ಹುಬ್ಬಳ್ಳಿ: ಪಾಕಿಸ್ತಾನ ಪರ ಘೋಷಣೆ ಕೂಗಿದ ಆರೋಪದ ಮೇಲೆ ಬಂಧಿತರಾಗಿದ್ದ ಕಾಶ್ಮೀರಾದ ಮೂರು ಮಂದಿ ವಿದ್ಯಾರ್ಥಿಗಳನ್ನು ಇಂದು ಕೋರ್ಟ್ಗೆ ಹಾಜರುಪಡಿಸಲಾಗಿತ್ತು. ಈ ವೇಳೆ ಹುಬ್ಬಳ್ಳಿ ನ್ಯಾಯಾಲಯದ ಆವರಣದಲ್ಲಿ ನೆರೆದಿದ್ದ ಸಾರ್ವಜನಿಕರು ಹಲ್ಲೆ ಮಾಡಿದ್ದಾರೆ.
ವಿದ್ಯಾರ್ಥಿಗಳನ್ನು ಹುಬ್ಬಳ್ಳಿಯ 3ನೇ ಜೆಎಂಎಫ್ಸಿ ನ್ಯಾಯಲಯಕ್ಕೆ ಆರೋಪಿಗಳನ್ನು ಹಾಜರುಪಡಿಲಾಗಿದೆ. ಅವರು ಕೋರ್ಟ್ಹಾಲ್ನಿಂದ ಹೊರಬರುವ ವೇಳೆ ಅಲ್ಲಿದ್ದ ಸಾರ್ವಜನಿಕರು ಭಾರತ ಮಾತಾಕಿ ಜೈ ಎಂದು ಘೋಷಣೆ ಕೂಗುತ್ತಾ, ಅವರ ಮೇಲೆ ಚಪ್ಪಲಿ, ಶೂಗಳನ್ನು ಎಸೆದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಹುಬ್ಬಳ್ಳಿಯ ಕೆಎಲ್ಇ ಟೆಕ್ನಿಕಲ್ ಕಾಲೇಜಿನಲ್ಲಿ ವ್ಯಾಸಾಂಗ ಮಾಡುತ್ತಿರುವ ವಿದ್ಯಾರ್ಥಿಗಳು ಪಾಕಿಸ್ತಾನದ ಪರವಾಗಿ ಘೋಷಣೆ ಕೂಗಿದ್ದಲ್ಲದೆ, ಈ ವಿಡೀಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿದ್ದರು. ಈ ಸಂಬಂಧ ಅವರನ್ನು ಬಂಧಿಸಲಾಗಿತ್ತು. ಇಂದು ಅವರನ್ನು ಹುಬ್ಬಳ್ಳಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದು, ಅವರಿಗೆ ಮಾರ್ಚ್ 2 ರವರೆಗೆ ನ್ಯಾಯಾಂಗ ಬಂಧನಕ್ಕೊಳಪಡಿಸಲಾಗಿದೆ.