Home ರಾಜ್ಯ ಮಲೆನಾಡಿನಲ್ಲಿ ವರ್ಷಧಾರೆಗೆ ಬಿಡುವು | ಜಲಾಶಯಗಳಲ್ಲಿ ವ್ಯಾಪಕ ಪ್ರಮಾಣದಲ್ಲಿ ಹರಿದು ಬಂದ ನೀರು

ಮಲೆನಾಡಿನಲ್ಲಿ ವರ್ಷಧಾರೆಗೆ ಬಿಡುವು | ಜಲಾಶಯಗಳಲ್ಲಿ ವ್ಯಾಪಕ ಪ್ರಮಾಣದಲ್ಲಿ ಹರಿದು ಬಂದ ನೀರು

ಶಿವಮೊಗ್ಗ :  ಜಿಲ್ಲೆಯಲ್ಲಿ ಕಳೆದೆರೆಡ್ಮೂರು ದಿನಗಳಿಂದ ವರ್ಷಧಾರೆ, ಬಿಡುವು ನೀಡಿದೆ. ತುಂಗಾ, ಭದ್ರಾ, ಶರಾವತಿ ನದಿಪಾತ್ರದಲ್ಲಿ ಮಳೆ ಕುಂಠಿತವಾಗಿರುವುದರಿಂದ ನದಿ ಹರಿವಿನಲ್ಲೂ ಗಣನೀಯ ಪ್ರಮಾಣದಲ್ಲಿ ಇಳಿಕೆಯಾಗಿದೆ.

ಕಳೆದ ನಾಲ್ಕೈದು ದಿನಗಳಿಂದ ಮಲೆನಾಡು ಹಾಗೂ ಪಶ್ಚಿಮಘಟ್ಟ ಪ್ರದೇಶ ಸೇರಿದಂತೆ ಜಿಲ್ಲೆಯ ವಿವಿಧೆಡೆ ಮಳೆ ಚುರುಕುಗೊಂಡಿತ್ತು. ನದಿಗಳ ಒಳಹರಿವು ಹೆಚ್ಚಳವಾದ ಹಿನ್ನಲೆಯಲ್ಲಿ ಜಿಲ್ಲೆ ಪ್ರಮುಖ ಜಲಾಶಯಗಳಿಗೆ ವ್ಯಾಪಕ ಪ್ರಮಾಣದಲ್ಲಿ ನೀರು ಹರಿದು ಬಂದಿದೆ. ಈಗಾಗಲೇ ಗಾಜನೂರಿನ ತುಂಗಾ ಜಲಾಶಯ ಸಂಪೂರ್ಣ ಭರ್ತಿಯಾಗಿದ್ದರೆ, ಭದ್ರಾ ಜಲಾಶಯ ಭರ್ತಿಯಾಗುವುದಕ್ಕೆ ಕ್ಷಣಗಣನೆ ಆರಂಭವಾಗಿದ್ದರೆ, ಲಿಂಗನಮಕ್ಕಿ ಜಲಾಶಯ ತುಂಬಲು ಇನ್ನು 16 ಅಡಿಯಷ್ಟು ನೀರು ಹರಿದುಬರಬೇಕಿದೆ.

ಶುಕ್ರವಾರ ಬೆಳಗ್ಗೆ ವೇಳೆಗೆ ತುಂಗಾ ನದಿ ಒಳಹರಿವು 23176 ಕ್ಯುಸೆಕ್‍ನಷ್ಟಿದ್ದರೆ, ಅಷ್ಟೇ ಪ್ರಮಾಣದ ನೀರನ್ನು ನದಿಗೆ ಹರಿಸಲಾಗುತ್ತಿದೆ. ರಾಜ್ಯ ಪ್ರಮುಖ ವಿದ್ಯುತ್ ಉತ್ಪಾದನಾ ಕೇಂದ್ರಗಳಲ್ಲಿ ಒಂದಾದ ಲಿಂಗನಮಕ್ಕಿ ಜಲಾಶಯಕ್ಕೆ 21,311 ಕ್ಯುಸೆಕ್‍ನಷ್ಟು ನೀರು ಹರಿಬರುತ್ತಿದೆ. ಜಲಾಶಯದ ಗರಿಷ್ಠ ಮಟ್ಟ 1,819 ಅಡಿ ಇದ್ದರೆ, 1,803 ಅಡಿ ಭರ್ತಿಯಾಗಿದೆ. ಜಲಾನಯನ ಪ್ರದೇಶದಲ್ಲಿ 11.20 ಮಿ.ಮೀ. ಮಳೆಯಾಗಿದೆ. ಗರಿಷ್ಠ 186 ಅಡಿ ಎತ್ತರದ ಭದ್ರಾ ಜಲಾಶಯ ಭರ್ತಿಯಾಗಲು ಕೇವಲ 5 ಅಡಿ ನೀರು ಬೇಕಿದೆ. ಜಲಾಶಯಕ್ಕೆ 7341 ಕ್ಯುಸೆಕ್‍ನಷ್ಟು ನೀರು ಹರಿದುಬರುತ್ತಿದ್ದರೆ. 2,712 ಕ್ಯುಸೆಕ್‍ನಷ್ಟು ನೀರನ್ನು ಜಲಾಶಯದಿಂದ ಹೊರ ಹರಿಸಲಾಗುತ್ತಿದೆ. ಜಲಾನಯನ ಪ್ರದೇಶದಲ್ಲಿ 10.6 ಮಿ.ಮೀ. ಮಳೆಯಾಗಿದೆ.

