Home ರಾಜ್ಯ    ‘ಸರಕಾರ ರಚನೆ ಮಾಡೇ ಮಾಡ್ತೀವಿ’- ಶ್ರೀನಿವಾಸ್ ಪ್ರಸಾದ್

   ‘ಸರಕಾರ ರಚನೆ ಮಾಡೇ ಮಾಡ್ತೀವಿ’- ಶ್ರೀನಿವಾಸ್ ಪ್ರಸಾದ್

ಚಾಮರಾಜನಗರ: ರಾಜ್ಯದಲ್ಲಿ ರಾಷ್ಟ್ರಪತಿ ಆಡಳಿತಕ್ಕೆ ಅವಕಾಶ ಕೊಡುವುದಿಲ್ಲ.ಸರಕಾರ ರಚನೆ ಮಾಡೇ ಮಾಡ್ತೇವೆ. ಇದು ಬಿಜೆಪಿಯ ನಿಲುವು ಎಂದು ಸಂಸದ ಶ್ರೀನಿವಾಸ್ ಪ್ರಸಾದ್ ಹೇಳಿದ್ದಾರೆ.

ಚಾಮರಾಜನಗರದಲ್ಲಿ ಮಾಧ್ಯಮದವ್ರ ಜೊತೆ ಮಾತನಾಡಿದ ಅವರು, ರಾಜ್ಯದಲ್ಲಿ ಆಡಳಿತ ಅತಂತ್ರವಾಗಿದೆ. ದೋಸ್ತಿ ಸರಕಾರದಲ್ಲಿ ಅತೃಪ್ತಿ ಜಾಸ್ತಿಯಾಗಿ ಮೈತ್ರಿ ಶಾಸಕರು ಹೊರಗಡೆ ಬರುತ್ತಿದ್ದಾರೆ ಎಂದು ಹೇಳಿದ್ರು. ಇನ್ನು, ಸಿದ್ದರಾಮಯ್ಯ ವಿರುದ್ಧವೂ ಗುಡುಗಿದ ಅವರು, ಸಿದ್ದರಾಮಯ್ಯ ಹೊರ ನೋಟಕ್ಕೆ ಡಬಲ್ ಗೇಮ್ ಆಡುತ್ತಿದ್ದಾರೆ. ತೊಟ್ಟಿಲನ್ನೂ ತೂಗುತ್ತಾರೆ. ಜೊತೆಗೆ ಮಗುವನ್ನೂ ಚಿವುಟುತ್ತಾರೆ. ಸಿದ್ದರಾಮಯ್ಯನವರು ಬಿಜೆಪಿ ಸರಕಾರ ಬಂದರೆ ಸಹಜವಾಗಿ ವಿರೋಧ ಪಕ್ಷದ ನಾಯಕರಾಗುತ್ತಾರೆ. ಬೇರೆಯವರು ಮುಖ್ಯಮಂತ್ರಿಯಾಗುವುದನ್ನು ಸಿದ್ದರಾಮಯ್ಯ ಸಹಿಸುವುದಿಲ್ಲ ಎಂದು ಆಕ್ರೋಶ ಹೊರಹಾಕಿದ್ರು. ಹೆಚ್. ವಿಶ್ವನಾಥ್ ಅವರ ರಾಜೀನಾಮೆಯಲ್ಲಿ ನನ್ನ ಪಾತ್ರವಿಲ್ಲ ಅಂತ ಇದೇ ವೇಳೆ ಸ್ಪಷ್ಟಪಡಿಸಿದ್ರು.

