Home ರಾಜ್ಯ ಪಬ್, ಹೋಟೆಲ್ ಗಳಿಗೆ ಹೊಸ ವರ್ಷಾಚರಣೆಗೆ ಬಿಬಿಎಂಪಿಯಿಂದ ಶಾಕ್

ಪಬ್, ಹೋಟೆಲ್ ಗಳಿಗೆ ಹೊಸ ವರ್ಷಾಚರಣೆಗೆ ಬಿಬಿಎಂಪಿಯಿಂದ ಶಾಕ್

ಬೆಂಗಳೂರು: ಹೊಸ ವರ್ಷದ ಸಂಭ್ರಮಕ್ಕೆ ಬಿಬಿಎಂಪಿ ಬ್ರೇಕ್ ಹಾಕಿದೆ. ಹೌದು ಪ್ರತಿ ವರ್ಷದಂತೆ ಈ ವರ್ಷ ಪಬ್, ಹೋಟೆಲ್ ಮಾಲಿಕರಿಗೆ ಬಿಬಿಎಂಪಿ ಶಾಕ್ ನೀಡಿದೆ. ಆದರೆ ಬಿಬಿಎಂಪಿ ನಿಯಮಗಳಂತೆ ಮಾಸ್ಕ್, ಸ್ಯಾನಿಟೈಸರ್ ಬಳಸಿ ಪ್ರಸ್ತುತ ನಡೆಯುತ್ತಿರೋ ಹೋಟೆಲ್ ಗಳಿಗೆ ಮಾತ್ರ ಅವಕಾಶ ನೀಡಲು ಸಮ್ಮತಿಸಿದೆ. ಪಬ್, ಫೈವ್ ಸ್ಟಾರ್  ಹೋಟೆಲ್ ಗಳಲ್ಲಿ ಸಿಟ್ ಕೆಪಾಸಿಟಿ ಶೇ.50ರಷ್ಟು ಮಾತ್ರವೇ ಅವಕಾಶ ನೀಡಲು ಸೂಚಿಸಲಾಗಿದೆ. ನಮ್ಮಲ್ಲಿರೋ ಹೆಲ್ತ್ ಇನ್ಸ್ ಪೆಕ್ಟರ್ ಈ ಬಗ್ಗೆ ಗಮನ ಹರಿಲಿದ್ದಾರೆ ಎಂದು ಬಿಬಿಎಂಪಿ ಆಯುಕ್ತ ಮಂಜುನಾಥ ಪ್ರಸಾದ ಹೇಳಿದ್ದಾರೆ.

ಹೊಸ ವರ್ಷದ ಆಚರಣೆ ಬಗ್ಗೆ ಈಗಾಗಲೇ ಕಂದಾಯ ಸಚಿವರ ನೇತೃತ್ವದಲ್ಲಿ ಸಭೇ ನಡೆಸಲಾಗಿದೆ. ಹೊಸ ವರ್ಷಾಚರಣೆ ಡಿಸೆಂಬರ್ ಅಂತ್ಯದಿಂದ ಜನವರಿ 2ರ ವರೆಗೂ ನಡೆಯಲಿದೆ. ನಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದು, ಎಂಜಿ ರಸ್ತೆ, ಕೋರಮಂಗಲ ರಸ್ತೆಗಳಲ್ಲಿ ಸಣ್ಣ ಇರುವೆ ಓಡಾಡುವಷ್ಟು ಜಾಗ ಇರೋದಿಲ್ಲ. ಹೀಗಾಗಿ ಪೊಲೀಸ್ ಇಲಾಖೆ ವತಿಯಿಂದಲೂ ನಿಗಾವಹಿಸಲಿದ್ದಾರೆ. ಪರ್ಮೀಟೆಡ್ ಈವೆಂಟ್ ಹೊರತುಪಡಿಸಿ, ಬೇರೆ ಯಾವುದೇ ಈವೆಂಟ್ಗಳಿಗೆ ಅವಕಾಶವಿಲ್ಲ. ಕಂದಾಯ ಸಚಿವರು ಮತ್ತು ಆರೋಗ್ಯ ಸಚಿವರೂ ಈ ಬಗ್ಗೆ ಚರ್ಚೆ ಮಾಡಿದ್ದಾರೆ. ಸರ್ಕಾರದಿಂದ ಅಧಿಕೃತವಾಗಿ ಆದೇಶ ಬಂದ ಮೇಲೆ ಎಲ್ಲವೂ ಸ್ಪಷ್ಟವಾಗಲಿದೆ ಎಂದು ಬಿಬಿಎಂಪಿ ಆಯುಕ್ತ ಮಂಜುನಾಥ ಪ್ರಸಾದ ಹೇಳಿದ್ದಾರೆ.

