Home ರಾಜ್ಯ ಮಾಜಿ ಸಿಎಂ ಎಸ್​.ಎಂ.ಕೃಷ್ಣ ಅಳಿಯ ಸಿದ್ಧಾರ್ಥ್​​ ನಿಗೂಢ ನಾಪತ್ತೆ

ಮಾಜಿ ಸಿಎಂ ಎಸ್​.ಎಂ.ಕೃಷ್ಣ ಅಳಿಯ ಸಿದ್ಧಾರ್ಥ್​​ ನಿಗೂಢ ನಾಪತ್ತೆ

ಮಂಗಳೂರು : ಮಾಜಿ ಸಿಎಂ ಎಸ್​.ಎಂ.ಕೃಷ್ಣ ಅಳಿಯ ಹಾಗೂ  ಕೆಫೆ ಕಾಫಿ ಡೇ ಸಂಸ್ಥಾಪಕನಾಗಿರುವ ಸಿದ್ಧಾರ್ಥ್​​ ನಿನ್ನೆ ರಾತ್ರಿ  8 ಗಂಟೆಯ ಸುಮಾರಿಗೆ ನೇತ್ರಾವತಿ ನದಿ ಸೇತುವೆ ಬಳಿಯಿಂದ ನಿಗೂಢವಾಗಿ ನಾಪತ್ತೆಯಾಗಿದ್ದಾರೆ.

ಸಿದ್ದಾರ್ಥ್​ ಕಾರು ಚಾಲಕ ಬಸವರಾಜ್​ ಪಾಟೀಲ್ ಪೊಲೀಸರಿಗೆ ನೀಡಿರುವ ದೂರಿನ ಪ್ರಕಾರ ನಿನ್ನೆ ಇದ್ದಕ್ಕಿದ್ದಂತೆ  ಸಿದ್ದಾರ್ಥ್ ಮಂಗಳೂರಿಗೆ ಕರೆದೊಯ್ಯುವಂತೆ ತಿಳಿಸಿದರು. ಅದರಂತೆ ಡ್ರೈವರ್​ ಕರೆದುಕೊಂಡು ಹೋಗಿದ್ದಾನೆ. ಇನ್ನೇನು ಮಂಗಳೂರು ಸಮೀಪಿಸುತ್ತಿದ್ದಂತೆಯೇ ಡ್ರೈವರ್​ಗೆ ಸೈಟ್​ಗೆ ಹೋಗಬೇಕು ಎಡಗಡೆ ತಗೆದುಕೋ ಎಂದಿದ್ಧಾರೆ ಅದರಂತೆ ಬಂದಾಗ ನೇತ್ರಾವತಿ ನದಿಗೆ ಅಡ್ಡಲಾಗಿ ಕಟ್ಟಿರುವ ದೊಡ್ಡ ಸೇತುವೆಯೊಂದು ಸಿಕ್ಕಿದೆ. ತಕ್ಷಣ ಸಿದ್ದಾರ್ಥ್ ಕಾರ್​ ನಿಲ್ಲಿಸುವಂತೆ ತಿಳಿಸಿ ಕಾರಿನಿಂದ ಕೆಳಗಿಳಿದು ಡ್ರೈವರ್​ಗೆ ಕಾರ​ನ್ನು ಸೇತುವೆಯ ತುದಿಗೆ ನಿಲ್ಲಿಸು, ನೀನು ಕಾರಿನಲ್ಲಿಯೇ ಇರು, ನಾನು ಹೋಗಿ ವಾಕಿಂಗ್​ ಮಾಡಿಕೊಂಡು ಬರುತ್ತೇನೆ ಎಂದು ಹೇಳಿ ಫೋನ್​ನಲ್ಲಿ ಮಾತನಾಡಿಕೊಂಡು ಹೊರಟರು. ಸುಮಾರು ಗಂಟೆಯಾದರೂ ಸಿದ್ದಾರ್ಥ್ ವಾಪಾಸ್ ಬಾರದ ಕಾರಣ ಡ್ರೈವರ್ ಕಾಲ್ ಮಾಡಿದ್ದಾನೆ.  ಆದರೆ ಫೋನ್ ಸ್ವಿಚ್ ಆಫ್ ಬಂದಿದೆ. ತಕ್ಷಣ ಡ್ರೈವರ್ ಸಿದ್ದಾರ್ಥ್​ ಮಗನಿಗೆ ಕಾಲ್ ಮಾಡಿ ವಿಷಯ ತಿಳಿಸಿದ್ದಾರೆ . ವಿಷಯ ತಿಳಿಯುತ್ತಿದ್ದಂತೆ ಮಗ ಅಮಾರ್ತ್ಯ ಪೊಲೀಸರಿಗೆ ವಿಷಯ ತಿಳಿಸಿದ್ದಾರೆ. ಸದ್ಯ ಪೊಲೀಸರು ಪ್ರಕರಣವನ್ನು ದಾಖಲಿಸಿಕೊಂಡಿದ್ದು ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ.   

