ಬೆಂಗಳೂರು: ಲಾಕ್ಡೌನ್ ಹಿನ್ನೆಲೆ ಎಸ್ಎಸ್ಎಲ್ಸಿ ಪರೀಕ್ಷೆಗಳು ನಡೆಸದೇ ಮುಂದೂಡಲಾಗಿತ್ತು. ಎಸ್ಎಸ್ಎಲ್ಸಿ ಪರೀಕ್ಷೆ ವೇಳಾಪಟ್ಟಿಯನ್ನು ಸೋಮವಾರ ಅಂತಿಮಗೊಳಿಸಿ ಪ್ರಕಟಿಸುವುದಾಗಿ ಶಿಕ್ಷಣ ಸಚಿವ ಎಸ್ ಸುರೇಶ್ ಕುಮಾರ್ ಹೇಳಿದ್ದಾರೆ.
ಈ ಬಗ್ಗೆ ಮಾಹಿತಿ ನಿಡಿರುವ ಅವರು, ‘ಎಸ್ಎಸ್ಎಲ್ಸಿ ಪರೀಕ್ಷೆಗಳನ್ನು ಶೀಘ್ರವಾಗಿ ನಡೆಸುವ ಸಲುವಾಗಿ ಶಿಕ್ಷಣ ಇಲಾಖೆಯಲ್ಲಿ ಚರ್ಚೆಗಳು ನಡೆಯುತ್ತಿದೆ. ಇದರ ಬಗ್ಗೆ ಸೋಮವಾರ ಅಂತಿಮ ತೀರ್ಮಾನ ತೆಗೆದುಕೊಂಡು ಬಳಿಕ ಪರೀಕ್ಷೆ ವೇಳಾಪಟ್ಟಿಯನ್ನು ಬಿಡುಗಡೆ ಮಾಡುತ್ತೇವೆ‘ ಎಂದಿದ್ದಾರೆ.
ಲಾಕ್ಡೌನ್ ಆದಾಗಿನಿಂದ ವಿದ್ಯಾರ್ಥಿಗಳಿಗೆ ಆನ್ಲೈನ್ ಪುನರ್ಮನನ ತರಗತಿಗಳನ್ನು ನಡೆಸಲಾಗುತ್ತಿದ್ದು, ಜೂನ್ ಮೊದಲ ವಾರಕ್ಕೆ ತರಗತಿಗಳು ಅಂತ್ಯಗೊಳ್ಳಲಿವೆ. ಹಾಗಾಗಿ ಆ ಬಳಿಕವೇ ಅಂದರೆ ಜೂನ್ ಎರಡನೇ ಅಥವಾ ಮೂರನೇ ವಾರದಲ್ಲಿ ಪರೀಕ್ಷೆಗಳನ್ನು ನಡೆಸುವ ಸಾಧ್ಯತೆಯೂ ಹೆಚ್ಚಾಗಿದೆ.
2beaver