Home uncategorized ಅಂತರ ರಾಜ್ಯ ಬಸ್ ಸಂಚಾರ ಶೀಘ್ರ ಆರಂಭ

ಅಂತರ ರಾಜ್ಯ ಬಸ್ ಸಂಚಾರ ಶೀಘ್ರ ಆರಂಭ

ಹುಬ್ಬಳ್ಳಿ : ಹುಬ್ಬಳ್ಳಿಯಿಂದ ಅಂತರರಾಜ್ಯ ಬಸ್ಸುಗಳ ಸಂಚಾರವನ್ನು ಆರಂಭಿಸಲು ವಾಕರಸಾ ಸಂಸ್ಥೆ ಹುಬ್ಬಳ್ಳಿ ವಿಭಾಗದಲ್ಲಿ ಎಲ್ಲ ಪೂರ್ವ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ಈ ಬಗ್ಗೆ ನಿರ್ದೇಶನ ಬಂದ ಕೂಡಲೆ ಮಾರ್ಗಸೂಚಿ ನಿರ್ದೇಶನಗಳ ಪ್ರಕಾರ ಎಲ್ಲಾ ಸುರಕ್ಷತಾ ಕ್ರಮಗಳೊಂದಿಗೆ ಬಸ್ಸುಗಳ ಕಾರ್ಯಾಚರಣೆಯನ್ನು ಮರು ಪ್ರಾರಂಭ ಮಾಡಲಾಗುತ್ತದೆ ಎಂದು ಹುಬ್ಬಳ್ಳಿ ವಿಭಾಗೀಯ ನಿಯಂತ್ರಣಾಧಿಕಾರಿ ಎಚ್. ರಾಮನಗೌಡರ ತಿಳಿಸಿದ್ದಾರೆ.

ಲಾಕ್ ಡೌನ್ ಪೂರ್ವದಲ್ಲಿ ಹುಬ್ಬಳ್ಳಿ ವಿಭಾಗದಿಂದ ಮಹಾರಾಷ್ಟ್ರಕ್ಕೆ 38, ಗೋವಾ 11, ತೆಲಂಗಾಣ 12, ತಮಿಳುನಾಡು 2 ಹಾಗೂ ಆಂಧ್ರಪ್ರದೇಶಕ್ಕೆ 2 ಒಟ್ಟು 65 ಬಸ್ಸುಗಳು ಸಂಚರಿಸುತ್ತಿದ್ದವು.

ಮುಂಬೈ, ಶಿರಡಿ, ಪಿಂಪ್ರಿ, ಹೈದರಾಬಾದ್, ಚೆನ್ನೈ, ಸೋಲಾಪುರ ಮುಂತಾದ ಪ್ರಮುಖ ಸ್ಥಳಗಳಿಗೆ ವೋಲ್ವೊ, ಎಸಿ ಸ್ಲೀಪರ್, ನಾನ್ ಎಸಿ ಸ್ಲೀಪರ್ ಹಾಗೂ ರಾಜಹಂಸ ಸೇರಿದಂತೆ 26 ಪ್ರತಿಷ್ಟಿತ ಐಶಾರಾಮಿ ಬಸ್ಸುಗಳು ಸಂಚರಿಸುತ್ತಿದ್ದವು.

ಇವುಗಳೊಂದಿಗೆ ಮುಂಬೈ, ಪೂನಾ, ಬೊರಿವಿಲಿ, ಪಣಜಿ, ವಾಸ್ಕೋ, ಮಡಗಾಂವ, ಔರಂಗಾಬಾದ್, ಇಚಲಕರಂಜಿ, ಮೀರಜ್, ಸೋಲಾಪುರ, ಬಾರ್ಶಿ, ಮಂತ್ರಾಲಯ, ಹೈದರಾಬಾದ್ ಮತ್ತಿತರ ಸ್ಥಳಗಳಿಗೆ 39 ವೇಗದೂತ ಬಸ್ಸುಗಳನ್ನು ಸಹಾ ಕಾರ್ಯಾಚರಣೆ ಮಾಡಲಾಗುತ್ತಿತ್ತು.

ಕೊರೋನಾ ಸೋಂಕಿನ ಭೀತಿಯ ಹಿನ್ನೆಲೆಯಲ್ಲಿ ಹಿರಿಯ ಅಧಿಕಾರಿಗಳೊಂದಿಗೆ ಚರ್ಚಿಸಿ ಪ್ರಯಾಣಿಕರ ಬೇಡಿಕೆಗೆ ತಕ್ಕಂತೆ ಯಾವ ಮಾರ್ಗಗಳಲ್ಲಿ ಯಾವ ಬಗೆಯ ಮತ್ತು ಎಷ್ಟು ಬಸ್ಸುಗಳನ್ನು ಕಾರ್ಯಾಚರಣೆ ಮಾಡಬೇಕು ಎಂಬ ಬಗ್ಗೆ ನಿರ್ಧರಿಸಲಾಗುತ್ತದೆ ಎಂದು ಮಾಹಿತಿ ನೀಡಿದ್ದಾರೆ.

