Home ರಾಜ್ಯ ಇತರೆ ನಿಖಿಲ್ ಗೆಲುವಿಗಾಗಿ 101 ಕಾಯಿ ಒಡೆದು ಪೂಜೆ..!

ನಿಖಿಲ್ ಗೆಲುವಿಗಾಗಿ 101 ಕಾಯಿ ಒಡೆದು ಪೂಜೆ..!

ರಾಮನಗರ: ಮಂಡ್ಯ ಲೋಕಸಭಾ ಕ್ಷೇತ್ರದ ಮೈತ್ರಿ ಅಭ್ಯರ್ಥಿ ನಿಖಿಲ್‌ ಕುಮಾರ್ ಸ್ವಾಮಿ ಗೆಲುವಿಗೆ ಪ್ರಾರ್ಥಿಸಿ ಜೆಡಿಎಸ್ ಮುಖಂಡರು ರಾಮನಗರದಲ್ಲಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ನಗರ ದೇವತೆ ಚಾಮುಂಡೇಶ್ವರಿ ದೇವಸ್ಥಾನದಲ್ಲಿ 101 ತೆಂಗಿನಕಾಯಿ ಒಡೆದು ಮುಖಂಡರು ಪೂಜೆ ಸಲ್ಲಿಸಿದ್ದಾರೆ.

ಸುಮಲತಾ ಅಂಬರೀಶ್ ಹಾಗೂ ನಿಖಿಲ್ ಕುಮಾರಸ್ವಾಮಿ ಸ್ಪರ್ಧೆಯಿಂದ ಮಂಡ್ಯ ಕ್ಷೇತ್ರ ಇಡೀ ದೇಶದ ಗಮನ ಸೆಳೆದಿದೆ. ಹಾಗಾಗಿ ಇಲ್ಲಿನ ಫಲಿತಾಂಶದ ಬಗ್ಗೆಯೂ ಎಲ್ಲರಲ್ಲೂ ತೀವ್ರ ಕುತೂಹಲವಿದೆ. ಇಡೀ ದೇಶವೇ ಮಂಡ್ಯ ಫಲಿತಾಂಶಕ್ಕಾಗಿ ಕಾಯುತ್ತಿದ್ದು, ಈ ಹಿನ್ನೆಲೆಯಲ್ಲಿ ನಿಖಿಲ್ ಗೆಲುವಿಗಾಗಿ ಪೂಜೆ ನಡೆದಿದೆ. ಸಿಎಂ ಪುತ್ರ ನಿಖಿಲ್‌ಕುಮಾರಸ್ವಾಮಿ ಭಾರಿ ಅಂತರದಲ್ಲಿ ಗೆಲುವು ಸಾಧಿಸಬೇಕು. ಅದಕ್ಕಾಗಿ ಜೆಡಿಎಸ್ ಮುಖಂಡರು ಶಕ್ತಿ ದೇವತೆ ಮೊರೆ ಹೋಗಿದ್ದಾರೆ. ದೇವಾಲಯದ ಮುಂದೆ 101 ತೆಂಗಿನಕಾಯಿ ಒಡೆದು ಪೂಜೆ ನೆರವೇರಿಸಲಾಗಿದೆ.

LEAVE A REPLY

Please enter your comment!
Please enter your name here

- Advertisment -

Most Popular

ದೇಶದಲ್ಲಿ  24 ಗಂಟೆಗಳಲ್ಲಿ 48,648 ಕೊರೋನಾ ಕೇಸ್ ಪತ್ತೆ!

ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 48,648 ಮಂದಿಯಲ್ಲಿ ಕೊರೋನಾ ಸೋಂಕು ಪತ್ತೆಯಾಗಿದೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 80,88,851ಕ್ಕೆ ತಲುಪಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ...

 ಸಿನಿಮೀಯ ರೀತಿಯಲ್ಲಿ ನಗರಸಭೆ ಸದಸ್ಯ ಕಿಡ್ನಾಪ್​!

ಕೊಪ್ಪಳ : ಸಿನಿಮೀಯ ರೀತಿಯಲ್ಲಿ ನಗರಸಭೆ ಸದಸ್ಯನನ್ನು ಕಿಡ್ನಾಪ್ ಮಾಡಲಾಗಿದೆ. ಕಿಡ್ನಾಪ್​ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಕೊಪ್ಪಳ ಜಿಲ್ಲೆಯ ಗಂಗಾವತಿಯಲ್ಲಿ ನವೆಂಬರ್ 2 ರಂದು ನಗರಸಭೆ ಚುನಾವಣೆ ನಡೆಯಲಿದ್ದು, ಗಂಗಾವತಿ ನಗರಸಭೆ ಕಾಂಗ್ರೆಸ್ ಸದಸ್ಯ...

ಅಲಹಬಾದ್​ ಹೈಕೋರ್ಟ್ ನಿಗಾದಲ್ಲಿ ಹತ್ರಾಸ್​ ಗ್ಯಾಂಗ್ ರೇಪ್​ ಕೇಸ್ ತನಿಖೆಗೆ ಸುಪ್ರೀಂ ಆದೇಶ

ನವದೆಹಲಿ : ಉತ್ತರ ಪ್ರದೇಶ ಹತ್ರಾಸ್​​​​ ಗ್ಯಾಂಗ್​ ರೇಪ್​​ ಪ್ರಕರಣದ ತನಿಖೆ ಅಲಹಬಾದ್​ ಹೈಕೋರ್ಟ್​ ನಿಗಾದಲ್ಲಿ ನಡೆಯಬೇಕೆಂದು ಸುಪ್ರೀಂ ಕೋರ್ಟ್​ ಆದೇಶಿಸಿದೆ. ಸದ್ಯ ಸಿಬಿಐ ಪ್ರಕರಣದ ತನಿಖೆಯನ್ನು ನಡೆಸುತ್ತಿದ್ದು, ತನಿಖಾ ತಂಡದಲ್ಲಿರುವ ಅಧಿಕಾರಿಗಳನ್ನು ರಾಜ್ಯದಿಂದ...

ಡಿ.ಬಾಸ್​​ಗಾಗಿ ಕನ್ನಡ ಕಲಿತ ಜಗಮಪತಿ ಬಾಬು..!

ಸಾಲ್ಟ್ ಅಂಡ್ ಪೆಪ್ಪರ್ ಲುಕ್​ನಲ್ಲಿ ಸೌತ್​ನಲ್ಲಿ ಸಂಚಲನ ಸೃಷ್ಠಿಸಿರೋ ಜಗಪತಿ ಬಾಬು, ಮತ್ತೊಂದು ನೂತನ ದಾಖಲೆ ಬರೆದಿದ್ದಾರೆ. ಅದೂ ಡಿ ಬಾಸ್ ದರ್ಶನ್​ಗಾಗಿ ಅನ್ನೋದು ವಿಶೇಷ. ಇಷ್ಟಕ್ಕೂ ಮೋಸ್ಡ್ ಡಿಮ್ಯಾಂಡಿಂಗ್ ಜಗಪತಿ ಬಾಬು...

Recent Comments