Home ಸಿನಿ ಪವರ್ ಕೊಟ್ಟ ಮಾತಿನಂತೆ ರೈತನಿಗೆ ಟ್ರ್ಯಾಕ್ಟರ್ ನೀಡಿದ ನಟ ಸೋನು ಸೂದ್ ..!

ಕೊಟ್ಟ ಮಾತಿನಂತೆ ರೈತನಿಗೆ ಟ್ರ್ಯಾಕ್ಟರ್ ನೀಡಿದ ನಟ ಸೋನು ಸೂದ್ ..!

ಬಹುಭಾಷಾ ನಟ ಸೋನು ಸೂದ್ ಕೊಟ್ಟಮಾತಿನಂತೆ ನಡೆದುಕೊಂಡಿದ್ದಾರೆ. ಎತ್ತುಗಳೇ ಇಲ್ಲದೆ ತಾವೇ ಎತ್ತುಗಳಾಗಿ ಉಳುಮೆ ಮಾಡ್ತಿದ್ದ ಕುಟುಂಬಕ್ಕೆ ಅವರು ಟ್ರ್ಯಾಕ್ಟರ್ ನೀಡಿದ್ದಾರೆ! ಆ ಮೂಲಕ ತಾವು ನೀಡಿದ್ದ ಮಾತನ್ನು ಉಳಿಸಿಕೊಂಡಿದ್ದಾರೆ.

ಆಂಧ್ರಪ್ರದೇಶದ ಚಿತ್ತೂರು ಜಿಲ್ಲೆಯ ಕೆ. ಮಹಲ್ ರಾಜಪಲ್ಲಿ ಮಂಡಲದ ರೈತ ನಾಗೇಶ್ವರ ರಾವ್ ತನ್ನ  ಹೆಣ್ಣು ಮಕ್ಕಳನ್ನು ಸೇರಿಸಿಕೊಂಡು, ತಾವೇ ಎತ್ತುಗಳಾಗಿ ಉಳುಮೆ ಮಾಡ್ತಿದ್ದ ವಿಡಿಯೋವೊಂದು ಇತ್ತೀಚೆಗೆ ವೈರಲ್ ಆಗಿತ್ತು. ಈ ವಿಡಿಯೋ ನೋಡಿದ್ದ ಸೋನು ಸೂದ್,. “ಈ ಕುಟುಂಬಕ್ಕೆ ಬೇಕಾಗಿರುವುದು ಎತ್ತುಗಳಲ್ಲ. ಇವರಿಗೆ ಟ್ರ್ಯಾಕ್ಟರ್​ ಬೇಕು. ಹೀಗಾಗಿ ಇವರ ಮನೆಗೆ ಟ್ರ್ಯಾಕ್ಟರ್​ ಕಳುಹಿಸುತ್ತಿದ್ದೇನೆ. ಇಂದು ಸಂಜೆಯ ಒಳಗಡೆ ನಿಮ್ಮ ಗದ್ದೆಯನ್ನು ಟ್ರ್ಯಾಕ್ಟರ್​ ಉಳುಮೆ ಮಾಡಲಿದೆ” ಅಂತ ಟ್ವೀಟ್ ಮಾಡಿದ್ದರು. ಅಂತೆಯೇ ಟ್ರ್ಯಾಕ್ಟರ್ ಅನ್ನು ಕಳುಹಿಸಿಕೊಟ್ಟಿದ್ದಾರೆ.  ಅಷ್ಟೇ ಅಲ್ಲದೆ ಹೆಣ್ಣುಮಕ್ಕಳು ಶಿಕ್ಷಣದ ಕಡೆಗೆ ಗಮನಹರಿಸುವಂತೆ ಸೋನು ಸೂದ್ ಕಿವಿಮಾತು ಹೇಳಿದ್ದಾರೆ.

ಇನ್ನು ಸೋನು ಸೂದ್ ಇತ್ತೀಚೆಗೆ ಲಾಕ್​ಡೌನ್ ಸಂದರ್ಭದಲ್ಲಿ ಸಾವಿರಾರು ಜನರನ್ನು ತಮ್ಮ ತವರಿಗೆ ತಲುಪಿಸುವ ಕೆಲಸವನ್ನು ಮಾಡಿದ್ದರು. ಸಹಾಯ ಬೇಡಿದ್ದವರಿಗೆ ಹಣಕಾಸಿನ ನೆರವು ನೀಡಿದ್ದರು. ಇದೀಗ ಆಂಧ್ರದ ರೈತ ಕುಟುಂಬಕ್ಕೆ ಟ್ರ್ಯಾಕ್ಟರ್ ನೀಡಿದ್ದಾರೆ. ಹೀಗೆ ಸೋನು ಸೂದ್ ಮಾದರಿಯಾಗಿದ್ದಾರೆ.

