Home uncategorized ಕೊರೋನಾ ಎದುರಿಸಲು ಜಿಲ್ಲಾಡಳಿತ ಸಂಪೂರ್ಣ ಸನ್ನದ್ಧ : ಜಿಲ್ಲಾಧಿಕಾರಿ ಕೆ.ಬಿ. ಶಿವಕುಮಾರ್

ಕೊರೋನಾ ಎದುರಿಸಲು ಜಿಲ್ಲಾಡಳಿತ ಸಂಪೂರ್ಣ ಸನ್ನದ್ಧ : ಜಿಲ್ಲಾಧಿಕಾರಿ ಕೆ.ಬಿ. ಶಿವಕುಮಾರ್

ಶಿವಮೊಗ್ಗ: ಜಿಲ್ಲೆಯಲ್ಲಿ ಕೊರೋನಾ ಪಾಸಿಟಿವ್ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಕೋವಿಡ್ ಬೆಡ್‍ಗಳು ಸೇರಿದಂತೆ, ಅಗತ್ಯ ಮೂಲಸೌಕರ್ಯಗಳನ್ನು ಸಜ್ಜುಗೊಳಿಸಿದ್ದು, ಜನರು ಗಾಬರಿಯಾಗುವ ಅಗತ್ಯವಿಲ್ಲ ಎಂದು ಜಿಲ್ಲಾಧಿಕಾರಿ ಕೆ.ಬಿ. ಶಿವಕುಮಾರ್ ಹೇಳಿದ್ದಾರೆ. ಇಂದು ಈ ಬಗ್ಗೆ ಮಾಧ್ಯಮಗಳಿಗೆ ಮಾಹಿತಿ ನೀಡಿದ ಅವರು, ಜಿಲ್ಲೆಯಲ್ಲಿ ಇದುವರೆಗೆ 27,029 ಜನರ ಗಂಟಲ ದ್ರವ ಪರೀಕ್ಷೆ ನಡೆಸಲಾಗಿದೆ. 24,899 ನೆಗೆಟಿವ್ ವರದಿ ಬಂದಿದ್ದು 1,727 ಪಾಸಿಟಿವ್ ಕಂಡು ಬಂದಿದೆ. ಇವರ ಪೈಕಿ 925 ಮಂದಿ ಗುಣಮುಖರಾಗಿ ಮನೆಗೆ ಮರಳಿದ್ದಾರೆ. 771 ಮಂದಿ ಮಾತ್ರ ವಿವಿಧ ಕೇಂದ್ರಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದೀಗ ಪರೀಕ್ಷೆ ಪ್ರಮಾಣವನ್ನು ಹೆಚ್ಚಿಸಲಾಗುತ್ತಿದ್ದು, ಪ್ರತಿ ದಿನ 950 ಜನರ ಪರೀಕ್ಷೆ ನಡೆಸಲಾಗುತ್ತಿದೆ. ಇದರಿಂದಾಗಿ ಪಾಸಿಟಿವ್ ಪ್ರಕರಣಗಳಲ್ಲಿ ಹೆಚ್ಚಳ ಉಂಟಾಗಿದೆ ಎಂದು ಹೇಳಿದರು. ಇನ್ನು ಮೆಗ್ಗಾನ್ ಆಸ್ಪತ್ರೆಯಲ್ಲಿ ರೋಗ ಲಕ್ಷಣವಿರುವರಿಗೆ ಚಿಕಿತ್ಸೆ ನೀಡಲಾಗುತ್ತಿದ್ದು, ಪ್ರಸ್ತುತ 233 ಮಂದಿ ಇದ್ದಾರೆ. ವಿವಿಧ ಕಡೆಗಳಲ್ಲಿ ತೆರೆಯಲಾಗಿರುವ ಕೋವಿಡ್ ಕೇರ್ ಸೆಂಟರ್ ಗಳಲ್ಲಿ 436 ಮಂದಿ ಇದ್ದಾರೆ. ಇನ್ನೂ 550 ಬೆಡ್ ಉಪಯೋಗಕ್ಕೆ ಸಿದ್ಧವಾಗಿದ್ದು, ಇನ್ನೂ 400 ಬೆಡ್‍ಗಳು ಸಜ್ಜುಗೊಳಿಸಲಾಗುತ್ತಿದೆ. ಪ್ರಸ್ತುತ 37 ಮಂದಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸುಬ್ಬಯ್ಯ ಮೆಡಿಕಲ್ ಕಾಲೇಜಿನಲ್ಲಿ 300 ಬೆಡ್‍ಗಳ ಸೌಲಭ್ಯ ಸಿದ್ಧವಿದೆ. ಅಲ್ಲದೇ, ಪ್ರಸ್ತುತ 28 ವೆಂಟಿಲೇಟರ್​ಗಳು ಮೆಗ್ಗಾನ್‍ನಲ್ಲಿ ಲಭ್ಯವಿದ್ದು, ಇನ್ನೂ 37 ವೆಂಟಿಲೇಟರ್​ಗಳು ಒಂದು ವಾರದ ಒಳಗಾಗಿ ಲಭ್ಯವಾಗಲಿವೆ. ಹೆಚ್ಚುತ್ತಿರುವ ಕೊರೋನಾ ಪಾಸಿಟಿವ್ ಪ್ರಕರಣಗಳಿಗೆ ತಕ್ಕಂತೆ ಮೂಲ ಸೌಲಭ್ಯಗಳನ್ನು ಕೂಡಾ ಹೆಚ್ಚಿಸಲಾಗುತ್ತಿದೆ.

