Home ರಾಜ್ಯ ಖ್ಯಾತ ರಂಗಭೂಮಿ ಕಲಾವಿದೆ ಸುಭದ್ರಮ್ಮ ಮನ್ಸೂರು ವಿಧಿವಶ 

ಖ್ಯಾತ ರಂಗಭೂಮಿ ಕಲಾವಿದೆ ಸುಭದ್ರಮ್ಮ ಮನ್ಸೂರು ವಿಧಿವಶ 

ಬಳ್ಳಾರಿ : ಖ್ಯಾತ ರಂಗಭೂಮಿ ಕಲಾವಿದೆ ಬಳ್ಳಾರಿಯ ನಾಡೋಜ ಸುಭದ್ರಮ್ಮ ಮನ್ಸೂರು ನಿನ್ನೆ ತಡರಾತ್ರಿ ವಿಧಿವಶರಾಗಿದ್ದಾರೆ. ಅವರಿಗೆ 81 ವರ್ಷ ವಯಸ್ಸಾಗಿತ್ತು. ಉಸಿರಾಟದ ಸಮಸ್ಯೆಯಿಂದಾಗಿ ಅವರನ್ನು ವಿಮ್ಸ್ ಆಸ್ಪತ್ರೆಗೆ ಕರೆದೊಯ್ಯಲಾಗುತ್ತಿತ್ತು. ಈ ವೇಳೆ ಮಾರ್ಗಮಧ್ಯೆಯೇ ಕೊನೆಯುಸಿರೆಳೆದಿದ್ದಾರೆ.

ಐವತ್ತು ವರ್ಷಗಳ ಸುದೀರ್ಘ ಅವಧಿಯ ರಂಗಪಯಣ ಸುಭದ್ರಮ್ಮ ಮನ್ಸೂರು ಅವರದ್ದು. ಬಳ್ಳಾರಿ ಸುಭದ್ರಮ್ಮ ಅಂತಲೇ ಖ್ಯಾತಿ ಹೊಂದಿದ್ದ ಅವರನ್ನ ಉತ್ತರ ಕರ್ನಾಟಕದ ಆಶಾ ಭೊಂಸ್ಲೇ ಅಂತಲೂ ಜನ ಪ್ರೀತಿಯಿಂದ ಕರೆಯುತ್ತಿದ್ದರು. ಪೌರಾಣಿಕ ಪಾತ್ರಗಳಲ್ಲಿ ಸುಭದ್ರಮ್ಮನವರು ಮಿಂಚಿದ ಪರಿ ಅನನ್ಯವಾದುದು. ದ್ರೌಪದಿ,ಕುಂತಿ,ಸೀತೆ ಮುಂತಾದ ಪಾತ್ರಗಳಿಗೆ ಐವತ್ತು ವರ್ಷಗಳ ಕಾಲ ಅಕ್ಷರಶಃ ಜೀವ ತುಂಬಿದ್ದರು.

ಪರಿಪೂರ್ಣ ಕಲಾವಿದೆಯಾಗಿದ್ದ ಅವರು ನಟನೆಯ ಜೊತೆ ಗಾಯನದಲ್ಲೂ ಸೈ ಎನಿಸಿಕೊಂಡಿದ್ದರು. ಅಪ್ರತಿಮ ಕಂಠಸಿರಿ ಹೊಂದಿದ್ದ ಸುಭದ್ರಮ್ಮ ಅವರು ಪಾತ್ರ ಮಾಡುತ್ತಾರೆ ಎಂದರೆ ದೂರದ ಊರುಗಳಿಂದ ತಂಡೋಪತಂಡವಾಗಿ ಜನ ಆಗಮಿಸುತ್ತಿದ್ದರು.

