ಸಿದ್ದರಾಮಯ್ಯಗೆ ಏಕವಚನದಲ್ಲೇ ತಿರುಗೇಟು ನೀಡಿದ ಬಿಜೆಪಿ ಮುಖಂಡ

0
737

ಶಿವಮೊಗ್ಗ : ಮಾಜಿ ಸಿಎಂ ಸಿದ್ದರಾಮಯ್ಯರವರಿಗೆ ಮಾಡುವುದಕ್ಕೆ ಏನೂ ಕಸುಬಿಲ್ಲ. ಹಾಗಾಗಿ ಅವರ ಮಾತುಗಳಿಗೆ ತೂಕವಿಲ್ಲ. ಅವರ ಬಗ್ಗೆ ಕಾಂಗ್ರೆಸಿನವರೇ ತಲೆಕೆಡಿಸಿಕೊಂಡಿಲ್ಲ ಎಂದು ಎಂಎಲ್​ಸಿ ಆಯನೂರು ಮಂಜುನಾಥ್ ಸಿದ್ದರಾಮಯ್ಯ ವಿರುದ್ಧ ಕಿಡಿಕಾರಿದ್ದಾರೆ.
ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ ಆಡುವ ಭಾಷೆ ಭಾಷೆಯಲ್ಲ. ಆ ಮನುಷ್ಯನ ಭಾಷೆಗೆ ಯಾರೂ ತೂಕ ನೀಡಬಾರದು ಎಂದು ಏಕ ವಚನದಲ್ಲಿಯೇ, ನಿಂದಿಸಿದ್ದಾರೆ.
ರಾಜ್ಯದಲ್ಲಿ, ಬಾಯಿಗೆ ಬಂದಂತೆ, ಮಾತನಾಡಬಲ್ಲ ಏಕೈಕ ರಾಜಕಾರಣಿ ಎಂದರೆ ಅದು ಸಿದ್ದರಾಮಯ್ಯ . ಅವರು ವಿರುದ್ಧ 62 ಕೇಸುಗಳು ಎಸಿಬಿಯಲ್ಲಿ ಬಾಕಿ ಇವೆ. ಅವರೇ ರಾಜಿನಾಮೆ ನೀಡಬೇಕಾಗಿದೆ. ಇಂಥವರು ಅಮಿತ್ ಶಾ ರಾಜೀನಾಮೆ ಬಗ್ಗೆ ಮಾತನಾಡುತ್ತಾರೆ ಅಂತಾ ತಿರುಗೇಟು ನೀಡಿದರು.
ಎಸಿಬಿಯ ಹಲ್ಲುಗಳನ್ನು ಮುರಿದು, ಉಗುರುಗಳನ್ನು ಮೊಂಡು ಮಾಡಿರುವ ಸಿದ್ಧರಾಮಯ್ಯ, ಯಾವುದೋ ವಿಡಿಯೋ ಬಗ್ಗೆ ಮಾತನಾಡುತ್ತಾರೆ. ಅದು ಹಾಸ್ಯಾಸ್ಪದ ಎಂದು ಜರಿದರು. ತಮ್ಮ ಕೇಸುಗಳಿರುವ ಲೋಕಾಯುಕ್ತವನ್ನು ದುರ್ಬಲಗೊಳಿಸಿ, ಎಸಿಬಿಯನ್ನು ತಂದರು. ಭ್ರಷ್ಟಾಚಾರದ ಆರೋಪ ಹೊತ್ತಿರುವ ಸಿದ್ದರಾಮಯ್ಯಗೆ ಮತ್ತೊಬ್ಬರ ಬಗ್ಗೆ ಆರೋಪ ಮಾಡಲು ನೈತಿಕತೆ ಇಲ್ಲ. ಸಿದ್ದರಾಮಯ್ಯ ಅವರ ಮೇಲೆ ಎಸಿಬಿಯಲ್ಲಿ ಒಂದೇ ಒಂದು ಕೇಸು ಇಲ್ಲ ಎಂದು ಅವರು ಹೇಳಿದರೆ, ಶಿವಮೊಗ್ಗದ ಗೋಪಿ ಸರ್ಕಲ್ ನಲ್ಲಿ ದೊಡ್ಡ ಹಾರ ಹಾಕಿ ಅವರನ್ನು, ಸನ್ಮಾನಿಸುವೆ ಎಂದರು.
ಆತನ ವ್ಯಾಕರಣದಲ್ಲಿ ಬಹುವಚನವೇ ಇಲ್ಲ. ಆತ ಅತ್ಯಂತ ಸುಳ್ಳ, ದುರಾಂಹಕಾರಿ, ಭಾಷೆ ಮೇಲೆ ಹಿಡಿತವಿಲ್ಲದ ವ್ಯಕ್ತಿಯಾಗಿದ್ದು, ಬೇರೆಯವರಿಗೆ ವ್ಯಾಕರಣದ ಬಗ್ಗೆ ಪಾಠ ಮಾಡುತ್ತಾರೆ. ಇಂತಹ ಸಿದ್ದರಾಮಯ್ಯ ಬಗ್ಗೆ ತಲೆ ಕೆಡಿಸಿಕೊಳ್ಳುವ ಅವಶ್ಯಕತೆ ಇಲ್ಲವಾಗಿದ್ದು, ಅವರ ಬಗ್ಗೆ ಕಾಂಗ್ರೆಸ್ ನವರೇ ತಲೆ ಕೆಡಿಸಿಕೊಳ್ಳುತ್ತಿಲ್ಲ ಎಂದು ವ್ಯಂಗ್ಯವಾಡಿದ್ರು.

LEAVE A REPLY

Please enter your comment!
Please enter your name here