 

LEAVE A REPLY

Please enter your comment!
Please enter your name here

- Advertisment -

Most Popular

5 ವರ್ಷದ ಬಾಲಕಿ ಕಾಣೆ

ಬೆಂಗಳೂರು : ನಗರದ ಮೆಜೆಸ್ಟಿಕ್ ಬಸ್ ನಿಲ್ದಾಣದಲ್ಲಿ 5 ವರ್ಷದ ಬಾಲಕಿ ಕಾಣೆಯಾಗಿದ್ದಾಳೆ. ಲೋಕಿತ ಕೆ.ಮರನ್ ಕಾಣೆಯಾಗಿರುವ ಬಾಲಕಿ‌. ಈಕೆ ತನ್ನ ತಾತನ ಜೊತೆ ಸೆ.18 ರಂದು ಮನೆಯಿಂದ ತೆರಳಿದ್ದಳು. ಮೆಜೆಸ್ಟಿಕ್ ನಿಲ್ದಾಣದಲ್ಲಿ...

ಅಕ್ಕ ಗೌರಿ ಲಂಕೇಶ್​ರನ್ನು ನೆನೆದು ಕಣ್ಣೀರಿಟ್ಟ ಇಂದ್ರಜಿತ್ ಲಂಕೇಶ್..!

ಬೆಂಗಳೂರು : ಸ್ಯಾಂಡಲ್​​ವುಡ್​ ಡ್ರಗ್ಸ್​ ಮಾಫಿಯಾ ವಿಚಾರಕ್ಕೆ ಸಂಬಂಧಿಸಿದಂತೆ ಸೋಮವಾರ ಸಿಸಿಬಿ ವಿಚಾರಣೆ ಎದುರಿಸಿದ್ದ ನಿರ್ದೇಶಕ ಇಂದ್ರಜಿತ್ ಲಂಕೇಶ್ ಇಂದು ಮತ್ತೊಮ್ಮೆ ಸಿಸಿಬಿ ಅಧಿಕಾರಿಗಳ ಮುಂದೆ ಹಾಜರಾಗುತ್ತಿದ್ದಾರೆ.  ಇಂದು ಸಿಸಿಬಿ ವಿಚಾರಣೆಗೆ ಹೋಗುವ...

ಸ್ಯಾಂಡಲ್​​ವುಡ್​​​​​ನಲ್ಲಿ ಡ್ರಗ್​ ಮಾಫಿಯಾ : ಇಂದು ಸಿಸಿಬಿಯಿಂದ ನಟಿ ರಾಗಿಣಿ ವಿಚಾರಣೆ

ಬೆಂಗಳೂರು :  ಸ್ಯಾಂಡಲ್​​​​ವುಡ್​​ನಲ್ಲಿ ಡ್ರಗ್​​ ಮಾಫಿಯಾದ ಬಗ್ಗೆ ಬಿಸಿಬಿಸಿ ಚರ್ಚೆ ನಡೀತಾ ಇದೆ. ಚಂದನವನಕ್ಕೆ ಮಾದಕ ಜಾಲ ಹಬ್ಬಿದೆಯೇ ಅಥವಾ ಇಲ್ಲವೇ ಅನ್ನೋದು ಸದ್ಯದ ಗಾಂಧಿನಗರದ ಹಾಟ್ ಸುದ್ದಿ. ಇದಕ್ಕೆ ಸಂಬಂಧಿಸಿದಂತೆ ನಟಿ ರಾಗಿಣಿ...

ಕೊರೋನಾದಿಂದ ಮಾಜಿ ಶಾಸಕ ಅಪ್ಪಾಜಿ ಗೌಡ ನಿಧನ

ಶಿವಮೊಗ್ಗ : ಭದ್ರಾವತಿಯ ಜೆಡಿಎಸ್ ನ ಮಾಜಿ ಶಾಸಕ ಅಪ್ಪಾಜಿಗೌಡ ವಿಧಿವಶರಾಗಿದ್ದಾರೆ. ಕಳೆದ ಕೆಲ ದಿನಗಳಿಂದ ಕೊರೋನಾ ಸೋಂಕಿಗೆ ಒಳಗಾಗಿದ್ದ ಅವರು,  ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ. ಅಪ್ಪಾಜಿಗೌಡರಿಗೆ 69 ವರ್ಷ ವಯಸ್ಸಾಗಿತ್ತು. ಪತ್ನಿ...

Recent Comments