ಹೋಂ ಕ್ವಾರೆಂಟೈನ್ :- ರೋಗ ಲಕ್ಷಣವಿಲ್ಲದ ಪಾಸಿಟಿವ್ ವ್ಯಕ್ತಿಗಳಿಗೆ ಮನೆಯಲ್ಲಿ ಐಸೋಲೇಷ್‍ಗೆ ವ್ಯವಸ್ಥೆ ಇದ್ದರೆ ಅನುಮತಿ ನೀಡಲಾಗುತ್ತಿದೆ. ಅಂತಹ ವ್ಯಕ್ತಿಗಳನ್ನು ಆರಂಭದಲ್ಲಿ ಮೆಗ್ಗಾನ್‍ಗೆ ಕರೆ ತಂದು ಎದೆ ಎಕ್ಸರೇ, ರಕ್ತ ಪರೀಕ್ಷೆ ಇತ್ಯಾದಿ ಕಡ್ಡಾಯ ತಪಾಸಣೆಗಳನ್ನು ಮಾಡಲಾಗುವುದು. ಆ ಬಳಿಕ ವೈದ್ಯರ ತಂಡ ಮನೆಗೆ ಭೇಟಿ ನೀಡಿ ವ್ಯವಸ್ಥೆ ಪರಿಶೀಲಿಸಿದ ಬಳಿಕ ಅಂಬ್ಯುಲೆನ್ಸ್ ಮೂಲಕ ಮನೆಗೆ 24 ಗಂಟೆಯೊಳಗಾಗಿ ಕರೆ ತರಲಾಗುವುದು. ಹೋಂ ಕ್ವಾರೆಂಟೈನ್‍ನಲ್ಲಿರುವವರನ್ನು ತಪಾಸಣೆ ನಡೆಸಲು ಪ್ರಸ್ತುತ ಶಿವಮೊಗ್ಗ ನಗರದಲ್ಲಿ 5 ತಂಡಗಳನ್ನು ರಚಿಸಲಾಗಿದೆ ಎಂದು ತಿಳಿಸಿದರು.

ಜನರ ಸಹಕಾರ ಅಗತ್ಯ :- ಜನರು ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳುವುದು ಹಾಗೂ ಮಾಸ್ಕ್ ಕಡ್ಡಾಯವಾಗಿ ಧರಿಸಬೇಕು. ಜನರ ಸಹಕಾರದಿಂದ ಮಾತ್ರ ಕೊರೋನಾ ಹರಡುವುದನ್ನು ನಿಯಂತ್ರಿಸಬಹುದಾಗಿದೆ ಎಂದು ಮನವಿ ಮಾಡಿಕೊಂಡರು.

ಇದೇ ವೇಳೆ ಶಿಕಾರಿಪುರದ 85 ವರ್ಷದ ಮಹದೇವಪ್ಪ ಎಂಬ ವೃದ್ಧ ಕಾಣೆಯಾಗಿದ್ದಾರೆ ಎಂದು ಸ್ಪಷ್ಟನೆ ನೀಡಿದ್ದಾರೆ. ಜೂ. 23 ರಂದು ಈ ವೃದ್ಧನಿಗೆ ಶಿಕಾರಿಪು ಆಸ್ಪತ್ರೆಯಲ್ಲಿ ಕೋವಿಡ್ ಪರೀಕ್ಷೆ ಮಾಡಲಾಗಿತ್ತು. ನಂತರ ಕೊರೋನಾ ಧೃಢವಾದ ಬಳಿಕ ಅವರನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಈ ವೇಳೆ ಇವರು ಕಾಣೆಯಾಗಿರಬಹುದೆಂದು ಹೇಳಲಾಗಿದ್ದು, ಇವರು ಸಾವಿಗೀಡಾಗಿಲ್ಲ. ಬದಲಾಗಿ ನಾಪತ್ತೆಯಾಗಿದ್ದಾರೆ. ಜೂ. 28 ರಂದು ನಗರದ ದೊಡ್ಡಪೇಟೆ ಠಾಣೆಯಲ್ಲಿ ನಾಪತ್ತೆ ದೂರು ದಾಖಲಾಗಿದ್ದು, ತನಿಖೆ ನಡೆಸಲಾಗುತ್ತಿದೆ ಎಂದು ಸ್ಪಷ್ಟಿಕರಿಸಿದ್ದಾರೆ. ವಿಚಾರಣೆ ಬಳಿಕ ಇನ್ನಷ್ಟು ಮಾಹಿತಿ ನೀಡಲಾಗುವುದೆಂದು ಜಿಲ್ಲಾಧಿಕಾರಿ ಶಿವಕುಮಾರ್ ಹೇಳಿದ್ದಾರೆ.

