ಬೆಂಗಳೂರು : ಬೆಂಗಳೂರಿನ ನಗರದಲ್ಲಿ ವೃದ್ಧಾಶ್ರಮಗಳ ಹೆಸರಿನಲ್ಲಿ ನಡೆಯುತ್ತಿರುವ ಸಾವಿನ ದಂಧೆಗಳ ಕುರಿತು ನಿನ್ನೆ ಪವರ್ ಟಿವಿ, ರಹಸ್ಯ ಕಾರ್ಯಚರಣೆ ನಡೆಸಿ “ಸಾಯಿಸಿ ಬಿಡ್ತಾರೆ ಹುಷಾರ್” ಎಂಬ ಕಾರ್ಯಕ್ರಮದ ಮೂಲಕ ವರದಿ ಬಿತ್ತರಿಸಿತ್ತು. ಆ ವರದಿಯ ಕುರಿತಾಗಿ ಆರೋಗ್ಯ ಸಚಿವರಾದ ಶ್ರೀರಾಮುಲು ಟ್ವೀಟ್ ಮೂಲಕ ಶ್ಲಾಘನೆ ವ್ಯಕ್ತಪಡಿಸಿದ್ದಾರೆ.
“ಬೆಂಗಳೂರಿನ ಕೆಲವು ವೃದ್ಧಾಶ್ರಮಗಳಲ್ಲಿ ನಡೆಯುತ್ತಿರುವ ಅಮಾನವೀಯ ಚಟುವಟಿಕೆಗಳ ಬಗ್ಗೆ ಪವರ್ ಟಿವಿ ನಡೆಸಿದ ರಹಸ್ಯ ಕಾರ್ಯಚರಣೆ ವರದಿಯನ್ನು ನೋಡಿ ನನ್ನ ಮನಸ್ಸಿಗೆ ಬಹಳ ನೋವಾಗಿದೆ ಈ ವಿಷಯಕ್ಕೆ ಸಂಬಂಧಿಸಿದಂತೆ, ತಕ್ಷಣ ತನಿಖೆ ನಡೆಸಿ ವರದಿ ನೀಡುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದ್ದೇನೆ. ತಪ್ಪು ಮಾಡಿರುವುದು ತನಿಖೆಯಲ್ಲಿ ಸಾಬೀತಾದಲ್ಲಿ ಅಂತಹಾ ವೃದ್ಧಾಶ್ರಮಗಳ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು. ರಹಸ್ಯ ಕಾರ್ಯಚರಣೆ ನಡೆಸಿದ ಪವರ್ ಟಿವಿ ಅವರ ಸಾಮಾಜಿಕ ಕಳಕಳಿಯನ್ನು ನಾನು ಈ ಸಂದರ್ಭದಲ್ಲಿ ಶ್ಲಾಘಿಸುತ್ತೇನೆ “ಎಂದು ಟ್ವೀಟ್ ಮಾಡಿದ್ದಾರೆ.
ಬೆಂಗಳೂರಿನ ಕೆಲವು ವೃದ್ಧಾಶ್ರಮಗಳಲ್ಲಿ ನಡೆಯುತ್ತಿರುವ ಅಮಾನವೀಯ ಚಟುವಟಿಕೆಗಳ ಬಗ್ಗೆ @powertvnews ನಡೆಸಿದ ರಹಸ್ಯ ಕಾರ್ಯಾಚರಣೆಯ ವರದಿಯನ್ನು ನೋಡಿ ನನ್ನ ಮನಸ್ಸಿಗೆ ಬಹಳ ನೋವಾಗಿದೆ. ಈ ವಿಷಯಕ್ಕೆ ಸಂಬಂಧಿಸಿದಂತೆ, ತಕ್ಷಣ ತನಿಖೆ ನಡೆಸಿ, ವರದಿ ನೀಡುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದ್ದೇನೆ.
— B Sriramulu (@sriramulubjp) December 25, 2019