LEAVE A REPLY

Please enter your comment!
Please enter your name here

- Advertisment -

Most Popular

5 ವರ್ಷದ ಬಾಲಕಿ ಕಾಣೆ

ಬೆಂಗಳೂರು : ನಗರದ ಮೆಜೆಸ್ಟಿಕ್ ಬಸ್ ನಿಲ್ದಾಣದಲ್ಲಿ 5 ವರ್ಷದ ಬಾಲಕಿ ಕಾಣೆಯಾಗಿದ್ದಾಳೆ. ಲೋಕಿತ ಕೆ.ಮರನ್ ಕಾಣೆಯಾಗಿರುವ ಬಾಲಕಿ‌. ಈಕೆ ತನ್ನ ತಾತನ ಜೊತೆ ಸೆ.18 ರಂದು ಮನೆಯಿಂದ ತೆರಳಿದ್ದಳು. ಮೆಜೆಸ್ಟಿಕ್ ನಿಲ್ದಾಣದಲ್ಲಿ...

ಅಕ್ಕ ಗೌರಿ ಲಂಕೇಶ್​ರನ್ನು ನೆನೆದು ಕಣ್ಣೀರಿಟ್ಟ ಇಂದ್ರಜಿತ್ ಲಂಕೇಶ್..!

ಬೆಂಗಳೂರು : ಸ್ಯಾಂಡಲ್​​ವುಡ್​ ಡ್ರಗ್ಸ್​ ಮಾಫಿಯಾ ವಿಚಾರಕ್ಕೆ ಸಂಬಂಧಿಸಿದಂತೆ ಸೋಮವಾರ ಸಿಸಿಬಿ ವಿಚಾರಣೆ ಎದುರಿಸಿದ್ದ ನಿರ್ದೇಶಕ ಇಂದ್ರಜಿತ್ ಲಂಕೇಶ್ ಇಂದು ಮತ್ತೊಮ್ಮೆ ಸಿಸಿಬಿ ಅಧಿಕಾರಿಗಳ ಮುಂದೆ ಹಾಜರಾಗುತ್ತಿದ್ದಾರೆ.  ಇಂದು ಸಿಸಿಬಿ ವಿಚಾರಣೆಗೆ ಹೋಗುವ...

ಸ್ಯಾಂಡಲ್​​ವುಡ್​​​​​ನಲ್ಲಿ ಡ್ರಗ್​ ಮಾಫಿಯಾ : ಇಂದು ಸಿಸಿಬಿಯಿಂದ ನಟಿ ರಾಗಿಣಿ ವಿಚಾರಣೆ

ಬೆಂಗಳೂರು :  ಸ್ಯಾಂಡಲ್​​​​ವುಡ್​​ನಲ್ಲಿ ಡ್ರಗ್​​ ಮಾಫಿಯಾದ ಬಗ್ಗೆ ಬಿಸಿಬಿಸಿ ಚರ್ಚೆ ನಡೀತಾ ಇದೆ. ಚಂದನವನಕ್ಕೆ ಮಾದಕ ಜಾಲ ಹಬ್ಬಿದೆಯೇ ಅಥವಾ ಇಲ್ಲವೇ ಅನ್ನೋದು ಸದ್ಯದ ಗಾಂಧಿನಗರದ ಹಾಟ್ ಸುದ್ದಿ. ಇದಕ್ಕೆ ಸಂಬಂಧಿಸಿದಂತೆ ನಟಿ ರಾಗಿಣಿ...

ಕೊರೋನಾದಿಂದ ಮಾಜಿ ಶಾಸಕ ಅಪ್ಪಾಜಿ ಗೌಡ ನಿಧನ

ಶಿವಮೊಗ್ಗ : ಭದ್ರಾವತಿಯ ಜೆಡಿಎಸ್ ನ ಮಾಜಿ ಶಾಸಕ ಅಪ್ಪಾಜಿಗೌಡ ವಿಧಿವಶರಾಗಿದ್ದಾರೆ. ಕಳೆದ ಕೆಲ ದಿನಗಳಿಂದ ಕೊರೋನಾ ಸೋಂಕಿಗೆ ಒಳಗಾಗಿದ್ದ ಅವರು,  ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ. ಅಪ್ಪಾಜಿಗೌಡರಿಗೆ 69 ವರ್ಷ ವಯಸ್ಸಾಗಿತ್ತು. ಪತ್ನಿ...

Recent Comments