LEAVE A REPLY

Please enter your comment!
Please enter your name here

- Advertisment -

Most Popular

5 ವರ್ಷದ ಬಾಲಕಿ ಕಾಣೆ

ಬೆಂಗಳೂರು : ನಗರದ ಮೆಜೆಸ್ಟಿಕ್ ಬಸ್ ನಿಲ್ದಾಣದಲ್ಲಿ 5 ವರ್ಷದ ಬಾಲಕಿ ಕಾಣೆಯಾಗಿದ್ದಾಳೆ. ಲೋಕಿತ ಕೆ.ಮರನ್ ಕಾಣೆಯಾಗಿರುವ ಬಾಲಕಿ‌. ಈಕೆ ತನ್ನ ತಾತನ ಜೊತೆ ಸೆ.18 ರಂದು ಮನೆಯಿಂದ ತೆರಳಿದ್ದಳು. ಮೆಜೆಸ್ಟಿಕ್ ನಿಲ್ದಾಣದಲ್ಲಿ...

ಅಕ್ಕ ಗೌರಿ ಲಂಕೇಶ್​ರನ್ನು ನೆನೆದು ಕಣ್ಣೀರಿಟ್ಟ ಇಂದ್ರಜಿತ್ ಲಂಕೇಶ್..!

ಬೆಂಗಳೂರು : ಸ್ಯಾಂಡಲ್​​ವುಡ್​ ಡ್ರಗ್ಸ್​ ಮಾಫಿಯಾ ವಿಚಾರಕ್ಕೆ ಸಂಬಂಧಿಸಿದಂತೆ ಸೋಮವಾರ ಸಿಸಿಬಿ ವಿಚಾರಣೆ ಎದುರಿಸಿದ್ದ ನಿರ್ದೇಶಕ ಇಂದ್ರಜಿತ್ ಲಂಕೇಶ್ ಇಂದು ಮತ್ತೊಮ್ಮೆ ಸಿಸಿಬಿ ಅಧಿಕಾರಿಗಳ ಮುಂದೆ ಹಾಜರಾಗುತ್ತಿದ್ದಾರೆ.  ಇಂದು ಸಿಸಿಬಿ ವಿಚಾರಣೆಗೆ ಹೋಗುವ...

ಸ್ಯಾಂಡಲ್​​ವುಡ್​​​​​ನಲ್ಲಿ ಡ್ರಗ್​ ಮಾಫಿಯಾ : ಇಂದು ಸಿಸಿಬಿಯಿಂದ ನಟಿ ರಾಗಿಣಿ ವಿಚಾರಣೆ

ಬೆಂಗಳೂರು :  ಸ್ಯಾಂಡಲ್​​​​ವುಡ್​​ನಲ್ಲಿ ಡ್ರಗ್​​ ಮಾಫಿಯಾದ ಬಗ್ಗೆ ಬಿಸಿಬಿಸಿ ಚರ್ಚೆ ನಡೀತಾ ಇದೆ. ಚಂದನವನಕ್ಕೆ ಮಾದಕ ಜಾಲ ಹಬ್ಬಿದೆಯೇ ಅಥವಾ ಇಲ್ಲವೇ ಅನ್ನೋದು ಸದ್ಯದ ಗಾಂಧಿನಗರದ ಹಾಟ್ ಸುದ್ದಿ. ಇದಕ್ಕೆ ಸಂಬಂಧಿಸಿದಂತೆ ನಟಿ ರಾಗಿಣಿ...

ಕೊರೋನಾದಿಂದ ಮಾಜಿ ಶಾಸಕ ಅಪ್ಪಾಜಿ ಗೌಡ ನಿಧನ

ಶಿವಮೊಗ್ಗ : ಭದ್ರಾವತಿಯ ಜೆಡಿಎಸ್ ನ ಮಾಜಿ ಶಾಸಕ ಅಪ್ಪಾಜಿಗೌಡ ವಿಧಿವಶರಾಗಿದ್ದಾರೆ. ಕಳೆದ ಕೆಲ ದಿನಗಳಿಂದ ಕೊರೋನಾ ಸೋಂಕಿಗೆ ಒಳಗಾಗಿದ್ದ ಅವರು,  ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ. ಅಪ್ಪಾಜಿಗೌಡರಿಗೆ 69 ವರ್ಷ ವಯಸ್ಸಾಗಿತ್ತು. ಪತ್ನಿ...

Recent Comments