‘ಬಿಜೆಪಿಯ ಬಿ ಟೀಂ ಜೆಡಿಎಸ್ಗೆ ಯಾವುದೇ ಪಕ್ಷ ಬಹುಮತದೊಂದಿಗೆ ಅಧಿಕಾರಕ್ಕೆ ಬರಬಾರದು. ಯಾವಾಗಲೂ ಹೊಂದಾಣಿಕೆಗೆ ಕಾಯುತ್ತಿರುತ್ತಾರೆ’ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಟೀಕಿಸಿದರು.
‘ಜೆಡಿಎಸ್ನವರು 30 ಸ್ಥಾನ ಗೆದ್ದರೆ ಸಾಕು ಅಂತಾರೆ.ಹಿಂದೆ ಉತ್ತಮ ಆಡಳಿತ ನೀಡಲಿ ಎಂಬ ಕಾರಣಕ್ಕೆ ಅವರಿಗೆ ಮುಖ್ಯಮಂತ್ರಿ ಸ್ಥಾನ ನೀಡಲಾಯಿತು. ಕೊಟ್ಟ ಕುದುರೆ ಏರದವನು ಶೂರನೂ ಅಲ್ಲ; ಧೀರನೂ ಅಲ್ಲ ಎಂಬಂತೆ ನನ್ನಿಂದ ಸಮ್ಮಿಶ್ರ ಸರ್ಕಾರ ಬಿದ್ದು ಹೋಯಿತು ಎಂದು ಆರೋಪ ಮಾಡಿದ್ದಾರೆ. ಸರ್ಕಾರ ಬೀಳಲು ಅವರೇ ಕಾರಣ. ಶಾಸಕರ ಕಷ್ಟ, ಸುಖ ಕೇಳಿದ್ದರೆ ಸರ್ಕಾರ ಬೀಳುತ್ತಿರಲಿಲ್ಲ’ ಎಂದು ಕುಟುಕಿದರು.
ಬಿಜೆಪಿ ಬಗ್ಗೆ ಪ್ರೀತಿ ಇದ್ದರೇ ನೇರವಾಗಿ ಬೆಂಬಲಿಸಲಿ. ಯಾರ ಅಭ್ಯಂತರವೂ ಇಲ್ಲ. ಜನರ ದಾರಿ ತಪ್ಪಿಸಬೇಡಿ’ , ‘ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಅವರನ್ನು ಏಕೆ ಬಂಧಿಸಬೇಕು? ಹಿಂದೆ ಡಿವೈಎಸ್ಪಿ ಗಣಪತಿ ಆತ್ಮಹತ್ಯೆ ಪ್ರಕರಣದಲ್ಲಿಯೂ ಹೀಗೆ ಮಾಡಿದ್ದೀರಾ ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿ ಹೇಳುತ್ತಾರೆ. ಇದಕ್ಕೆ ಜೆಡಿಎಸ್ ಬಿಜೆಪಿಯ ಬಿ ಟೀಂ ಎನ್ನುವುದು’ ಎಂದು ವ್ಯಂಗ್ಯವಾಡಿದರು.