ಬೆಂಗಳೂರು: ಕನ್ನಡ ಚಿತ್ರರಂಗದ ‘ಯಜಮಾನ’ ಸಾಹಸ ಸಿಂಹ ಡಾ. ವಿಷ್ಣುವರ್ಧನ್ ನಮ್ಮನ್ನಗಲಿ ಇಂದಿಗೆ 10 ವರ್ಷ. ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ವಿಷ್ಣುದಾದಾರನ್ನು ಸ್ಮರಿಸಿ ಟ್ವೀಟ್ ಮಾಡಿದ್ದಾರೆ.
ಎಷ್ಟು ಮುದ್ದಾಗಿದ್ದಾನೆ ಈ ಮನುಷ್ಯ ಎನ್ನುತ್ತಿತ್ತು ನನ್ನ ಮನ : ಜಗ್ಗೇಶ್
ಅಪ್ಪಾಜಿ…ಇಂದು ನಿಮ್ಮ 10 ನೇ ವರ್ಷದ ಪುಣ್ಯಸ್ಮರಣೆ ಆದ್ರೆ ಮರೆತವರಿಗೆ ಮಾತ್ರ ಸ್ಮರಣೆ. ನೀವು ನಮ್ಮದೆಯ ನಂದಾದೀಪ. ಈ 10 ವರ್ಷದಲ್ಲಿ ಒಂದೇ ಒಂದು ದಿನವೂ ಈ ನಾಡು, ಚಿತ್ರರಂಗ, ನಿಮ್ಮ ಅಭಿಮಾನಿಗಳು ಮತ್ತು ನಾನು ನಿಮ್ಮನ್ನು ಮರೆತೇ ಇಲ್ಲ ಎಂದು ಕಿಚ್ಚ ಸುದೀಪ್ ಟ್ವೀಟ್ಟರ್ನಲ್ಲಿ ಬರೆದುಕೊಂಡಿದ್ದಾರೆ. ಅಲ್ಲದೆ ನಿಮ್ಮ ಹೆಸರು ಅತ್ಯಂತ ಪ್ರಕಾಶಮಾನವಾಗಿ ಬೆಳಗುತ್ತಲೇ ಇದೆ. ಆ ಬೆಳಕೆ ನಮ್ಮಲ್ಲರಿಗೂ ದಾರಿದೀಪವಾಗಿದೆ ಎಂದು ಸಾಹಸ ಸಿಂಹನ ಸ್ಮರಣೆ ಮಾಡಿದ್ದಾರೆ.
ಅಪ್ಪಾಜಿ..
ಇಂದು ನಿಮ್ಮ 10ನೇ ಪುಣ್ಯಸ್ಮರಣೆ! ಆದ್ರೆ ಮರೆತವರಿಗೆ ಮಾತ್ರ ಸ್ಮರಣೆ. ನೀವು ನಮ್ಮೆದೆಯ ನಂದಾದೀಪ. ಈ 10 ವರ್ಷದಲ್ಲಿ ಒಂದೇ ಒಂದು ದಿನವೂ ಈ ನಾಡು, ಚಿತ್ರರಂಗ, ನಿಮ್ಮ ಅಭಿಮಾನಿಗಳು ಮತ್ತು ನಾನು ನಿಮ್ಮನ್ನು ಮರೆತೇ ಇಲ್ಲ. ನಿಮ್ಮ ಹೆಸರು ಅತ್ಯಂತ ಪ್ರಕಾಶಮಾನವಾಗಿ ಬೆಳಗುತ್ತಲೇ ಇದೆ. ಆ ಬೆಳಕು ಎಲ್ಲರಿಗೂ ದಾರಿದೀಪವಾಗಿದೆ. pic.twitter.com/wTQqhH1hoo— Kichcha Sudeepa (@KicchaSudeep) December 30, 2019