Home ರಾಜ್ಯ ಮಲೆನಾಡಿನಲ್ಲಿ ವರ್ಷಧಾರೆ ವೈಭವ ; ಕಣ್ಮನ ಸೆಳೆಯುತ್ತಿದೆ ಜೋಗ ಜಲಪಾತ

ಮಲೆನಾಡಿನಲ್ಲಿ ವರ್ಷಧಾರೆ ವೈಭವ ; ಕಣ್ಮನ ಸೆಳೆಯುತ್ತಿದೆ ಜೋಗ ಜಲಪಾತ

 ಶಿವಮೊಗ್ಗ : ರಾಜ್ಯಕ್ಕೆ ಬೆಳಕು ನೀಡುವಲ್ಲಿ ಪ್ರಮುಖ ಪಾತ್ರ ವಹಿಸಿರುವ ಲಿಂಗನಮಕ್ಕಿ ಜಲಾನಯನ ಪ್ರದೇಶದಲ್ಲಿ ಆಶ್ಲೇಷ ಮಳೆಯ ಅಬ್ಬರ ಹೆಚ್ಚಾಗಿದೆ. ಈ ಹಿನ್ನೆಲೆಯಲ್ಲಿ, ಜಗದ್ವಿಖ್ಯಾತ ಜೋಗ ಜಲಪಾತ, ಮೈದುಂಬುತ್ತಿದ್ದು, ಮಂಜು ಮುಸುಕಿನ ಚೆಲ್ಲಾಟದ ನಡುವೆ ಜೋಗ ಜಲಪಾತ ಕಂಗೊಳಿಸುತ್ತಿದೆ.

ಶರಾವತಿ ಜಲಾನಯನ ಪ್ರದೇಶದಲ್ಲಿ ಕಳೆದ ಮೂರ್ನಾಲ್ಕು ದಿನಗಳಿಂದ ಮಳೆ ಸುರಿಯುತ್ತಿದ್ದು, ಜಲಪಾತದ ಸೊಬಗು ಹೆಚ್ಚಾಗಿದೆ. ರಾಜಾ, ರೋರರ್, ರಾಕೆಟ್, ರಾಣಿ ಕವಲುಗಳಲ್ಲಿ ಬೃಹತ್ ಪ್ರಮಾಣದಲ್ಲಿ ಜಲಧಾರೆ ಆರ್ಭಟಿಸುತ್ತಿದೆ. ಅಂದಹಾಗೆ, ಈ ಮನಮೋಹಕ ದೃಶ್ಯವನ್ನು, ಕಣ್ತುಂಬಿಕೊಳ್ಳಲು, ಪ್ರವಾಸಿಗರು ಒಂದಿಷ್ಟು ಹೊತ್ತು ಕಾಯುವುದು ಅನಿವಾರ್ಯವಾಗಿದೆ.

ಕಳೆದ ಮಳೆಗಾಲದ ನೆರೆ ಬಳಿಕ ಜನರಿಲ್ಲದೇ ನೀರವವಾಗಿದ್ದ ಜೋಗ ಜಲಪಾತದಲ್ಲಿ ಇದೀಗ ನೀರಿನ ಪ್ರಮಾಣ ಏರಿಕೆಯಾಗಿದೆ. ಈ ನೀರಿನಾಟ, ಜೋಗದ ಸೊಬಗು ಕಣ್ತುಂಬಿಕೊಳ್ಳಲು ಪ್ರವಾಸಿಗರ ಕೊರತೆ ಎದ್ದು ಕಾಣುತ್ತಿದೆ. ಕೊರೋನಾ ಸೋಂಕು ಭೀತಿ ಹಿನ್ನೆಲೆಯಲ್ಲಿ, ರಾಜ್ಯ ಸರ್ಕಾರ, ಪ್ರವಾಸಿ ತಾಣಗಳಿಗೆ ಪ್ರವಾಸಿಗರ ಭೇಟಿ ನಿಷೇಧ ಮಾಡಿದ್ದು, ಈ ಹಿನ್ನೆಲೆಯಲ್ಲಿ, ಪ್ರವಾಸಿಗರಿಲ್ಲದೇ, ಜೋಗದ ಪರಿಸರ ಭಣಗುಡುತ್ತಿದೆ. ಜಲಪಾತದ ರಮಣೀಯ ದಶ್ಯವನ್ನು ನೋಡಿ ಆನಂದಿಸಲು ಜನರೇ ಇಲ್ಲದಂತಾಗಿದೆ.

ಇನ್ನು ಮಲೆನಾಡು ಭಾಗದಲ್ಲಿ ಕಳೆದೆರೆಡು ದಿನಗಳಿಂದ ಸುರಿಯುತ್ತಿರುವ ಜೋರು ಮಳೆಯಿಂದಾಗಿ ಲಿಂಗನಮಕ್ಕಿ ಜಲಾಶಯಕ್ಕೆ 3 ವರೆ ಅಡಿ, ನೀರು ಬಂದಿದೆ. ಲಿಂಗನಮಕ್ಕಿ ಜಲಾಶಯದ ಒಳಹರಿವು 60,000 ಕ್ಯೂಸೆಕ್‌ಗೆ ಏರಿಕೆಯಾಗಿದ್ದು ನೀರಿನ ಮಟ್ಟ 1777.70 ಅಡಿಗೆ, ಏರಿಕೆಯಾಗಿದೆ. ನಾಲ್ಕು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯ ಕಾರಣ ಶರಾವತಿ ಜಲವಿದ್ಯುದಾಗರಕ್ಕೆ ನೀರು ಪೂರೈಕೆ ಮಾಡುವ ತಳಕಳಲೆ ಜಲಾಶಯಕ್ಕೆ ಬೆಟ್ಟ ಗುಡ್ಡಗಳಿಂದ ಹರಿದು ಬರುತ್ತಿರುವ ನೀರಿನ ಪ್ರಮಾಣ ಹೆಚ್ಚಾಗಿದೆ.

