Home ಸಿನಿ ಪವರ್ ಶಸ್ತ್ರಚಿಕಿತ್ಸೆಗಾಗಿ ಫಿಲಿಪೈನ್ಸ್​ನಿಂದ 39 ಮಕ್ಕಳನ್ನು ದೆಹಲಿಗೆ ಕರೆತರಲಿದ್ದಾರೆ ಸೋನು ಸೂದ್..!

ಶಸ್ತ್ರಚಿಕಿತ್ಸೆಗಾಗಿ ಫಿಲಿಪೈನ್ಸ್​ನಿಂದ 39 ಮಕ್ಕಳನ್ನು ದೆಹಲಿಗೆ ಕರೆತರಲಿದ್ದಾರೆ ಸೋನು ಸೂದ್..!

ನವದೆಹಲಿ :  ನಟ ಸೋನು ಸೂದ್ ಪಿತ್ತಜನಕಾಂಗದ ಕಸಿ ಶಸ್ತ್ರಚಿಕಿತ್ಸೆಗೆ ಒಳಗಾಗಬೇಕಿರುವ 39 ಮಕ್ಕಳನ್ನು ದೂರದ ಫಿಲಿಪೈನ್ಸ್​ನಿಂದ ನವದೆಹಲಿಗೆ ಕರೆತರುವ ವ್ಯವಸ್ಥೆ ಮಾಡಲು ಮುಂದಾಗಿದ್ದಾರೆ.

ಬಿಲಿಯರಿ ಅಟ್ರೆಸಿಯಾ ಅನ್ನೋ ಪಿತ್ತಜನಕಾಂಗದ ಕಾಯಿಲೆಯಿಂದ ಬಳಲುತ್ತಿದ್ದ ಫಿಲಿಫೈನ್ಸ್​ನ ಮಕ್ಕಳು ಕೊರೋನಾ ಸೋಂಕಿನ ಕಾರಣದಿಂದ ಶಸ್ತ್ರಚಿಕಿತ್ಸೆಗೊಳಗಾಗಲು ನವದೆಹಲಿಗೆ ಬರಲು ಸಾಧ್ಯವಾಗುತ್ತಿಲ್ಲ. ಈ ವಿಚಾರವನ್ನು ತಿಳಿದ ಸೋನು ಸೂದ್ ಆ ಮಕ್ಕಳನ್ನು ನವದೆಹಲಿಗೆ ಕರೆತರುಲು ಮುಂದಾಗಿದ್ದಾರೆ. “ ಈ ಅಮೂಲ್ಯ ಜೀವಗಳನ್ನು ಉಳಿಸೋಣ. ಮುಂದಿನ ಎರಡು ದಿನಗಳಲ್ಲಿ ಅವರನ್ನು ಭಾರತಕ್ಕೆ ಕರೆತರುವ ವ್ಯವಸ್ಥೆ ಮಾಡುತ್ತೇನೆ’’ ಎಂದು ಸೋನು ಸೂದ್ ಟ್ವೀಟ್​ ಮಾಡಿದ್ದಾರೆ.

ಕೊರೋನಾ ಕಾರಣದಿಂದ ತಮ್ಮ ಊರುಗಳನ್ನು ತಲುಪಲು ಸಾಧ್ಯವಾಗದೆ ಕಂಗಾಲಾಗಿದ್ದ ವಲಸಿಗರಿಗೆ ತಮ್ಮ ತಮ್ಮ ಊರುಗಳನ್ನು ಸೇರುವ ವ್ಯವಸ್ಥೆ ಮಾಡಿಕೊಟ್ಟಿದ್ದ ಸೋನು ಸೂದ್ ಒಂದಿಲ್ಲೊಂದು ಜನಪರ ಕೆಲಸಗಳ ಮೂಲಕ ಮನೆಮಾತಾಗಿದ್ದಾರೆ. ಇತ್ತೀಚೆಗೆ ಆಂಧ್ರಪ್ರದೇಶದ ಬಡ ರೈತ ಕುಟುಂಬವೊಂದಕ್ಕೆ ಟ್ರ್ಯಾಕ್ಟರ್ ನೀಡಿದ್ದನ್ನು ಕೂಡ ಈ ವೇಳೆ ಸ್ಮರಿಸಬಹುದು.

