Home ರಾಜ್ಯ ಹಾಸನದಲ್ಲಿ ಸಿಎಂ ಯಡಿಯೂರಪ್ಪ ವಿರುದ್ಧ ಸಿದ್ದರಾಮಯ್ಯ ವಾಗ್ದಾಳಿ

ಹಾಸನದಲ್ಲಿ ಸಿಎಂ ಯಡಿಯೂರಪ್ಪ ವಿರುದ್ಧ ಸಿದ್ದರಾಮಯ್ಯ ವಾಗ್ದಾಳಿ

ಹಾಸನ: ರಾಜ್ಯದಲ್ಲಿ ಉಪಚುನಾವಣೆಯ ಕಾವು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಹಾಸನದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಯಡಿಯೂರಪ್ಪ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಯಡಿಯೂರಪ್ಪ ಸರ್ಕಾರದಲ್ಲಿ ಜನರಿಗೆ ಉಪಯೋಗವಾಗುವಂತಹ ಯಾವ ಕೆಲಸವೂ ಕಾರ್ಯರೂಪಕ್ಕೆ ಬಂದಿಲ್ಲ. ಸರ್ಕಾರದ ಆಡಳಿತದಲ್ಲಿ ಯಡಿಯೂರಪ್ಪ ಇನ್ನು ಎಷ್ಟು ದಿನಗಳ ಕಾಲ ಇರುತ್ತಾರೋ ಗೊತ್ತಿಲ್ಲ. ಬಿಎಸ್ ವೈ ಮತ್ತು ಅವರ ಮಗ ತಾವೇ ಸರ್ವಾಧಿಕಾರಿ ಎನ್ನುವ ರೀತಿಯಲ್ಲಿ ವರ್ತಿಸುತ್ತಿದ್ದಾರೆ ಎಂದು ಹೇಳುವ ಮೂಲಕ ಸಿದ್ದರಾಮಯ್ಯ ಯಡಿಯೂರಪ್ಪ ಅವರ ವಿರುದ್ಧ ಗುಡುಗಿದ್ದಾರೆ.

 ನಾನು ಸಿಎಂ ಅಗಿ ಅಧಿಕಾರ ಸ್ವೀಕರಿಸುತ್ತಿದ್ದಂತೆ, ಅನ್ನಭಾಗ್ಯ ಯೋಜನೆ ಘೋಷಿಸುವೆ. ಪ್ರತಿ ಕುಟುಂಬಕ್ಕೆ ತಲಾ 7 ಕೆಜಿ ಅಕ್ಕಿ ಕೊಡಬೇಕೆಂದು ನಿರ್ಧರಿಸಿದ್ದೇನೆ. ನಾನು ಅಧಿಕಾರದಲ್ಲಿದ್ದಾಗ ಮನೆಯಿಂದ ಅಕ್ಕಿ ತಂದು ಜನರಿಗೆ ಕೊಟ್ಟಿರಲಿಲ್ಲ, ಜನರು ಕೊಡುವ ತೆರಿಗೆಯಲ್ಲೇ ಅಕ್ಕಿ ನೀಡಿದ್ದೆ. ಈಗ ಯಡಿಯೂರಪ್ಪ ಅಧಿಕಾರಕ್ಕೆ ಬಂದ ನಂತರ, 7 ಕೆಜಿ ಅಕ್ಕಿಯಿಂದ 5 ಕೆಜಿಗೆ ಇಳಿಸಿದ್ದಾನೆ ಎಂದು ಸಿದ್ದರಾಮಯ್ಯ ಏಕವಚನದಲ್ಲಿ ಬಿಎಸ್ ವೈ ವಿರುದ್ಧ ವಾಕ್ಸಸಮರ ನಡೆಸಿದ್ದಾರೆ.

ನಾನು ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ, ಶಾಸಕರಲ್ಲಿ ಯಾವುದೇ ಪಕ್ಷಪಾತ ಮಾಡಿರಲಿಲ್ಲ. ಎಲ್ಲಾ ಪಕ್ಷದ ಶಾಸಕರು, ಜನರ ಬೇಡಿಕೆಗೆ ಸ್ಪಂದಿಸುವಂತಹ ಕೆಲಸ ಮಾಡಿದ್ದರು ಎಂದು ಸಿದ್ದರಾಮಯ್ಯ ಯಡಿಯೂರಪ್ಪ ಸರ್ಕಾರ ಖಂಡಿಸುವ ಮೂಲಕ ವಾಗ್ದಾಳಿ ನಡೆಸಿದ್ದಾರೆ.

