Home ರಾಜ್ಯ `ಪ್ಲಾಸ್ಟಿಕ್ ಕೊಟ್ಟು ಉಚಿತ ಅಕ್ಕಿ ಪಡೀರಿ'!

`ಪ್ಲಾಸ್ಟಿಕ್ ಕೊಟ್ಟು ಉಚಿತ ಅಕ್ಕಿ ಪಡೀರಿ’!

ಶಿವಮೊಗ್ಗ : ನಗರವನ್ನು ಸಂಪೂರ್ಣವಾಗಿ ಪ್ಲಾಸ್ಟಿಕ್​ ಮುಕ್ತವಾಗಿ ಮಾಡಲು ಮಹಾನಗರ ಪಾಲಿಕೆ ದಿಟ್ಟ ಕ್ರಮ ಕೈಗೊಂಡಿದೆ. ಶಿವಮೊಗ್ಗ ನಗರಾದ್ಯಂತ ಈ ಬಗ್ಗೆ ಜಾಗೃತಿ ಮೂಡಿಸಲಾಗುತ್ತಿದೆ. ಈ ಕಾರ್ಯಕ್ಕೆ ಹಲವಾರು ಸಂಘ ಸಂಸ್ಥೆಗಳು ಕೈಜೋಡಿಸಿವೆ.

ಅಂತೆಯೇ ವಾಸವಿ ಮಹಿಳಾ ಸಂಘದ ಸದಸ್ಯರು ಪ್ಲಾಸ್ಟಿಕ್ ಮುಕ್ತ ಭಾರತವನ್ನಾಗಿಸುವ ನಿಟ್ಟಿನಲ್ಲಿ, ಜಾಗೃತಿ ಮೂಡಿಸಲು  “ಒಂದು ಕೆ ಜಿ ಪ್ಲಾಸ್ಟಿಕ್​ ಕೊಡಿ ಉಚಿತ ಅಕ್ಕಿ ಪಡೆಯಿರಿ” ಎಂಬ ವಿನೂತನ ಅಭಿಯಾನ ಕೈಗೊಂಡಿದ್ದಾರೆ. ಜೊತೆಗೆ ಪ್ಲಾಸ್ಟಿಕ್​ ಚೀಲದ ಬದಲಾಗಿ ಬಟ್ಟೆಯ ಕೈಚೀಲವನ್ನು ಬಳಸುವಂತೆ ಮನವಿ ಮಾಡಿದ್ದಾರೆ. 

ಇನ್ನು ಈ ಅಭಿಯಾನಕ್ಕೆ ಅಭೂತಪೂರ್ವ ಬೆಂಬಲ ವ್ಯಕ್ತವಾಗಿದ್ದು ನೂರಾರು ಸಾರ್ವಜನಿಕರು ತಮ್ಮ ಬಳಿ ಇರುವ ಪ್ಲಾಸ್ಟಿಕ್​  ನೀಡಿ ಅಕ್ಕಿಯನ್ನು ಪಡೆದುಕೊಂಡರು. ಇನ್ನು ಈ ಅಭಿಯಾನದಲ್ಲಿ ಸುಮಾರು 2 ಕ್ವಿಂಟಾಲ್​ ಪ್ಲಾಸ್ಟಿಕ್ ಸಂಗ್ರಹವಾಗಿದ್ದು ಅಭಿಯಾನ ಯಶಸ್ವಿಯಾಗಿದೆ ಎಂದು ಕಾರ್ಯಕರ್ತರು ಹರ್ಷ  ವ್ಯಕ್ತಪಡಿಸಿದ್ದಾರೆ.

