ಬೆಂಗಳೂರು : ಕೊರೋನಾ ಸೋಂಕು ನಿಯಂತ್ರಣಕ್ಕೆ ಸಂಬಂಧಿಸಿದಂತೆ ನಗರದಲ್ಲಿ ಮತ್ತೆ ಲಾಕ್ಡೌನ್ ಮಾಡುವುದಿಲ್ಲ ಎಂದು ಹೇಳಿರುವ ರಾಜ್ಯ ಸರ್ಕಾರದ ವಿರುದ್ಧ ಹರಿಹಾಯ್ದಿರುವ ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಬೆಂಗಳೂರು ನಗರದಲ್ಲಿ ಪರಿಸ್ಥಿತಿ ಕೈಮೀರಿ ಹೋದರೆ ಅದರ ಸಂಪೂರ್ಣ ಹೊಣೆಯನ್ನು ರಾಜ್ಯ ಸರ್ಕಾರವೇ ಹೊರಬೇಕೆಂದು ಹೇಳಿದ್ದಾರೆ.
ಈ ಬಗ್ಗೆ ಕೆಪಿಸಿಸಿ ಕಚೇರಿಯಲ್ಲಿ ಪ್ರತಿಕ್ರಿಯೆ ನೀಡಿರುವ ವಿರೋಧ ಪಕ್ಷದ ನಾಯಕ ಸಿದ್ಧರಾಮಯ್ಯ “ಕೊರೋನಾ ನಿಯಂತ್ರಿಸುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ, ಈಗ ಕೊರೋನಾ ಸೋಂಕು ಹೆಚ್ಚಾಗುತ್ತಿದೆ ಈಗ ಲಾಕ್ಡೌನ್ ಹೇರಿಕೆ ಮಾಡಬೇಕಿತ್ತು ಇಂದು ಸರ್ಕಾರ ಕರೆದಿರುವ ಬೆಂಗಳೂರು ವಿಭಾಗದ ಶಾಸಕರ ಸಭೆಯಲ್ಲಿ ನಮ್ಮ ಪಕ್ಷದ ಶಾಸಕರು ಈ ಬಗ್ಗೆ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಬೆಂಗಳೂರಿನಲ್ಲಿ ಕೊರೋನಾದಿಂದ ಏನಾದರೂ ಅವಘಡಗಳು ಸಂಭವಿಸಿದಲ್ಲಿ ಅದಕ್ಕೆ ರಾಜ್ಯ ಸರ್ಕಾರ ನೇರ ಹೊಣೆ ”. ಎಂದು ಪ್ರತಿಕ್ರಿಯೆ ನೀಡಿದ್ದಾರೆ.
zithromax clamydia
zithromax pill