Thursday, October 6, 2022
Powertv Logo
Homeರಾಜ್ಯದುಷ್ಕೃತ್ಯ ಎಸಗಿದವರನ್ನು ಕಠಿಣ ಶಿಕ್ಷೆಗೊಳಪಡಿಸಬೇಕು : ಸಿದ್ದರಾಮಯ್ಯ

ದುಷ್ಕೃತ್ಯ ಎಸಗಿದವರನ್ನು ಕಠಿಣ ಶಿಕ್ಷೆಗೊಳಪಡಿಸಬೇಕು : ಸಿದ್ದರಾಮಯ್ಯ

ಬೆಂಗಳೂರು: ಪಾದರಾಯನಪುರದಲ್ಲಿ ಗಲಭೆ ಮಾಡಿದವರಿಗೆ ಕಠಿಣ ಶಿಕ್ಷೆಯಾಗಬೇಕೆಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಅವರು,‘ ಪಾದರಾಯನಪುರದಲ್ಲಿ ನಡೆದಿರುವ ಘಟನೆ ತುಂಬಾ ದುರಾದೃಷ್ಟಕರವಾಗಿದೆ. ಇಂತಹ ಘಟನೆಗಳು ಪುನಾರ್ವರ್ತನೆಯಾಗದಂತೆ ತಡೆಯಬೇಕಾದರೆ ಈ ದುಷ್ಕೃತ್ಯದಲ್ಲಿ ತೊಡಗಿದವರನ್ನು ಗುರುತಿಸಿ ಶಿಕ್ಷಿಸಬೇಕು‘ ಎಂದು ಒತ್ತಾಯಿಸಿದ್ದಾರೆ.

ಕೊರೋನಾ ವಾರಿಯರ್ಸ್ ತಮ್ಮ ಜೀವ ಪಣಕ್ಕಿಟ್ಟು ಕೆಲಸ ಮಾಡ್ತಿದ್ದಾರೆ. ನಮ್ಮ ರಕ್ಷಿಸಲು ಹಗಲು ರಾತ್ರಿ ದುಡಿಯುತ್ತಿದ್ದಾರೆ.ಹಾಗಾಗಿ ಅವರಿಗೆ ಸಹಕಾರ ನೀಡುವುದು ನಮ್ಮೆಲ್ಲರ ಕರ್ತವ್ಯವಾಗಿದೆ. ಜನರು ಗಾಳಿ ಸುದ್ದಿಯಿಂದ ಪ್ರಚೋದನೆಗೆ ಒಳಗಾಗದೆ ಆರೋಗ್ಯ ಸಿಬ್ಬಂದಿ ಜೊತೆ ಸಂಯಮದಿಂದ ವರ್ತಿಸಬೇಕು ಎಂದು ಹೇಳಿದ್ದಾರೆ.

5 COMMENTS

LEAVE A REPLY

Please enter your comment!
Please enter your name here

- Advertisment -

Most Popular

Recent Comments