 

 

LEAVE A REPLY

Please enter your comment!
Please enter your name here

- Advertisment -

Most Popular

5 ವರ್ಷದ ಬಾಲಕಿ ಕಾಣೆ

ಬೆಂಗಳೂರು : ನಗರದ ಮೆಜೆಸ್ಟಿಕ್ ಬಸ್ ನಿಲ್ದಾಣದಲ್ಲಿ 5 ವರ್ಷದ ಬಾಲಕಿ ಕಾಣೆಯಾಗಿದ್ದಾಳೆ. ಲೋಕಿತ ಕೆ.ಮರನ್ ಕಾಣೆಯಾಗಿರುವ ಬಾಲಕಿ‌. ಈಕೆ ತನ್ನ ತಾತನ ಜೊತೆ ಸೆ.18 ರಂದು ಮನೆಯಿಂದ ತೆರಳಿದ್ದಳು. ಮೆಜೆಸ್ಟಿಕ್ ನಿಲ್ದಾಣದಲ್ಲಿ...

ಅಕ್ಕ ಗೌರಿ ಲಂಕೇಶ್​ರನ್ನು ನೆನೆದು ಕಣ್ಣೀರಿಟ್ಟ ಇಂದ್ರಜಿತ್ ಲಂಕೇಶ್..!

ಬೆಂಗಳೂರು : ಸ್ಯಾಂಡಲ್​​ವುಡ್​ ಡ್ರಗ್ಸ್​ ಮಾಫಿಯಾ ವಿಚಾರಕ್ಕೆ ಸಂಬಂಧಿಸಿದಂತೆ ಸೋಮವಾರ ಸಿಸಿಬಿ ವಿಚಾರಣೆ ಎದುರಿಸಿದ್ದ ನಿರ್ದೇಶಕ ಇಂದ್ರಜಿತ್ ಲಂಕೇಶ್ ಇಂದು ಮತ್ತೊಮ್ಮೆ ಸಿಸಿಬಿ ಅಧಿಕಾರಿಗಳ ಮುಂದೆ ಹಾಜರಾಗುತ್ತಿದ್ದಾರೆ.  ಇಂದು ಸಿಸಿಬಿ ವಿಚಾರಣೆಗೆ ಹೋಗುವ...

ಸ್ಯಾಂಡಲ್​​ವುಡ್​​​​​ನಲ್ಲಿ ಡ್ರಗ್​ ಮಾಫಿಯಾ : ಇಂದು ಸಿಸಿಬಿಯಿಂದ ನಟಿ ರಾಗಿಣಿ ವಿಚಾರಣೆ

ಬೆಂಗಳೂರು :  ಸ್ಯಾಂಡಲ್​​​​ವುಡ್​​ನಲ್ಲಿ ಡ್ರಗ್​​ ಮಾಫಿಯಾದ ಬಗ್ಗೆ ಬಿಸಿಬಿಸಿ ಚರ್ಚೆ ನಡೀತಾ ಇದೆ. ಚಂದನವನಕ್ಕೆ ಮಾದಕ ಜಾಲ ಹಬ್ಬಿದೆಯೇ ಅಥವಾ ಇಲ್ಲವೇ ಅನ್ನೋದು ಸದ್ಯದ ಗಾಂಧಿನಗರದ ಹಾಟ್ ಸುದ್ದಿ. ಇದಕ್ಕೆ ಸಂಬಂಧಿಸಿದಂತೆ ನಟಿ ರಾಗಿಣಿ...

ಕೊರೋನಾದಿಂದ ಮಾಜಿ ಶಾಸಕ ಅಪ್ಪಾಜಿ ಗೌಡ ನಿಧನ

ಶಿವಮೊಗ್ಗ : ಭದ್ರಾವತಿಯ ಜೆಡಿಎಸ್ ನ ಮಾಜಿ ಶಾಸಕ ಅಪ್ಪಾಜಿಗೌಡ ವಿಧಿವಶರಾಗಿದ್ದಾರೆ. ಕಳೆದ ಕೆಲ ದಿನಗಳಿಂದ ಕೊರೋನಾ ಸೋಂಕಿಗೆ ಒಳಗಾಗಿದ್ದ ಅವರು,  ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ. ಅಪ್ಪಾಜಿಗೌಡರಿಗೆ 69 ವರ್ಷ ವಯಸ್ಸಾಗಿತ್ತು. ಪತ್ನಿ...

Recent Comments