ಲಿಂಗನಮಕ್ಕಿ ಜಲಾಶಯ ಸೇರಿದಂತೆ, ಜಲಾನಯನದ ಹಿನ್ನೀರಿನ ಪ್ರದೇಶಗಳಾದ ತುಮರಿ, ಬ್ಯಾಕೋಡು, ಕೋಗಾರು, ಹೊಳೆಬಾಗಿಲು, ಹೊಸನಗರ, ಮಾಸ್ತಿಕಟ್ಟೆ, ಸಾವೆಹಕ್ಲು, ಮುಂತಾದ ಕಡೆಗಳಲ್ಲಿ ಮಳೆ ಉತ್ತಮವಾಗಿದ್ದು, ನೀರಿನ ಹರಿವು ಹೆಚ್ಚಾಗಿದೆ.

-ಗೋ. ವ ಮೋಹನಕೃಷ್ಣ, ಶಿವಮೊಗ್ಗ

LEAVE A REPLY

Please enter your comment!
Please enter your name here

- Advertisment -

Most Popular

5 ವರ್ಷದ ಬಾಲಕಿ ಕಾಣೆ

ಬೆಂಗಳೂರು : ನಗರದ ಮೆಜೆಸ್ಟಿಕ್ ಬಸ್ ನಿಲ್ದಾಣದಲ್ಲಿ 5 ವರ್ಷದ ಬಾಲಕಿ ಕಾಣೆಯಾಗಿದ್ದಾಳೆ. ಲೋಕಿತ ಕೆ.ಮರನ್ ಕಾಣೆಯಾಗಿರುವ ಬಾಲಕಿ‌. ಈಕೆ ತನ್ನ ತಾತನ ಜೊತೆ ಸೆ.18 ರಂದು ಮನೆಯಿಂದ ತೆರಳಿದ್ದಳು. ಮೆಜೆಸ್ಟಿಕ್ ನಿಲ್ದಾಣದಲ್ಲಿ...

ಅಕ್ಕ ಗೌರಿ ಲಂಕೇಶ್​ರನ್ನು ನೆನೆದು ಕಣ್ಣೀರಿಟ್ಟ ಇಂದ್ರಜಿತ್ ಲಂಕೇಶ್..!

ಬೆಂಗಳೂರು : ಸ್ಯಾಂಡಲ್​​ವುಡ್​ ಡ್ರಗ್ಸ್​ ಮಾಫಿಯಾ ವಿಚಾರಕ್ಕೆ ಸಂಬಂಧಿಸಿದಂತೆ ಸೋಮವಾರ ಸಿಸಿಬಿ ವಿಚಾರಣೆ ಎದುರಿಸಿದ್ದ ನಿರ್ದೇಶಕ ಇಂದ್ರಜಿತ್ ಲಂಕೇಶ್ ಇಂದು ಮತ್ತೊಮ್ಮೆ ಸಿಸಿಬಿ ಅಧಿಕಾರಿಗಳ ಮುಂದೆ ಹಾಜರಾಗುತ್ತಿದ್ದಾರೆ.  ಇಂದು ಸಿಸಿಬಿ ವಿಚಾರಣೆಗೆ ಹೋಗುವ...

ಸ್ಯಾಂಡಲ್​​ವುಡ್​​​​​ನಲ್ಲಿ ಡ್ರಗ್​ ಮಾಫಿಯಾ : ಇಂದು ಸಿಸಿಬಿಯಿಂದ ನಟಿ ರಾಗಿಣಿ ವಿಚಾರಣೆ

ಬೆಂಗಳೂರು :  ಸ್ಯಾಂಡಲ್​​​​ವುಡ್​​ನಲ್ಲಿ ಡ್ರಗ್​​ ಮಾಫಿಯಾದ ಬಗ್ಗೆ ಬಿಸಿಬಿಸಿ ಚರ್ಚೆ ನಡೀತಾ ಇದೆ. ಚಂದನವನಕ್ಕೆ ಮಾದಕ ಜಾಲ ಹಬ್ಬಿದೆಯೇ ಅಥವಾ ಇಲ್ಲವೇ ಅನ್ನೋದು ಸದ್ಯದ ಗಾಂಧಿನಗರದ ಹಾಟ್ ಸುದ್ದಿ. ಇದಕ್ಕೆ ಸಂಬಂಧಿಸಿದಂತೆ ನಟಿ ರಾಗಿಣಿ...

ಕೊರೋನಾದಿಂದ ಮಾಜಿ ಶಾಸಕ ಅಪ್ಪಾಜಿ ಗೌಡ ನಿಧನ

ಶಿವಮೊಗ್ಗ : ಭದ್ರಾವತಿಯ ಜೆಡಿಎಸ್ ನ ಮಾಜಿ ಶಾಸಕ ಅಪ್ಪಾಜಿಗೌಡ ವಿಧಿವಶರಾಗಿದ್ದಾರೆ. ಕಳೆದ ಕೆಲ ದಿನಗಳಿಂದ ಕೊರೋನಾ ಸೋಂಕಿಗೆ ಒಳಗಾಗಿದ್ದ ಅವರು,  ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ. ಅಪ್ಪಾಜಿಗೌಡರಿಗೆ 69 ವರ್ಷ ವಯಸ್ಸಾಗಿತ್ತು. ಪತ್ನಿ...

Recent Comments