ಬೆಂಗಳೂರು : ಅಧಿಕ ರಕ್ತದೊತ್ತಡದ ಹಿನ್ನೆಲೆಯಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಖಾಸಗಿ ಆಸ್ಪತ್ರೆ ದಾಖಲಾಗಿದ್ದಾರೆ. ಕಾವೇರಿ ನಿವಾಸದಲ್ಲಿದ್ದ ಸಿದ್ದರಾಮಯ್ಯ ಅವರಿಗೆ ಇಂದು ಬೆಳಗ್ಗೆ 6.30 ರ ಸುಮಾರಿಗೆ ಅಧಿಕ ರಕ್ತದೊತ್ತಡ ಕಂಡು ಬಂದಿದೆ. ಜೊತೆಗೆ ಎದೆನೋವು ಕೂಡ ಕಾಣಿಸಿಕೊಂಡಿದ್ದು, ಮುಂಜಾಗ್ರತೆ ಕ್ರಮವಾಗಿ ಕೂಡಲೇ ಕುಟುಂಬಸ್ಥರು ಬೆಂಗಳೂರಿನ ಖಾಸಗಿ ಅಸ್ಪತ್ರೆಗೆ ಕರೆದೊಯ್ದಿದ್ದಾರೆ.
ವೈದ್ಯಕೀಯ ತಪಾಸಣೆ ಬಳಿಕ ಅವರನ್ನು ಆಸ್ಪತ್ರೆಯಲ್ಲಿ ದಾಖಲಿಸುವ ಅಗತ್ಯವಿಲ್ಲ ಎಂದು ವೈದ್ಯರು ಹೇಳಿಕೆಯ ನಂತರ ಮನೆಗೆ ವಾಪಸ್ಸಾಗಿದ್ದಾರೆ.