‘ಬಾಯಿ ಬಡಾಯಿ ಮೂಲಕ ದಲಿತರ ಉದ್ಧಾರ ಆಗುವುದಿಲ್ಲ’ : ಸಿದ್ದರಾಮಯ್ಯ ಫುಲ್​ ಗರಂ..!

0
258

ಬೆಂಗಳೂರು : ಮಾಜಿ ಸಿಎಂ ಸಿದ್ದರಾಮಯ್ಯ ಅವರು ಕೇಂದ್ರ ಸರ್ಕಾರದ ವಿರುದ್ಧ ಫುಲ್ ಗರಂ ಆಗಿದ್ದಾರೆ..! ಬಾಯಿ ಬಡಾಯಿ ಮೂಲಕ ದಲಿತರ ಉದ್ಧಾರ ಆಗಲ್ಲ ಅಂತ ಟ್ವೀಟ್​ ಮೂಲಕ ಕೇಂದ್ರದ ವಿರುದ್ಧ ಹರಿಹಾಯ್ದಿದ್ದಾರೆ.
”ಬಾಯಿ ಬಡಾಯಿ ಮೂಲಕ ದಲಿತರ ಉದ್ಧಾರ ಆಗುವುದಿಲ್ಲ. ಮೊನ್ನೆ ನಡೆದ ಚುನಾವಣೆಯಲ್ಲಿ ರಾಜ್ಯದ ಮೀಸಲು ಕ್ಷೇತ್ರಗಳಲ್ಲಿ ಕೂಡಾ ಬಿಜೆಪಿ ಅಭ್ಯರ್ಥಿಗಳು ಗೆದ್ದಿದ್ದಾರೆ. ಅವರಿಗೆ ಅಭಿನಂದನೆಗಳು. ಹೀಗಿದ್ದರೂ ಕೇಂದ್ರ ಸಚಿವ ಸಂಪುಟದಲ್ಲಿ ರಾಜ್ಯದ ಒಬ್ಬ ದಲಿತ ಸಂಸದನಿಗೂ ಅವಕಾಶ ಸಿಕ್ಕಿಲ್ಲ. ಇದಕ್ಕಿಂತ ದೊಡ್ಡ ಅನ್ಯಾಯ, ದ್ರೋಹ ಬೇರೇನಿದೆ?” ಅಂತ ಟ್ವೀಟ್ ಮಾಡಿದ್ದಾರೆ.
ಅಷ್ಟೇ ಅಲ್ಲದೆ ”ದಲಿತರ ಬಗ್ಗೆ, ಬಾಬಾಸಾಹೇಬ್ ಅಂಬೇಡ್ಕರ್ ಅವರ ಬಗ್ಗೆ ಭಾರತೀಯ ಜನತಾ ಪಕ್ಷ ಮತ್ತು ಅವರ ನೇತೃತ್ವದ ಕೇಂದ್ರ ಸರ್ಕಾರಕ್ಕೆ ಪ್ರಾಮಾಣಿಕವಾದ ಕಾಳಜಿ ಮತ್ತು ಬದ್ಧತೆ ಇದ್ದರೆ ಮೊದಲು ರಾಷ್ಟ್ರಮಟ್ಟದಲ್ಲಿ ಎಸ್‌ಸಿಪಿ-ಟಿಎಸ್‌ಪಿ ಕಾಯ್ದೆಯನ್ನು ರೂಪಿಸಿ ಜಾರಿಗೆ ತರುವ ಧೈರ್ಯವನ್ನು ತೋರಿಸಲಿ. ಇದನ್ನು ಬೇಕಾದರೆ ಸವಾಲಾಗಿ ಸ್ವೀಕರಿಸಲಿ” ಅಂತಲೂ ಮತ್ತೊಂದು ಟ್ವೀಟ್​​ನಲ್ಲಿ ಹೇಳಿದ್ದಾರೆ.

LEAVE A REPLY

Please enter your comment!
Please enter your name here