LEAVE A REPLY

Please enter your comment!
Please enter your name here

- Advertisment -

Most Popular

 RAF ಘಟಕ ಶಂಕುಸ್ಥಾಪನೆ ವೇಳೆ ಕನ್ನಡಕ್ಕೆ ಒತ್ತು ನೀಡಿಲ್ಲ: ಹೆಚ್.ಡಿ.ಕೆ.

ಶಿವಮೊಗ್ಗ: ಶಿವಮೊಗ್ಗದ ಭದ್ರಾವತಿಯಲ್ಲಿ ಆರ್.ಎ.ಎಫ್. ಘಟಕ ಶಂಕುಸ್ಥಾಪನೆ ವಿಚಾರಕ್ಕೆ ಹೆಚ್.ಡಿ.ಕೆ. ಆಕ್ರೋಶ ವ್ಯಕಪಡಿಸಿದ್ದಾರೆ. ಶಂಕುಸ್ಥಾಪನೆ ವೇಳೆ ಫಲಕಗಳನ್ನು ಕನ್ನಡದಲ್ಲಿ ಹಾಕಿಸಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿ ಟ್ವೀಟ್ ಮಾಡಿದ್ದಾರೆ. ಟ್ವೀಟ್ ಮೂಲಕ ಆಕ್ರೋಶ ವ್ಯಕ್ತಪಡಿಸಿರುವ ಹೆಚ್.ಡಿ.ಕೆ.,...

‘ಕೇಂದ್ರ ಗೃಹ ಸಚಿವರ ಆಗಮನಕ್ಕೆ ರೈತರ ವಿರೋಧ’

ಬೆಳಗಾವಿ: ಇಂದು ಬೆಳಗಾವಿಯಲ್ಲಿ ಬಿಜೆಪಿ ಸಮಾವೇಶಕ್ಕೆ ಅಮಿತ್ ಶಾ ಆಗಮನ ಹಿನ್ನಲೆಯಲ್ಲಿ ಬೆಳಗಾವಿ ಚನ್ನಮ್ಮ ವೃತ್ತದಲ್ಲಿ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ರೈತ ಮುಖಂಡ ಚೂನಪ್ಪ ಪೂಜಾರಿ ನೇತೃತ್ವದಲ್ಲಿ ಪ್ರತಿಭಟನೆ. ಕೇಂದ್ರದ ಹೊಸ ಕೃಷಿ ಕಾಯ್ದೆಗೆ...

ಕರೋನಾ ಲಸಿಕೆ ಬಂದಿರುವುದು ಸಂತೋಷ : ಯು.ಟಿ.ಖಾದರ್

ಬೆಂಗಳೂರು: ಕೊರೋನಾ ಲಸಿಕೆ ವಿತರಣಾ ಹಿನ್ನಲೆಯಲ್ಲಿ ಕಾಂಗ್ರೆಸ್ ಶಾಸಕ ಯು.ಟಿ.ಖಾದರ್ ಖಾರವಾಗಿ ಟ್ವೀಟ್ ಮಾಡಿದ್ದಾರೆ. ಕೊರೊನಾ ಲಸಿಕೆ ಬಂದಿರುವುದು ಸಂತೋಷ. ಆದರೆ ಮೊದಲು ಗ್ರೂಪ್ ಡಿ ನೌಕರರ ಮೇಲೆ ಯಾಕೆ ಪ್ರಯೋಗ ಮಾಡಬೇಕು....

‘ರಾಜ್ಯದಲ್ಲಿ ಕೊರೋನಾ ಲಸಿಕೆ ವಿತರಣೆ’

ಕಲಬುರಗಿ: ಕಲಬುರಗಿಯಲ್ಲಿ ನಗರದ ಜಿಮ್ಸ್ ಕಾಲೇಜಿನಲ್ಲಿ ಸಂಸದ ಉಮೇಶ್ ಜಾಧವ್ ಕೊವಿಡ್ ವ್ಯಾಕ್ಸಿನ್ ಗೆ ಚಾಲನೆ ನೀಡಿದರು. ಜಿಲ್ಲೆಯ 8 ಆರೋಗ್ಯ ಕೇಂದ್ರಗಳಲ್ಲಿ ವ್ಯಾಕ್ಸಿನ್ ಗೆ ಚಾಲನೆ ನೀಡಲಾಯಿತು. ಒಂದು ಕೇಂದ್ರದಲ್ಲಿ 100...

Recent Comments