Home ಸಿನಿ ಪವರ್ ಅಗಲಿದ ಅಭಿಮಾನಿಯ ಕುಟುಂಬಕ್ಕೆ ಸು`ದೀಪ'!

ಅಗಲಿದ ಅಭಿಮಾನಿಯ ಕುಟುಂಬಕ್ಕೆ ಸು`ದೀಪ’!

ನಟ ಕಿಚ್ಚ ಸುದೀಪ್ ತಮ್ಮ ಅಭಿಮಾನಿ ನಂದೀಶ್ ಮನೆಗೆ ಭೇಟಿ ನೀಡಿ ಸಾಂತ್ವನ ಹೇಳಿದ್ದಾರೆ. ಸುದೀಪ್ ಅಭಿಮಾನಿ ಹಾಗೂ ಕಿಚ್ಚ ಸುದೀಪ್ ಸೇನಾ ಸಮಿತಿಯ ರಾಜ್ಯ ಕಾಯದರ್ಶಿಯಾಗಿದ್ದ ನಂದೀಶ್ ಗುರುವಾರ ಬೆಳಗ್ಗೆ ವಿಧಿವಶರಾಗಿದ್ದಾರೆ. ಮೂರು ದಿನಗಳ ಹಿಂದೆ ಸಂಭವಿಸಿದ್ದ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೆ  ಇಹಲೋಕ ತ್ಯಜಿಸಿದ್ದಾರೆ.‌
ಆಪ್ತ ಅಭಿಮಾನಿಯ ಅಗಲುವಿಕೆಗೆ ಕಂಬನಿ ಮಿಡಿದಿದ್ದ ಕಿಚ್ಚ, “ ನನ್ನ ಸಹೋದರ ಸ್ಥಾನದಲ್ಲಿದ್ದ ನಂದೀಶ್​ ಅವರ ಸಾವಿನ ಸುದ್ದಿ ಸ್ವೀಕರಿಸಲು ಸಾಧ್ಯವಾಗುತ್ತಿಲ್ಲ. ನಾನು ಯಾವಾಗಲೂ ನಿಮ್ಮನ್ನು ಮಿಸ್​ ಮಾಡಿಕೊಳ್ಳುತ್ತೇನೆ . ನಿಮ್ಮ ಅಗಲುವಿಕೆಯ ನೋವನ್ನು ತಡೆದುಕೊಳ್ಳುವ ಶಕ್ತಿ ನಿಮ್ಮ ಕುಟುಂಬಕ್ಕೆ ನೀಡಲಿ. ನಿಮ್ಮ ಕುಟುಂಬದ ಜೊತೆ ಸದಾ ನಾನಿರುತ್ತೇನೆ “ ಎಂದು ಟ್ವೀಟ್​ ಮಾಡಿದ್ದರು. ಇಂದು ಅವರ ಮನೆಗೆ ಭೇಟಿ ನೀಡಿ ಧೈರ್ಯ ತುಂಬಿದ್ದಾರೆ. ಅಲ್ಲದೆ ನಂದೀಶ್ ಕುಟುಂಬಕ್ಕೆ ಸಹಾಯ ಮಾಡುವುದಾಗಿ ಭರವಸೆ ನೀಡಿದ್ದಾರೆ.

LEAVE A REPLY

Please enter your comment!
Please enter your name here

- Advertisment -

Most Popular

5 ವರ್ಷದ ಬಾಲಕಿ ಕಾಣೆ

ಬೆಂಗಳೂರು : ನಗರದ ಮೆಜೆಸ್ಟಿಕ್ ಬಸ್ ನಿಲ್ದಾಣದಲ್ಲಿ 5 ವರ್ಷದ ಬಾಲಕಿ ಕಾಣೆಯಾಗಿದ್ದಾಳೆ. ಲೋಕಿತ ಕೆ.ಮರನ್ ಕಾಣೆಯಾಗಿರುವ ಬಾಲಕಿ‌. ಈಕೆ ತನ್ನ ತಾತನ ಜೊತೆ ಸೆ.18 ರಂದು ಮನೆಯಿಂದ ತೆರಳಿದ್ದಳು. ಮೆಜೆಸ್ಟಿಕ್ ನಿಲ್ದಾಣದಲ್ಲಿ...

ಅಕ್ಕ ಗೌರಿ ಲಂಕೇಶ್​ರನ್ನು ನೆನೆದು ಕಣ್ಣೀರಿಟ್ಟ ಇಂದ್ರಜಿತ್ ಲಂಕೇಶ್..!

ಬೆಂಗಳೂರು : ಸ್ಯಾಂಡಲ್​​ವುಡ್​ ಡ್ರಗ್ಸ್​ ಮಾಫಿಯಾ ವಿಚಾರಕ್ಕೆ ಸಂಬಂಧಿಸಿದಂತೆ ಸೋಮವಾರ ಸಿಸಿಬಿ ವಿಚಾರಣೆ ಎದುರಿಸಿದ್ದ ನಿರ್ದೇಶಕ ಇಂದ್ರಜಿತ್ ಲಂಕೇಶ್ ಇಂದು ಮತ್ತೊಮ್ಮೆ ಸಿಸಿಬಿ ಅಧಿಕಾರಿಗಳ ಮುಂದೆ ಹಾಜರಾಗುತ್ತಿದ್ದಾರೆ.  ಇಂದು ಸಿಸಿಬಿ ವಿಚಾರಣೆಗೆ ಹೋಗುವ...

ಸ್ಯಾಂಡಲ್​​ವುಡ್​​​​​ನಲ್ಲಿ ಡ್ರಗ್​ ಮಾಫಿಯಾ : ಇಂದು ಸಿಸಿಬಿಯಿಂದ ನಟಿ ರಾಗಿಣಿ ವಿಚಾರಣೆ

ಬೆಂಗಳೂರು :  ಸ್ಯಾಂಡಲ್​​​​ವುಡ್​​ನಲ್ಲಿ ಡ್ರಗ್​​ ಮಾಫಿಯಾದ ಬಗ್ಗೆ ಬಿಸಿಬಿಸಿ ಚರ್ಚೆ ನಡೀತಾ ಇದೆ. ಚಂದನವನಕ್ಕೆ ಮಾದಕ ಜಾಲ ಹಬ್ಬಿದೆಯೇ ಅಥವಾ ಇಲ್ಲವೇ ಅನ್ನೋದು ಸದ್ಯದ ಗಾಂಧಿನಗರದ ಹಾಟ್ ಸುದ್ದಿ. ಇದಕ್ಕೆ ಸಂಬಂಧಿಸಿದಂತೆ ನಟಿ ರಾಗಿಣಿ...

ಕೊರೋನಾದಿಂದ ಮಾಜಿ ಶಾಸಕ ಅಪ್ಪಾಜಿ ಗೌಡ ನಿಧನ

ಶಿವಮೊಗ್ಗ : ಭದ್ರಾವತಿಯ ಜೆಡಿಎಸ್ ನ ಮಾಜಿ ಶಾಸಕ ಅಪ್ಪಾಜಿಗೌಡ ವಿಧಿವಶರಾಗಿದ್ದಾರೆ. ಕಳೆದ ಕೆಲ ದಿನಗಳಿಂದ ಕೊರೋನಾ ಸೋಂಕಿಗೆ ಒಳಗಾಗಿದ್ದ ಅವರು,  ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ. ಅಪ್ಪಾಜಿಗೌಡರಿಗೆ 69 ವರ್ಷ ವಯಸ್ಸಾಗಿತ್ತು. ಪತ್ನಿ...

Recent Comments