ಎಸ್ಎಸ್ಎಲ್​ಸಿ ಪರೀಕ್ಷೆ ದಿನಾಂಕ ನಿಗದಿ : ಜೂನ್ 25 ರಿಂದ ಪರೀಕ್ಷೆ ಆರಂಭ

0
415

ಬೆಂಗಳೂರು: ರಾಜ್ಯದಾದ್ಯಂತ ಲಾಕ್​ಡೌನ್ ಆದೇಶಿಸಿದ್ದ ಹಿನ್ನೆಲೆ ಎಸ್ಎಸ್ಎಲ್​ಸಿ ಪರೀಕ್ಷೆಗಳನ್ನು ಮುಂದೂಡಲಾಗಿತ್ತು. ಆದರೆ ಈಗ ಎಸ್ಎಸ್ಎಲ್​ಸಿ ಪರೀಕ್ಷೆಗಳು ನಡೆಯುವ ದಿನ ನಿಗದಿಯಾಗಿದ್ದು, ಜೂನ್ 25 ರಿಂದ 4 ರವರೆಗೆ ಪರೀಕ್ಷೆಗಳು ನಡೆಯಲಿವೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರು ಎಸ್. ಸುರೇಶ್ ಕುಮಾರ್ ಸೂಚನೆ ನೀಡಿದ್ದಾರೆ.

ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಆರೋಗ್ಯ ಅಧಿಕಾರಿಗಳ ಸಲಹೆ ಪಡೆದು ಪರೀಕ್ಷೆ ನಡೆಸಲಾಗುತ್ತದೆ. ಅಲ್ಲದೆ ಪರೀಕ್ಷೆಗಾಗಿ 43,720 ಕೊಠಡಿಗಳನ್ನು ಸಿದ್ಧಗೊಳಿಸಲು ತೀರ್ಮಾನಿಸಿದ್ದು, ಪರೀಕ್ಷಾ ಕೇಂದ್ರಗಳಲ್ಲಿ ಥರ್ಮಲ್  ಸ್ಕ್ರೀನಿಂಗ್ ಬಳಸಲಾಗುತ್ತದೆ. ಅಷ್ಟೇ ಅಲ್ಲ ಪರೀಕ್ಷೆಗೆ ಮೊದಲು ಎಲ್ಲಾ ಕೊಠಡಿಗಳನ್ನು ಸ್ಯಾನಿಟೈಸರ್ ಮಾಡಲಾಗುತ್ತದೆ. ಇನ್ನು ಪ್ರತಿದಿನ ವಿದ್ಯಾರ್ಥಿಗಳ ಆರೋಗ್ಯ ತಪಾಸಣೆ  ಮಾಡಲಾಗುವುದಲ್ಲದೆ ಆರೋಗ್ಯ ಸಮಸ್ಯೆ ಇದ್ದವರಿಗೆ ಪ್ರತ್ಯೇಕ ಕೊಠಡಿ ವ್ಯವಸ್ಥೆಯನ್ನು ಮಾಡಲಾಗುವುದು. ಪರೀಕ್ಷೆ ವೇಳೆ ಸಾಮಾಜಿಕ ಅಂತರ ಹಾಗೂ ಮಾಸ್ಕ್​ಗಳನ್ನು ಕಡ್ಡಾಯವಾಗಿ ಧರಿಸಬೇಕು ಎಂದು ಹೇಳಿದ್ದಾರೆ.

ಜೂನ್ 25 ರಿಂದ ಜುಲೈ 4 ರವರೆಗೆಎಸ್​ಎಸ್ಎಲ್​ಸಿ ಪರೀಕ್ಷೆ ನಡೆಯಲಿದ್ದು, ಇಂಗ್ಲೀಷ್, ಗಣಿತ, ವಿಜ್ಞಾನಕ್ಕೆ ಒಂದೊಂದು ದಿನ ರಜೆಯನ್ನು ನೀಡಲಾಗುತ್ತದೆ. 10 ದಿನಗಳ ಕಾಲ ಎಸ್ಎಸ್ಎಲ್​ಸಿ ಪರೀಕ್ಷೆ ನಡೆಯಲಿದ್ದು, ಮೇ 25 ರೊಳಗೆ ಪರೀಕ್ಷಾ ಕೇಂದ್ರ ಆಯ್ಕೆಗೆ ಅವಕಾಶ ನೀಡಲಾಗಿದೆ.

ಲಾಕ್​ಡೌನ್​ನಿಂದ ಬಾಕಿ ಇದ್ದ ದ್ವಿತೀಯ ಪಿಯುಸಿಯ ಇಂಗ್ಲೀಷ್ ಪರೀಕ್ಷೆ ಗೂ ದಿನ ನಿಗದಿಯಾಗಿದ್ದು, ಜೂನ್ 18 ರಂದು ಪರೀಕ್ಷೆಯನ್ನು ನಡೆಸಲಾಗುತ್ತದೆ ಎಂದಿದ್ದಾರೆ.

LEAVE A REPLY

Please enter your comment!
Please enter your name here