Home ದೇಶ-ವಿದೇಶ ಭಾರತದಲ್ಲೂ ಬುರ್ಕಾ ನಿಷೇಧಿಸಲು ಆಗ್ರಹ..!

ಭಾರತದಲ್ಲೂ ಬುರ್ಕಾ ನಿಷೇಧಿಸಲು ಆಗ್ರಹ..!

ನವದೆಹಲಿ: ಭಾರತದಲ್ಲಿ ಬುರ್ಕಾ ಬ್ಯಾನ್ ಮಾಡಬೇಕು ಅಂತ ಪ್ರಧಾನಿ ನರೇಂದ್ರ ಮೋದಿಯವರಲ್ಲಿ ಶಿವಸೇನೆ ಬೇಡಿಕೆ ಇಟ್ಟಿದೆ. ದ್ವೀಪ ರಾಷ್ಟ್ರ ಶ್ರೀಲಂಕಾದಲ್ಲಿ 250ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾದ ಸರಣಿ ಬಾಂಬ್​ ಸ್ಫೋಟದ ನಂತರ ಬುರ್ಕಾ ಧರಿಸುವುದನ್ನು ನಿಷೇಧಿಸಲಾಗಿದ್ದು, ಇದರ ಬೆನ್ನಲ್ಲೇ ಭಾರತದಲ್ಲೂ ಬುರ್ಕಾ ಬ್ಯಾನ್ ಮಾಡಬೇಕು ಅಂತ ಶಿವಸೇನೆ ಮುಖ್ಯಸ್ಥ ಉದ್ಧವ್ ಠಾಕ್ರೆ ಪ್ರಧಾನಿಯವರಲ್ಲಿ ಮನವಿ ಮಾಡಿದ್ದಾರೆ.

ಶಿವಸೇನೆಯ ಪತ್ರಿಕೆ ‘ಸಾಮ್ನಾ’ದಲ್ಲಿ ಈ ಕುರಿತು ಬರೆಯಲಾಗಿದ್ದು, ಶ್ರೀಲಂಕಾದಲ್ಲಿ ಬುರ್ಕಾ ಬ್ಯಾನ್ ಮಾಡಿದಂತೆಯೇ ಭಾರತದಲ್ಲೂ ಬ್ಯಾನ್ ಮಾಡಬೇಕು ಅಂತ ಒತ್ತಾಯಿಸಲಾಗಿದೆ. ಭದ್ರತಾ ದೃಷ್ಟಿಯಿಂದ ಎಪ್ರಿಲ್​ 28ರಂದು ಶ್ರೀಲಂಕಾದಲ್ಲಿ ಬುರ್ಕಾ ಬ್ಯಾನ್ ಮಾಡಿ ಆದೇಶ ನೀಡಲಾಗಿತ್ತು.

“ರಾವಣನ ರಾಷ್ಟ್ರವಾದ ಶ್ರೀಲಂಕಾದಲ್ಲಿಯೇ ಬುರ್ಕಾ ನಿಷೇಧಿಸಲಾಗಿದ್ದು, ಶ್ರೀರಾಮನ ದೇಶವಾದ ಭಾರತದಲ್ಲಿ ಬುರ್ಕಾ ನಿಷೇಧಿಸಲು ಯಾಕೆ ಸಾಧ್ಯವಿಲ್ಲ” ಅಂತ ‘ಸಾಮ್ನಾ’ ಪತ್ರಿಕೆಯ ಸಂಪಾದಕೀಯದಲ್ಲಿ ಉದ್ಧವ್​ ಠಾಕ್ರೆ ಪ್ರಶ್ನಿಸಿದ್ದಾರೆ. “ಜಗತ್ತಿನ ಹಲವು ಪ್ರಮುಖ ರಾಷ್ಟ್ರಗಳಲ್ಲಿ ಬುರ್ಕಾ ನಿಷೇಧಿಸಲಾಗಿದ್ದು, ಭಾರತದಲ್ಲಿಯೂ ಅದೇ ನಿಯಮ ಜಾರಿಯಾಗಬೇಕಿದೆ” ಅಂತ ಹೇಳಿದ್ದಾರೆ.

