Home ರಾಜ್ಯ ಮಾಜಿ ಸಿಎಂ ಸಿದ್ದರಾಮಯ್ಯ ಅವ್ರಿಗೆ ಬೆಳ್ಳಿ ಖಡ್ಗ ನೀಡಿ ಹಾರ,ಪೇಟ ಹಾಕಿ ಸನ್ಮಾನಿಸಿದ ಧರ್ಮಗುರು..!

ಮಾಜಿ ಸಿಎಂ ಸಿದ್ದರಾಮಯ್ಯ ಅವ್ರಿಗೆ ಬೆಳ್ಳಿ ಖಡ್ಗ ನೀಡಿ ಹಾರ,ಪೇಟ ಹಾಕಿ ಸನ್ಮಾನಿಸಿದ ಧರ್ಮಗುರು..!

ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಜಮೀರ್ ಅಹಮ್ಮದ್ ನೇತೃತ್ವದಲ್ಲಿ ಮುಸ್ಮೀಂ ಧರ್ಮಗುರು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವ್ರಿಗೆ ಸನ್ಮಾನ ಮಾಡಿದ್ದಾರೆ.
ಕಾವೇರಿ ನಿವಾಸದಲ್ಲಿ ಸಿದ್ದರಾಮಯ್ಯ ಅವ್ರಿಗೆ ಬೆಳ್ಳಿ ಖಡ್ಗ ನೀಡಿ, ಹಾರ ಹಾಕಿ, ಪೇಟ ಧರಿಸಿ ಸನ್ಮಾನ ಮಾಡಿದ್ರು. ಬಳಿಕ ಮಾತಾಡಿದ ಸಿದ್ದರಾಯ್ಯ, ಬಿಜೆಪಿ ನಾಯಕರು ಟಿಪ್ಪು ಖಡ್ಗ ಕೈಯಲ್ಲಿ ಹಿಡಿದು ಪೇಟ ತೊಟ್ಟಾಗ ಬಿಜೆಪಿಯ ಯಾರೊಬ್ಬರೂ ವಿರೋಧ ಮಾಡಿರ್ಲಿಲ್ಲ. ಜಗದೀಶ್ ಶೆಟ್ಟರ್ ಟಿಪ್ಪು ಪುಸ್ತಕಕ್ಕೆ ಮುನ್ನುಡಿ ಬರೆದಿದ್ದಾರೆ. ಈಗ ಅವರುಗಳೇ ವಿರೋರ್ ವ್ಯಕ್ತಪಡಿಸ್ತಿದ್ದಾರೆ ಅಂತ ಹೇಳಿದ್ರು.
ಟಿಪ್ಪು ಸುಲ್ತಾನ್ ನ ಕಾಲದಲ್ಲಿ ಸಾಮರಸ್ಯ ಇತ್ತು. ಕಿತ್ತೂರು ರಾಣಿ ಚೆನ್ನಮ್ಮ, ವಾಲ್ಮೀಕಿ ಸೇರಿದಂತೆ 13 ಮಹನೀಯರ ಜಯಂತಿ ಮಾಡಿದ್ದೇವೆ. ಆದ್ರೆ, ಈ ಬಿಜೆಪಿಯವರು ರಾಜಕೀಯ ಉದ್ದೇಶಕ್ಕಾಗಿ ಟಿಪ್ಪು ಜಯಂತಿಯನ್ನು ವಿರೋಧಿಸ್ತಿದ್ದಾರೆ. ಅವರು ಗೋಮುಖ ವ್ಯಾಘ್ರಗಳು ಅಂದ್ರು. ಟಿಪ್ಪು ಕಾಲದಲ್ಲಿ ಹಿಂದುಗಳು ಉನ್ನತ ಹುದ್ದೆಗಳಲ್ಲಿದ್ರು ಅಂತ ಹೇಳಿದ ಸಿದ್ದರಾಮಯ್ಯ, ರಾಜ್ಯದ ಜನತೆಗೆ ಟಿಪ್ಪು ಜಯಂತಿ ಶುಭಾಶಯ ಕೋರಿದ್ರು.