– ಗೋ.ವ. ಮೋಹನಕೃಷ್ಣ 

LEAVE A REPLY

Please enter your comment!
Please enter your name here

- Advertisment -

Most Popular

5 ವರ್ಷದ ಬಾಲಕಿ ಕಾಣೆ

ಬೆಂಗಳೂರು : ನಗರದ ಮೆಜೆಸ್ಟಿಕ್ ಬಸ್ ನಿಲ್ದಾಣದಲ್ಲಿ 5 ವರ್ಷದ ಬಾಲಕಿ ಕಾಣೆಯಾಗಿದ್ದಾಳೆ. ಲೋಕಿತ ಕೆ.ಮರನ್ ಕಾಣೆಯಾಗಿರುವ ಬಾಲಕಿ‌. ಈಕೆ ತನ್ನ ತಾತನ ಜೊತೆ ಸೆ.18 ರಂದು ಮನೆಯಿಂದ ತೆರಳಿದ್ದಳು. ಮೆಜೆಸ್ಟಿಕ್ ನಿಲ್ದಾಣದಲ್ಲಿ...

ಅಕ್ಕ ಗೌರಿ ಲಂಕೇಶ್​ರನ್ನು ನೆನೆದು ಕಣ್ಣೀರಿಟ್ಟ ಇಂದ್ರಜಿತ್ ಲಂಕೇಶ್..!

ಬೆಂಗಳೂರು : ಸ್ಯಾಂಡಲ್​​ವುಡ್​ ಡ್ರಗ್ಸ್​ ಮಾಫಿಯಾ ವಿಚಾರಕ್ಕೆ ಸಂಬಂಧಿಸಿದಂತೆ ಸೋಮವಾರ ಸಿಸಿಬಿ ವಿಚಾರಣೆ ಎದುರಿಸಿದ್ದ ನಿರ್ದೇಶಕ ಇಂದ್ರಜಿತ್ ಲಂಕೇಶ್ ಇಂದು ಮತ್ತೊಮ್ಮೆ ಸಿಸಿಬಿ ಅಧಿಕಾರಿಗಳ ಮುಂದೆ ಹಾಜರಾಗುತ್ತಿದ್ದಾರೆ.  ಇಂದು ಸಿಸಿಬಿ ವಿಚಾರಣೆಗೆ ಹೋಗುವ...

ಸ್ಯಾಂಡಲ್​​ವುಡ್​​​​​ನಲ್ಲಿ ಡ್ರಗ್​ ಮಾಫಿಯಾ : ಇಂದು ಸಿಸಿಬಿಯಿಂದ ನಟಿ ರಾಗಿಣಿ ವಿಚಾರಣೆ

ಬೆಂಗಳೂರು :  ಸ್ಯಾಂಡಲ್​​​​ವುಡ್​​ನಲ್ಲಿ ಡ್ರಗ್​​ ಮಾಫಿಯಾದ ಬಗ್ಗೆ ಬಿಸಿಬಿಸಿ ಚರ್ಚೆ ನಡೀತಾ ಇದೆ. ಚಂದನವನಕ್ಕೆ ಮಾದಕ ಜಾಲ ಹಬ್ಬಿದೆಯೇ ಅಥವಾ ಇಲ್ಲವೇ ಅನ್ನೋದು ಸದ್ಯದ ಗಾಂಧಿನಗರದ ಹಾಟ್ ಸುದ್ದಿ. ಇದಕ್ಕೆ ಸಂಬಂಧಿಸಿದಂತೆ ನಟಿ ರಾಗಿಣಿ...

ಕೊರೋನಾದಿಂದ ಮಾಜಿ ಶಾಸಕ ಅಪ್ಪಾಜಿ ಗೌಡ ನಿಧನ

ಶಿವಮೊಗ್ಗ : ಭದ್ರಾವತಿಯ ಜೆಡಿಎಸ್ ನ ಮಾಜಿ ಶಾಸಕ ಅಪ್ಪಾಜಿಗೌಡ ವಿಧಿವಶರಾಗಿದ್ದಾರೆ. ಕಳೆದ ಕೆಲ ದಿನಗಳಿಂದ ಕೊರೋನಾ ಸೋಂಕಿಗೆ ಒಳಗಾಗಿದ್ದ ಅವರು,  ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ. ಅಪ್ಪಾಜಿಗೌಡರಿಗೆ 69 ವರ್ಷ ವಯಸ್ಸಾಗಿತ್ತು. ಪತ್ನಿ...

Recent Comments