Home ರಾಜ್ಯ ಅಲ್ಪಸಂಖ್ಯಾತರ ಭವನದ ಮೇಲೆ ಕಲ್ಲು ತೂರಾಟ : ಆರು ಮಂದಿ ಅರೆಸ್ಟ್...!

ಅಲ್ಪಸಂಖ್ಯಾತರ ಭವನದ ಮೇಲೆ ಕಲ್ಲು ತೂರಾಟ : ಆರು ಮಂದಿ ಅರೆಸ್ಟ್…!

ಮಂಗಳೂರು : ನಗರದ ಸರಕಾರಿ ಅಲ್ಪಸಂಖ್ಯಾತರ ಭವನವೊಂದರ ಮೇಲೆ ಕಲ್ಲು ತೂರಿ ಹಾನಿಗೊಳಿಸಿದ ಕಿಡಿಗೇಡಿಗಳನ್ನ ಪೊಲೀಸರು ಸೆರೆ ಹಿಡಿದಿದ್ದಾರೆ. ಬಂಧಿತರನ್ನ ಧನರಾಜ್ ಶೆಟ್ಟಿ (21), ಸುಶಾಂತ್ (20), ಕಾರ್ತಿಕ್ ಶೆಟ್ಟಿ (26) ಸಾಗರ್ ಬಂಗೇರ (20), ಮನೀಶ್ ಪುತ್ರನ್ (20) ಎಂದು ಗುರುತಿಸಲಾಗಿದೆ.

ಬಂಧಿತರಲ್ಲಿ ಓರ್ವ ಅಪ್ರಾಪ್ತ ಬಾಲಕನೂ ಸೇರಿದ್ದು, ಬಂಧಿತರೆಲ್ಲರೂ ಮಂಗಳೂರು ನಗರ ಆಸುಪಾಸಿನ ನಿವಾಸಿಗಳೇ ಆಗಿದ್ದಾರೆ ಎನ್ನಲಾಗಿದೆ.

ಆಗಸ್ಟ್ 13 ತಡರಾತ್ರಿ ಕಿಡಿಗೇಡಿಗಳ ತಂಡವೊಂದು ಮಂಗಳೂರು ನಗರದ ಪಾಂಡೇಶ್ವರದಲ್ಲಿರುವ ಮೌಲಾನಾ ಆಜಾದ್ ಸರಕಾರಿ ಅಲ್ಪಸಂಖ್ಯಾತ ಕಚೇರಿಯ ಕಟ್ಟಡಕ್ಕೆ ಕಲ್ಲು ತೂರಿತ್ತು. ಪರಿಣಾಮ, ಕಟ್ಟಡಕ್ಕೆ ಅಳವಡಿಸಿದ್ದ ಗಾಜು ಪುಡಿಯಾಗಿತ್ತು. ಮರು ದಿನ ಬೆಳಗ್ಗೆ ಘಟನೆ ಬೆಳಕಿಗೆ ಬರುತ್ತಲೇ ಅಲ್ಪಸಂಖ್ಯಾತ ಇಲಾಖೆ ಅಧಿಕಾರಿಗಳು ಪಾಂಡೇಶ್ವರ ಠಾಣೆಯಲ್ಲಿ ದೂರನ್ನ ದಾಖಲಿಸಿದ್ದರು. ಅದರಂತೆ ಕಾರ್ಯಾಚರಣೆ ನಡೆಸಿದ ಪೊಲೀಸರು ಸಿಸಿಟಿವಿ ಫೂಟೇಜ್ ಆಧರಿಸಿ ಆರು ಮಂದಿಯನ್ನ ಸೆರೆ ಹಿಡಿದಿದ್ದಾರೆ. ಅಪ್ರಾಪ್ತನ ಹೊರತಾಗಿ ಉಳಿದ ಐವರು ಆರೋಪಿಗಳಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

ಇರ್ಷಾದ್ ಕಿನ್ನಿಗೋಳಿ

 

 