 

LEAVE A REPLY

Please enter your comment!
Please enter your name here

- Advertisment -

Most Popular

‘ಘಟನೆಯ ಹೊಣೆ ಹೊತ್ತು ಈಶ್ವರಪ್ಪ ರಾಜೀನಾಮೆ ನೀಡಲಿ ಪ್ರಸನ್ನ್ ಕುಮಾರ್ ಆಗ್ರಹ’

ಶಿವಮೊಗ್ಗ: ಶಿವಮೊಗ್ಗದಲ್ಲಿ ಕಲ್ಲು ಗಣಿಗಾರಿಕೆ ಸ್ಫೋಟಕದ ಬಗ್ಗೆ ಸಿಬಿಐ ತನಿಖೆಯಾಗಬೇಕು ಎಂದು ಶಿವಮೊಗ್ಗದ ಮಾಜಿ ಶಾಸಕ ಪ್ರಸನ್ನ ಕುಮಾರ್ ಆಗ್ರಹಿಸಿದ್ದಾರೆ. ಒಂದು ಲೋಡ್ ಸ್ಪೋಟಕ ವಸ್ತುಗಳು ನಗರಕ್ಕೆ ಬಂದಿದ್ದು ಹೇಗೆ. ನಗರಕ್ಕೆ ಬರುವ...

ಉಸಿರು ಕಟ್ಟಿಸುವ ವಾತಾವರಣವೇ ಪಕ್ಷ ಬಿಡಲು ಕಾರಣ: ರಾಜಣ್ಣ ಕೊರವಿ

ಹುಬ್ಬಳ್ಳಿ: ಜೆಡಿಎಸ್ ಪಕ್ಷದಲ್ಲಿನ ಉಸಿರು ‌ಕಟ್ಟಿಸಿವ ವಾತಾವರಣದಿಂದ ಬೆಸತ್ತು ನಾನು ಹಾಗೂ ನನ್ನ ಬೆಂಬಲಿಗರು ಬಿಜೆಪಿ ಪಕ್ಷವನ್ನು ಸೇರ್ಪಡೆಯಾಗುತ್ತಿದ್ದೇವೆ ಎಂದು ಮಹಾನಗರ ಪಾಲಿಕೆ ಮಾಜಿ ಸದಸ್ಯ‌ ರಾಜಣ್ಣ ಕೊರವಿ ಹೇಳಿದರು. ನಗರದಲ್ಲಿಂದು ಸುದ್ದಿಗೋಷ್ಟಿಯಲ್ಲಿ ಮಾತನಾಡಿದ...

‘ಉದ್ದವ್ ಠಾಕ್ರೆ ವಿರುದ್ಧ ಸಿಡಿದೆದ್ದ ಕರವೇ‌ ಕಾರ್ಯಕರ್ತರು’

ಹುಬ್ಬಳ್ಳಿ: ಶಿವಸೇನೆ ಮುಖ್ಯಸ್ಥ ಹಾಗೂ ಮಹಾರಾಷ್ಟ್ರ ಸಿಎಂ ಉದ್ದವ ಠಾಕ್ರೆ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ ಹಾಗೂ ಕನ್ನಡ ಪರ ಸಂಘಟನೆಗಳಲ್ಲಿ ಆಕ್ರೋಶ ಭುಗಿಲೆದ್ದಿದೆ. ಶಿವಸೇನಾ ವಿರುದ್ದ ಸಿಡಿದೆದ್ದ ಕರವೇ ಯುವಸೇನಾ ಕಾರ್ಯಕರ್ತರು ಕರವೇ...

‘ಮೃತ ಕುಟುಂಬಗಳಿಗೆ ರಾಷ್ಟ್ರಪತಿ ಸಾಂತ್ವನ’

ಶಿವಮೊಗ್ಗ: ಕಲ್ಲು ಕ್ವಾರಿ ದುರಂತಕ್ಕೆ ರಾಷ್ಟ್ರಪತಿ ರಮಾನಾಥ್ ಕೋವಿಂದ್ ಧಿಗ್ಬ್ರಮೆಗೊಂಡಿದ್ದಾರೆ. ಸ್ಪೋಟದಿಂದ ಜೀವ ಹಾನಿಯಾಗಿರೋದು ನೋವಿನ ಸಂಗತಿ. ಇಂತಹದೊಂದು ದುರಾದೃಷ್ಟಕರ ಘಟನೆ ನೆಡೆಯಬಾರದಿತ್ತು. ಮೃತರ ಕುಟುಂಬಗಳಿಗೆ ರಾಷ್ಟ್ರಪತಿ ಸಾಂತ್ವನ. ಘಟನೆಯಲ್ಲಿ ಗಾಯಗೊಂಡವರು ಶೀಘ್ರವೇ...

Recent Comments