ಬೆಂಗಳೂರು: ಹೃದಯ ಸಮಸ್ಯೆಯಿಂದ ಬಳಲುತ್ತಿರುವ ಏಳು ದಿನಗಳ ಹಸುಗೂಸನ್ನು ಚಿಕಿತ್ಸೆಗಾಗಿ ಶಿವಮೊಗ್ಗದಿಂದ ಬೆಂಗಳೂರಿಗೆ ಝೀರೋ ಟ್ರಾಫಿಕ್ ವ್ಯವಸ್ಥೆ ಮೂಲಕ ಕರೆತರಲಾಗಿದೆ.
ಕಳೆದ ಹತ್ತು ದಿನಗಳ ಹಿಂದೆ ಶಿವಮೊಗ್ಗದ ಆಸ್ಪತ್ರೆಗೆ ಹೆರಿಗೆಗೆಂದು ದಾಖಲಾಗಿದ್ದ ಸುಧಾ ಎಂಬುವವರು ಫೆಬ್ರವರಿ 4 ರಂದು ಮುದ್ದಾದ ಗಂಡು ಮಗುವಿಗೆ ಜನ್ಮ ನೀಡಿದ್ದರು. ಆದರೆ ದುರಾದೃಷ್ಟಾವಶಾತ್ ಆ ಹಸುಗೂಸಿನ ಹೃದಯದಲ್ಲಿ ರಂಧ್ರವಿರುವುದು ಸ್ಕ್ಯಾನಿಂಗ್ ಮೂಲಕ ತಿಳಿದಿದೆ. ಹಾಗಾಗಿ ಚಿಕಿತ್ಸೆಗಾಗಿ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಿಂದ ಬೆಂಗಳೂರಿನ ಜಯದೇವ ಆಸ್ಪತ್ರೆಗೆ ಆ್ಯಂಬುಲೆನ್ಸ್ನಲ್ಲಿ ಝೀರೋ ಟ್ರಾಫಿಕ್ ಮೂಲಕ ಶಿಫ್ಟ್ ಮಾಡಲಾಗಿದೆ.