 

LEAVE A REPLY

Please enter your comment!
Please enter your name here

- Advertisment -

Most Popular

5 ವರ್ಷದ ಬಾಲಕಿ ಕಾಣೆ

ಬೆಂಗಳೂರು : ನಗರದ ಮೆಜೆಸ್ಟಿಕ್ ಬಸ್ ನಿಲ್ದಾಣದಲ್ಲಿ 5 ವರ್ಷದ ಬಾಲಕಿ ಕಾಣೆಯಾಗಿದ್ದಾಳೆ. ಲೋಕಿತ ಕೆ.ಮರನ್ ಕಾಣೆಯಾಗಿರುವ ಬಾಲಕಿ‌. ಈಕೆ ತನ್ನ ತಾತನ ಜೊತೆ ಸೆ.18 ರಂದು ಮನೆಯಿಂದ ತೆರಳಿದ್ದಳು. ಮೆಜೆಸ್ಟಿಕ್ ನಿಲ್ದಾಣದಲ್ಲಿ...

ಅಕ್ಕ ಗೌರಿ ಲಂಕೇಶ್​ರನ್ನು ನೆನೆದು ಕಣ್ಣೀರಿಟ್ಟ ಇಂದ್ರಜಿತ್ ಲಂಕೇಶ್..!

ಬೆಂಗಳೂರು : ಸ್ಯಾಂಡಲ್​​ವುಡ್​ ಡ್ರಗ್ಸ್​ ಮಾಫಿಯಾ ವಿಚಾರಕ್ಕೆ ಸಂಬಂಧಿಸಿದಂತೆ ಸೋಮವಾರ ಸಿಸಿಬಿ ವಿಚಾರಣೆ ಎದುರಿಸಿದ್ದ ನಿರ್ದೇಶಕ ಇಂದ್ರಜಿತ್ ಲಂಕೇಶ್ ಇಂದು ಮತ್ತೊಮ್ಮೆ ಸಿಸಿಬಿ ಅಧಿಕಾರಿಗಳ ಮುಂದೆ ಹಾಜರಾಗುತ್ತಿದ್ದಾರೆ.  ಇಂದು ಸಿಸಿಬಿ ವಿಚಾರಣೆಗೆ ಹೋಗುವ...

ಸ್ಯಾಂಡಲ್​​ವುಡ್​​​​​ನಲ್ಲಿ ಡ್ರಗ್​ ಮಾಫಿಯಾ : ಇಂದು ಸಿಸಿಬಿಯಿಂದ ನಟಿ ರಾಗಿಣಿ ವಿಚಾರಣೆ

ಬೆಂಗಳೂರು :  ಸ್ಯಾಂಡಲ್​​​​ವುಡ್​​ನಲ್ಲಿ ಡ್ರಗ್​​ ಮಾಫಿಯಾದ ಬಗ್ಗೆ ಬಿಸಿಬಿಸಿ ಚರ್ಚೆ ನಡೀತಾ ಇದೆ. ಚಂದನವನಕ್ಕೆ ಮಾದಕ ಜಾಲ ಹಬ್ಬಿದೆಯೇ ಅಥವಾ ಇಲ್ಲವೇ ಅನ್ನೋದು ಸದ್ಯದ ಗಾಂಧಿನಗರದ ಹಾಟ್ ಸುದ್ದಿ. ಇದಕ್ಕೆ ಸಂಬಂಧಿಸಿದಂತೆ ನಟಿ ರಾಗಿಣಿ...

ಕೊರೋನಾದಿಂದ ಮಾಜಿ ಶಾಸಕ ಅಪ್ಪಾಜಿ ಗೌಡ ನಿಧನ

ಶಿವಮೊಗ್ಗ : ಭದ್ರಾವತಿಯ ಜೆಡಿಎಸ್ ನ ಮಾಜಿ ಶಾಸಕ ಅಪ್ಪಾಜಿಗೌಡ ವಿಧಿವಶರಾಗಿದ್ದಾರೆ. ಕಳೆದ ಕೆಲ ದಿನಗಳಿಂದ ಕೊರೋನಾ ಸೋಂಕಿಗೆ ಒಳಗಾಗಿದ್ದ ಅವರು,  ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ. ಅಪ್ಪಾಜಿಗೌಡರಿಗೆ 69 ವರ್ಷ ವಯಸ್ಸಾಗಿತ್ತು. ಪತ್ನಿ...

Recent Comments