1939 ರಲ್ಲಿ ಬಳ್ಳಾರಿಯ ಭಾಗ್ಯಮ್ಮ ಮತ್ತು ಜ್ವಾಲಾಪತಿ ದಂಪತಿಗೆ ಜನಿಸಿದ ಸುಭದ್ರಮ್ಮ, ಕರ್ನಾಟಕ ಮತ್ತು ಆಂದ್ರ ಗಡಿಗಳಲ್ಲಿ ನಾಟಕ ಕ್ಯಾಂಪ್ ಗಳಲ್ಲಿ ತಮ್ಮ ಅಭಿನಯಿಸಿದ್ದರು. ಅಲ್ಲದೆ, ತಮ್ಮ ಹನ್ನೊಂದನೇ ವಯಸ್ಸಿಗೆ ಸುಮಂಗಲಿ ನಾಟ್ಯ ಸಂಘ ಕಂಪನಿಯಲ್ಲಿ ಬಾಲ ನಟಿಯಾಗಿ ಬಣ್ಣ ಹಚ್ಚಿದರು. ಮಾಸ್ಟರ್ ಹಿರಣ್ಣಯ್ಯ, ಏಣಗಿ ಬಾಳಪ್ಪನವರಂಥ ಘಟಾನುಘಟಿಗಳ ಗರಡಿಯಲ್ಲಿ ಪಳಗಿದ ಸುಭದ್ರಮ್ಮ ರಂಗಾಭಿನಯ ಮತ್ತು ಗಾಯನದ ವಿವಿಧ ಮಜಲುಗಳನ್ನು ಅಲ್ಲಿ ಕಲಿತರು.

ಇಲ್ಲಿಯವರೆಗೆ ಸುಮಾರು ಎರಡು ಸಾವಿರಕ್ಕೂ ಹೆಚ್ಚು ನಾಟಕ ಪ್ರದರ್ಶನ ನೀಡಿರುವ ಅವರು ಬಳ್ಳಾರ ಜಿಲ್ಲೆಯ ಹೆಮ್ಮೆ ಮತ್ತು ಗರಿಮೆ. ಬಾಲನಟಿಯಾಗಿ ರಂಗಭೂಮಿ ಪ್ರವೇಶಿಸಿ, ಸುಮಾರು ಏಳು ದಶಕಗಳ ವೃತ್ತಿ ಸೇವೆ ಮಾಡಿರುವ ಸುಭದ್ರಮ್ಮ ಮನ್ಸೂರರು ನಾಡಿನ ಅನೇಕ ಪ್ರಶಸ್ತಿ,ಸನ್ಮಾನಗಳಿಗೆ ಭಾಜನರಾಗಿದ್ದಾರೆ. ಹಂಪಿ ವಿವಿಯ ನಾಡೋಜ, ಗೌರವ ಡಾಕ್ಟರೇಟ್, ಗುಬ್ಬಿ ವೀರಣ್ಣ ಪ್ರಶಸ್ತಿ, ಕರ್ನಾಟಕ ಸರ್ಕಾರದ ರಾಜ್ಯೋತ್ಸವ ಪ್ರಶಸ್ತಿಗಳು ಸುಭದ್ರಮ್ಮ ಮನ್ಸೂರು ಅವರಿಗೆ ಸಂದಿವೆ.

ರಂಗಭೂಮಿಯ ಹಿರಿಯ ಕೊಂಡಿಯೊಂದು ಕಳಚಿದಂತಾಗಿದೆ. ಇಬ್ಬರು ಪುತ್ರರು ಹಾಗೂ ಒಬ್ಬ ಪುತ್ರಿಯನ್ನು ಅವರು ಅಗಲಿದ್ದಾರೆ. ನಾಡೋಜ ಸುಭದ್ರಮ್ಮ ಮನ್ಸೂರು ಅವರ ಅಗಲಿಕೆ ಗಣ್ಯರು ಮತ್ತು ನಾಡಿನ ಜನತೆ ಸಂತಾಪ ಸೂಚಿಸಿದ್ದಾರೆ.