LEAVE A REPLY

Please enter your comment!
Please enter your name here

- Advertisment -

Most Popular

5 ವರ್ಷದ ಬಾಲಕಿ ಕಾಣೆ

ಬೆಂಗಳೂರು : ನಗರದ ಮೆಜೆಸ್ಟಿಕ್ ಬಸ್ ನಿಲ್ದಾಣದಲ್ಲಿ 5 ವರ್ಷದ ಬಾಲಕಿ ಕಾಣೆಯಾಗಿದ್ದಾಳೆ. ಲೋಕಿತ ಕೆ.ಮರನ್ ಕಾಣೆಯಾಗಿರುವ ಬಾಲಕಿ‌. ಈಕೆ ತನ್ನ ತಾತನ ಜೊತೆ ಸೆ.18 ರಂದು ಮನೆಯಿಂದ ತೆರಳಿದ್ದಳು. ಮೆಜೆಸ್ಟಿಕ್ ನಿಲ್ದಾಣದಲ್ಲಿ...

ಅಕ್ಕ ಗೌರಿ ಲಂಕೇಶ್​ರನ್ನು ನೆನೆದು ಕಣ್ಣೀರಿಟ್ಟ ಇಂದ್ರಜಿತ್ ಲಂಕೇಶ್..!

ಬೆಂಗಳೂರು : ಸ್ಯಾಂಡಲ್​​ವುಡ್​ ಡ್ರಗ್ಸ್​ ಮಾಫಿಯಾ ವಿಚಾರಕ್ಕೆ ಸಂಬಂಧಿಸಿದಂತೆ ಸೋಮವಾರ ಸಿಸಿಬಿ ವಿಚಾರಣೆ ಎದುರಿಸಿದ್ದ ನಿರ್ದೇಶಕ ಇಂದ್ರಜಿತ್ ಲಂಕೇಶ್ ಇಂದು ಮತ್ತೊಮ್ಮೆ ಸಿಸಿಬಿ ಅಧಿಕಾರಿಗಳ ಮುಂದೆ ಹಾಜರಾಗುತ್ತಿದ್ದಾರೆ.  ಇಂದು ಸಿಸಿಬಿ ವಿಚಾರಣೆಗೆ ಹೋಗುವ...

ಸ್ಯಾಂಡಲ್​​ವುಡ್​​​​​ನಲ್ಲಿ ಡ್ರಗ್​ ಮಾಫಿಯಾ : ಇಂದು ಸಿಸಿಬಿಯಿಂದ ನಟಿ ರಾಗಿಣಿ ವಿಚಾರಣೆ

ಬೆಂಗಳೂರು :  ಸ್ಯಾಂಡಲ್​​​​ವುಡ್​​ನಲ್ಲಿ ಡ್ರಗ್​​ ಮಾಫಿಯಾದ ಬಗ್ಗೆ ಬಿಸಿಬಿಸಿ ಚರ್ಚೆ ನಡೀತಾ ಇದೆ. ಚಂದನವನಕ್ಕೆ ಮಾದಕ ಜಾಲ ಹಬ್ಬಿದೆಯೇ ಅಥವಾ ಇಲ್ಲವೇ ಅನ್ನೋದು ಸದ್ಯದ ಗಾಂಧಿನಗರದ ಹಾಟ್ ಸುದ್ದಿ. ಇದಕ್ಕೆ ಸಂಬಂಧಿಸಿದಂತೆ ನಟಿ ರಾಗಿಣಿ...

ಕೊರೋನಾದಿಂದ ಮಾಜಿ ಶಾಸಕ ಅಪ್ಪಾಜಿ ಗೌಡ ನಿಧನ

ಶಿವಮೊಗ್ಗ : ಭದ್ರಾವತಿಯ ಜೆಡಿಎಸ್ ನ ಮಾಜಿ ಶಾಸಕ ಅಪ್ಪಾಜಿಗೌಡ ವಿಧಿವಶರಾಗಿದ್ದಾರೆ. ಕಳೆದ ಕೆಲ ದಿನಗಳಿಂದ ಕೊರೋನಾ ಸೋಂಕಿಗೆ ಒಳಗಾಗಿದ್ದ ಅವರು,  ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ. ಅಪ್ಪಾಜಿಗೌಡರಿಗೆ 69 ವರ್ಷ ವಯಸ್ಸಾಗಿತ್ತು. ಪತ್ನಿ...

Recent Comments