ನನ್ನ ಅಧಿಕಾರದ ಅವಧಿಯಲ್ಲಿ ಜನರ ಪರವಾಗಿ ಅನೇಕ ಕೆಲಸಗಳು ಮಾಡಿದ್ದು, ಸಿಎಂ ಪಟ್ಟ ದಕ್ಕದಂತೆ ಕೆಲವರು ಪಿತೂರಿ ನಡೆಸಿದ್ದರು. ನಾನು ಕೊಟ್ಟ ಅಕ್ಕಿಯಿಂದ ಊಟ ಮಾಡಿದವರು, ನನ್ನ ವಿರುದ್ದ ವೋಟ್ ಹಾಕಿದ್ದರು ಎಂದು ಸಿದ್ದರಾಮಯ್ಯ ಹೇಳಿದ್ದಾರೆ.  

LEAVE A REPLY

Please enter your comment!
Please enter your name here

- Advertisment -

Most Popular

ಸೋಂಕಿತನ ಅಂತ್ಯಕ್ರಿಯೇ ನೆರವೇರಿಸಿದ ಮುಸಲ್ಮಾನ್ ಯುವಕರು..!  

ಶಿವಮೊಗ್ಗ : ಕೊರೋನಾದಿಂದ ಸಾವನಪ್ಪಿದವನಿಗೆ, ಕುಟುಂಬಸ್ಥರು, ಮತ್ತು ನೆರೆಹೊರೆಯವರು, ಅಂತ್ಯಕ್ರಿಯೇ ಮಾಡಲು ಹಿಂಜರಿದ ಹಿನ್ನೆಲೆಯಲ್ಲಿ, ಮುಸಲ್ಮಾನ್ ಯುವಕರೇ ನಿಂತು ಅಂತ್ಯಕ್ರಿಯೇ ನಡೆಸಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ.  ಶಿವಮೊಗ್ಗದ  ಶಿರಾಳಕೊಪ್ಪದಲ್ಲಿಯೇ ಈ ಘಟನೆ ನಡೆದಿದ್ದು, ಇಲ್ಲಿನ...

ಲಾಕ್ ಡೌನ್ ವೇಳೆಯೇ ಅರಣ್ಯ ಲೂಟಿಗೆ ಯತ್ನಿಸಿದ ಖದೀಮರು..!

ಶಿವಮೊಗ್ಗ : ಇತ್ತ ರಾಜ್ಯದೆಲ್ಲೆಡೆ ಲಾಕ್ ಡೌನ್ ಘೋಷಣೆಯಾಗಿದೆ. ಅದೆಷ್ಟೊ ಜನರು ಮನೆ ಸೇರಿಕೊಂಡಿದ್ದರೆ, ಮತ್ತೆ ಕೆಲವರು ಆಸ್ಪತ್ರೆಗಳಿಗೆ ಅಲೆಯುತ್ತಿದ್ದಾರೆ.  ಇನ್ನೂ ಕೆಲವರು ಹೇಗಪ್ಪಾ ಲಸಿಕೆ ಪಡೆದುಕೊಳ್ಳೋದು ಎಂಬ ಯೋಚನೆಯಲ್ಲಿದ್ದಾರೆ. ಆದ್ರೆ ಇಲ್ಲಿನ...

‘ನನ್ನಿಂದ ಮನೆಯವರೆಗೂ ಸೋಂಕು ತಗುಲಿದೆ ಎಂದು ತಹಶೀಲ್ದಾರ್ ಸೂಸೈಡ್’

ಚಿಕ್ಕಮಗಳೂರು: ನನ್ನಿಂದಲೇ ನನ್ನ ಮಕ್ಕಳು, ಮೊಮ್ಮಕ್ಕಳಿಗೆ ಕೊರೋನ ಬಂತು. ನನಗೆ ವಯಸ್ಸಾಗಿದ್ದು, ಬದುಕುವ ಭರವಸೆ ಕಡಿಮೆ ಇದೆ. ಆದರೆ, ನನ್ನ ಮಕ್ಕಳು, ಮೊಮ್ಮಕ್ಕಳಿಗೆ ನನ್ನ ಕಣ್ಣೆದುರೇ ಏನಾದರೂ ಆದರೆ ಅದನ್ನ ನನ್ನಿಂದ ಸಹಿಸಿಕೊಳ್ಳಲು...

ಮನೆ, ಮನೆಗೆ ಹಾಲು ವಿತರಣೆಗೆ ಪೊಲೀಸರ ಅಡ್ಡಿ..!  

ಶಿವಮೊಗ್ಗ: ನಗರ ಪ್ರದೇಶದ ಮನೆಮನೆಗಳಿಗೆ ಹಾಲು ಮಾರಾಟ ಮಾಡುವ ರೈತರಿಗೂ ಬಿಡದೇ ಪೊಲೀಸರು, ದರ್ಪ ಮೆರೆದಿದ್ದಾರೆ ಎಂಬ ಆರೋಪ ಕೇಳಿ ಬರುತ್ತಿದೆ.  ಹಾಲು, ತರಕಾರಿ ಮನೆಮನೆಗೆ ತೆರಳಿ ಮಾರಾಟ ಮಾಡಬಹುದು ಎಂದು ಜಿಲ್ಲಾಡಳಿತ ಸೂಚನೆ...

Recent Comments