

ಬೆಂಗಳೂರು : ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ಹೇಳಿಕೆಗೆ ದಿನ ದಿನಕ್ಕೆ ಪ್ರತಿಭಟನೆಗಳು ಜಾಸ್ತಿಯಾಗುತ್ತಿವೆ. ಇವತ್ತು ನಗರದ ಮೌರ್ಯ ಸರ್ಕಲ್​ನಲ್ಲಿ ಸಿಲಿಕಾನ್ ಸಿಟಿಯ ಮರಾಠಿಗರೆಲ್ಲಾ ಒಂದೆಡೆ ಸೇರಿ ತೀವ್ರ ವಿರೋಧ ವ್ಯಕ್ತ ಪಡಿಸಿದ್ರು....

Recent Comments