LEAVE A REPLY

Please enter your comment!
Please enter your name here

- Advertisment -

Most Popular

ದೇಶದಲ್ಲಿ  24 ಗಂಟೆಗಳಲ್ಲಿ 48,648 ಕೊರೋನಾ ಕೇಸ್ ಪತ್ತೆ!

ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 48,648 ಮಂದಿಯಲ್ಲಿ ಕೊರೋನಾ ಸೋಂಕು ಪತ್ತೆಯಾಗಿದೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 80,88,851ಕ್ಕೆ ತಲುಪಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ...

 ಸಿನಿಮೀಯ ರೀತಿಯಲ್ಲಿ ನಗರಸಭೆ ಸದಸ್ಯ ಕಿಡ್ನಾಪ್​!

ಕೊಪ್ಪಳ : ಸಿನಿಮೀಯ ರೀತಿಯಲ್ಲಿ ನಗರಸಭೆ ಸದಸ್ಯನನ್ನು ಕಿಡ್ನಾಪ್ ಮಾಡಲಾಗಿದೆ. ಕಿಡ್ನಾಪ್​ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಕೊಪ್ಪಳ ಜಿಲ್ಲೆಯ ಗಂಗಾವತಿಯಲ್ಲಿ ನವೆಂಬರ್ 2 ರಂದು ನಗರಸಭೆ ಚುನಾವಣೆ ನಡೆಯಲಿದ್ದು, ಗಂಗಾವತಿ ನಗರಸಭೆ ಕಾಂಗ್ರೆಸ್ ಸದಸ್ಯ...

ಅಲಹಬಾದ್​ ಹೈಕೋರ್ಟ್ ನಿಗಾದಲ್ಲಿ ಹತ್ರಾಸ್​ ಗ್ಯಾಂಗ್ ರೇಪ್​ ಕೇಸ್ ತನಿಖೆಗೆ ಸುಪ್ರೀಂ ಆದೇಶ

ನವದೆಹಲಿ : ಉತ್ತರ ಪ್ರದೇಶ ಹತ್ರಾಸ್​​​​ ಗ್ಯಾಂಗ್​ ರೇಪ್​​ ಪ್ರಕರಣದ ತನಿಖೆ ಅಲಹಬಾದ್​ ಹೈಕೋರ್ಟ್​ ನಿಗಾದಲ್ಲಿ ನಡೆಯಬೇಕೆಂದು ಸುಪ್ರೀಂ ಕೋರ್ಟ್​ ಆದೇಶಿಸಿದೆ. ಸದ್ಯ ಸಿಬಿಐ ಪ್ರಕರಣದ ತನಿಖೆಯನ್ನು ನಡೆಸುತ್ತಿದ್ದು, ತನಿಖಾ ತಂಡದಲ್ಲಿರುವ ಅಧಿಕಾರಿಗಳನ್ನು ರಾಜ್ಯದಿಂದ...

ಡಿ.ಬಾಸ್​​ಗಾಗಿ ಕನ್ನಡ ಕಲಿತ ಜಗಮಪತಿ ಬಾಬು..!

ಸಾಲ್ಟ್ ಅಂಡ್ ಪೆಪ್ಪರ್ ಲುಕ್​ನಲ್ಲಿ ಸೌತ್​ನಲ್ಲಿ ಸಂಚಲನ ಸೃಷ್ಠಿಸಿರೋ ಜಗಪತಿ ಬಾಬು, ಮತ್ತೊಂದು ನೂತನ ದಾಖಲೆ ಬರೆದಿದ್ದಾರೆ. ಅದೂ ಡಿ ಬಾಸ್ ದರ್ಶನ್​ಗಾಗಿ ಅನ್ನೋದು ವಿಶೇಷ. ಇಷ್ಟಕ್ಕೂ ಮೋಸ್ಡ್ ಡಿಮ್ಯಾಂಡಿಂಗ್ ಜಗಪತಿ ಬಾಬು...

Recent Comments