LEAVE A REPLY

Please enter your comment!
Please enter your name here

- Advertisment -

Most Popular

5 ವರ್ಷದ ಬಾಲಕಿ ಕಾಣೆ

ಬೆಂಗಳೂರು : ನಗರದ ಮೆಜೆಸ್ಟಿಕ್ ಬಸ್ ನಿಲ್ದಾಣದಲ್ಲಿ 5 ವರ್ಷದ ಬಾಲಕಿ ಕಾಣೆಯಾಗಿದ್ದಾಳೆ. ಲೋಕಿತ ಕೆ.ಮರನ್ ಕಾಣೆಯಾಗಿರುವ ಬಾಲಕಿ‌. ಈಕೆ ತನ್ನ ತಾತನ ಜೊತೆ ಸೆ.18 ರಂದು ಮನೆಯಿಂದ ತೆರಳಿದ್ದಳು. ಮೆಜೆಸ್ಟಿಕ್ ನಿಲ್ದಾಣದಲ್ಲಿ...

ಅಕ್ಕ ಗೌರಿ ಲಂಕೇಶ್​ರನ್ನು ನೆನೆದು ಕಣ್ಣೀರಿಟ್ಟ ಇಂದ್ರಜಿತ್ ಲಂಕೇಶ್..!

ಬೆಂಗಳೂರು : ಸ್ಯಾಂಡಲ್​​ವುಡ್​ ಡ್ರಗ್ಸ್​ ಮಾಫಿಯಾ ವಿಚಾರಕ್ಕೆ ಸಂಬಂಧಿಸಿದಂತೆ ಸೋಮವಾರ ಸಿಸಿಬಿ ವಿಚಾರಣೆ ಎದುರಿಸಿದ್ದ ನಿರ್ದೇಶಕ ಇಂದ್ರಜಿತ್ ಲಂಕೇಶ್ ಇಂದು ಮತ್ತೊಮ್ಮೆ ಸಿಸಿಬಿ ಅಧಿಕಾರಿಗಳ ಮುಂದೆ ಹಾಜರಾಗುತ್ತಿದ್ದಾರೆ.  ಇಂದು ಸಿಸಿಬಿ ವಿಚಾರಣೆಗೆ ಹೋಗುವ...

ಸ್ಯಾಂಡಲ್​​ವುಡ್​​​​​ನಲ್ಲಿ ಡ್ರಗ್​ ಮಾಫಿಯಾ : ಇಂದು ಸಿಸಿಬಿಯಿಂದ ನಟಿ ರಾಗಿಣಿ ವಿಚಾರಣೆ

ಬೆಂಗಳೂರು :  ಸ್ಯಾಂಡಲ್​​​​ವುಡ್​​ನಲ್ಲಿ ಡ್ರಗ್​​ ಮಾಫಿಯಾದ ಬಗ್ಗೆ ಬಿಸಿಬಿಸಿ ಚರ್ಚೆ ನಡೀತಾ ಇದೆ. ಚಂದನವನಕ್ಕೆ ಮಾದಕ ಜಾಲ ಹಬ್ಬಿದೆಯೇ ಅಥವಾ ಇಲ್ಲವೇ ಅನ್ನೋದು ಸದ್ಯದ ಗಾಂಧಿನಗರದ ಹಾಟ್ ಸುದ್ದಿ. ಇದಕ್ಕೆ ಸಂಬಂಧಿಸಿದಂತೆ ನಟಿ ರಾಗಿಣಿ...

ಕೊರೋನಾದಿಂದ ಮಾಜಿ ಶಾಸಕ ಅಪ್ಪಾಜಿ ಗೌಡ ನಿಧನ

ಶಿವಮೊಗ್ಗ : ಭದ್ರಾವತಿಯ ಜೆಡಿಎಸ್ ನ ಮಾಜಿ ಶಾಸಕ ಅಪ್ಪಾಜಿಗೌಡ ವಿಧಿವಶರಾಗಿದ್ದಾರೆ. ಕಳೆದ ಕೆಲ ದಿನಗಳಿಂದ ಕೊರೋನಾ ಸೋಂಕಿಗೆ ಒಳಗಾಗಿದ್ದ ಅವರು,  ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ. ಅಪ್ಪಾಜಿಗೌಡರಿಗೆ 69 ವರ್ಷ ವಯಸ್ಸಾಗಿತ್ತು. ಪತ್ನಿ...

Recent Comments