LEAVE A REPLY

Please enter your comment!
Please enter your name here

- Advertisment -

Most Popular

5 ವರ್ಷದ ಬಾಲಕಿ ಕಾಣೆ

ಬೆಂಗಳೂರು : ನಗರದ ಮೆಜೆಸ್ಟಿಕ್ ಬಸ್ ನಿಲ್ದಾಣದಲ್ಲಿ 5 ವರ್ಷದ ಬಾಲಕಿ ಕಾಣೆಯಾಗಿದ್ದಾಳೆ. ಲೋಕಿತ ಕೆ.ಮರನ್ ಕಾಣೆಯಾಗಿರುವ ಬಾಲಕಿ‌. ಈಕೆ ತನ್ನ ತಾತನ ಜೊತೆ ಸೆ.18 ರಂದು ಮನೆಯಿಂದ ತೆರಳಿದ್ದಳು. ಮೆಜೆಸ್ಟಿಕ್ ನಿಲ್ದಾಣದಲ್ಲಿ...

ಅಕ್ಕ ಗೌರಿ ಲಂಕೇಶ್​ರನ್ನು ನೆನೆದು ಕಣ್ಣೀರಿಟ್ಟ ಇಂದ್ರಜಿತ್ ಲಂಕೇಶ್..!

ಬೆಂಗಳೂರು : ಸ್ಯಾಂಡಲ್​​ವುಡ್​ ಡ್ರಗ್ಸ್​ ಮಾಫಿಯಾ ವಿಚಾರಕ್ಕೆ ಸಂಬಂಧಿಸಿದಂತೆ ಸೋಮವಾರ ಸಿಸಿಬಿ ವಿಚಾರಣೆ ಎದುರಿಸಿದ್ದ ನಿರ್ದೇಶಕ ಇಂದ್ರಜಿತ್ ಲಂಕೇಶ್ ಇಂದು ಮತ್ತೊಮ್ಮೆ ಸಿಸಿಬಿ ಅಧಿಕಾರಿಗಳ ಮುಂದೆ ಹಾಜರಾಗುತ್ತಿದ್ದಾರೆ.  ಇಂದು ಸಿಸಿಬಿ ವಿಚಾರಣೆಗೆ ಹೋಗುವ...

ಸ್ಯಾಂಡಲ್​​ವುಡ್​​​​​ನಲ್ಲಿ ಡ್ರಗ್​ ಮಾಫಿಯಾ : ಇಂದು ಸಿಸಿಬಿಯಿಂದ ನಟಿ ರಾಗಿಣಿ ವಿಚಾರಣೆ

ಬೆಂಗಳೂರು :  ಸ್ಯಾಂಡಲ್​​​​ವುಡ್​​ನಲ್ಲಿ ಡ್ರಗ್​​ ಮಾಫಿಯಾದ ಬಗ್ಗೆ ಬಿಸಿಬಿಸಿ ಚರ್ಚೆ ನಡೀತಾ ಇದೆ. ಚಂದನವನಕ್ಕೆ ಮಾದಕ ಜಾಲ ಹಬ್ಬಿದೆಯೇ ಅಥವಾ ಇಲ್ಲವೇ ಅನ್ನೋದು ಸದ್ಯದ ಗಾಂಧಿನಗರದ ಹಾಟ್ ಸುದ್ದಿ. ಇದಕ್ಕೆ ಸಂಬಂಧಿಸಿದಂತೆ ನಟಿ ರಾಗಿಣಿ...

ಕೊರೋನಾದಿಂದ ಮಾಜಿ ಶಾಸಕ ಅಪ್ಪಾಜಿ ಗೌಡ ನಿಧನ

ಶಿವಮೊಗ್ಗ : ಭದ್ರಾವತಿಯ ಜೆಡಿಎಸ್ ನ ಮಾಜಿ ಶಾಸಕ ಅಪ್ಪಾಜಿಗೌಡ ವಿಧಿವಶರಾಗಿದ್ದಾರೆ. ಕಳೆದ ಕೆಲ ದಿನಗಳಿಂದ ಕೊರೋನಾ ಸೋಂಕಿಗೆ ಒಳಗಾಗಿದ್ದ ಅವರು,  ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ. ಅಪ್ಪಾಜಿಗೌಡರಿಗೆ 69 ವರ್ಷ ವಯಸ್ಸಾಗಿತ್ತು. ಪತ್ನಿ...

Recent Comments