 

LEAVE A REPLY

Please enter your comment!
Please enter your name here

- Advertisment -

Most Popular

‘ಘಟನೆಯ ಹೊಣೆ ಹೊತ್ತು ಈಶ್ವರಪ್ಪ ರಾಜೀನಾಮೆ ನೀಡಲಿ ಪ್ರಸನ್ನ್ ಕುಮಾರ್ ಆಗ್ರಹ’

ಶಿವಮೊಗ್ಗ: ಶಿವಮೊಗ್ಗದಲ್ಲಿ ಕಲ್ಲು ಗಣಿಗಾರಿಕೆ ಸ್ಫೋಟಕದ ಬಗ್ಗೆ ಸಿಬಿಐ ತನಿಖೆಯಾಗಬೇಕು ಎಂದು ಶಿವಮೊಗ್ಗದ ಮಾಜಿ ಶಾಸಕ ಪ್ರಸನ್ನ ಕುಮಾರ್ ಆಗ್ರಹಿಸಿದ್ದಾರೆ. ಒಂದು ಲೋಡ್ ಸ್ಪೋಟಕ ವಸ್ತುಗಳು ನಗರಕ್ಕೆ ಬಂದಿದ್ದು ಹೇಗೆ. ನಗರಕ್ಕೆ ಬರುವ...

ಉಸಿರು ಕಟ್ಟಿಸುವ ವಾತಾವರಣವೇ ಪಕ್ಷ ಬಿಡಲು ಕಾರಣ: ರಾಜಣ್ಣ ಕೊರವಿ

ಹುಬ್ಬಳ್ಳಿ: ಜೆಡಿಎಸ್ ಪಕ್ಷದಲ್ಲಿನ ಉಸಿರು ‌ಕಟ್ಟಿಸಿವ ವಾತಾವರಣದಿಂದ ಬೆಸತ್ತು ನಾನು ಹಾಗೂ ನನ್ನ ಬೆಂಬಲಿಗರು ಬಿಜೆಪಿ ಪಕ್ಷವನ್ನು ಸೇರ್ಪಡೆಯಾಗುತ್ತಿದ್ದೇವೆ ಎಂದು ಮಹಾನಗರ ಪಾಲಿಕೆ ಮಾಜಿ ಸದಸ್ಯ‌ ರಾಜಣ್ಣ ಕೊರವಿ ಹೇಳಿದರು. ನಗರದಲ್ಲಿಂದು ಸುದ್ದಿಗೋಷ್ಟಿಯಲ್ಲಿ ಮಾತನಾಡಿದ...

‘ಉದ್ದವ್ ಠಾಕ್ರೆ ವಿರುದ್ಧ ಸಿಡಿದೆದ್ದ ಕರವೇ‌ ಕಾರ್ಯಕರ್ತರು’

ಹುಬ್ಬಳ್ಳಿ: ಶಿವಸೇನೆ ಮುಖ್ಯಸ್ಥ ಹಾಗೂ ಮಹಾರಾಷ್ಟ್ರ ಸಿಎಂ ಉದ್ದವ ಠಾಕ್ರೆ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ ಹಾಗೂ ಕನ್ನಡ ಪರ ಸಂಘಟನೆಗಳಲ್ಲಿ ಆಕ್ರೋಶ ಭುಗಿಲೆದ್ದಿದೆ. ಶಿವಸೇನಾ ವಿರುದ್ದ ಸಿಡಿದೆದ್ದ ಕರವೇ ಯುವಸೇನಾ ಕಾರ್ಯಕರ್ತರು ಕರವೇ...

‘ಮೃತ ಕುಟುಂಬಗಳಿಗೆ ರಾಷ್ಟ್ರಪತಿ ಸಾಂತ್ವನ’

ಶಿವಮೊಗ್ಗ: ಕಲ್ಲು ಕ್ವಾರಿ ದುರಂತಕ್ಕೆ ರಾಷ್ಟ್ರಪತಿ ರಮಾನಾಥ್ ಕೋವಿಂದ್ ಧಿಗ್ಬ್ರಮೆಗೊಂಡಿದ್ದಾರೆ. ಸ್ಪೋಟದಿಂದ ಜೀವ ಹಾನಿಯಾಗಿರೋದು ನೋವಿನ ಸಂಗತಿ. ಇಂತಹದೊಂದು ದುರಾದೃಷ್ಟಕರ ಘಟನೆ ನೆಡೆಯಬಾರದಿತ್ತು. ಮೃತರ ಕುಟುಂಬಗಳಿಗೆ ರಾಷ್ಟ್ರಪತಿ ಸಾಂತ್ವನ. ಘಟನೆಯಲ್ಲಿ ಗಾಯಗೊಂಡವರು ಶೀಘ್ರವೇ...

Recent Comments