Saturday, May 28, 2022
Powertv Logo
Homeuncategorizedಸಚಿವ ಸುಧಾಕರ್ ಹೆಂಡತಿ, ಮಗಳಿಗೂ ಕೊರೋನಾ ಸೋಂಕು ದೃಢ!

ಸಚಿವ ಸುಧಾಕರ್ ಹೆಂಡತಿ, ಮಗಳಿಗೂ ಕೊರೋನಾ ಸೋಂಕು ದೃಢ!

ಬೆಂಗಳೂರು :  ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್‌ ಅವರ ತಂದೆಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟ ಬೆನ್ನಲ್ಲೆ ಈಗ ಅವರ ಪತ್ನಿ ಹಾಗೂ ಪುತ್ರಿಗೂ ಕೊರೋನಾ ಪಾಸಿಟಿವ್ ಕಾಣಿಸಿಕೊಂಡಿದೆ. ತಂದೆ ಹಾಗೂ ಅಡುಗೆ ಸಿಬ್ಬಂದಿಗೆ ಕೊರೋನಾ ಸೋಂಕು ತಗುಲಿದ್ದು, ಈ ಮಾಹಿತಿಯನ್ನು ಖುದ್ದು ಸಚಿವರೇ ಸೋಮವಾರ ಟ್ವೀಟ್ ಮಾಡಿ ಖಚಿತಪಡಿಸಿದ್ದರು. ಆದರೀಗ ಇದರ ಬೆನ್ನಲ್ಲೇ ಸುಧಾಕರ್ ಹೆಂಡತಿ ಹಾಗೂ ಮಗಳಿಗೂ ಕೊರೋನಾ ಸೋಂಕಿರುವುದು ದೃಢವಾಗಿದೆ.

ಕೋವಿಡ್ ಪರೀಕ್ಷಾ ವರದಿ ಯಲ್ಲಿ ಸೋಂಕು ದೃಢಪಟ್ಟ ಬೆನ್ನಲ್ಲೇ ಕುಟುಂಬದ ಎಲ್ಲಾ ಸದಸ್ಯರ ಮಾದರಿ ಸಂಗ್ರಹಿಸಿ ಪರೀಕ್ಷೆಗೆ ಒಳಪಡಿಸಲಾಗಿತ್ತು. ಸದ್ಯ ಈ ವರದಿ ಬಂದಿದ್ದು, ಸಚಿವರ ಹೆಂಡತಿ ಹಾಗೂ ಮಗಳಿಗೆ ಸೋಂಕು ಇರುವುದು ದೃಢವಾಗಿದೆ. ಅದರೆ ಅವರ ಇಬ್ಬರು ಪುತ್ರರಿಗೆ ಕೊರೊನಾ ನೆಗೆಟಿವ್ ವರದಿ ಬಂದಿದೆ. ಈ ಸಂಬಂಧ ಟ್ವೀಟ್ ಮಾಡಿರುವ ಡಾ. ಸುಧಾಕರ್ ‘ನಮ್ಮ ಕುಟುಂಬದ ಕೋವಿಡ್ ಪರೀಕ್ಷಾ ವರದಿ ಬಂದಿದ್ದು ನನ್ನ ಪತ್ನಿ ಹಾಗು ಮಗಳಿಗೆ ಕೊರೋನಾ ಪಾಸಿಟಿವ್ ಬಂದಿದೆ.ಅವರಿಬ್ಬರು ನಿಗದಿತ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.ನನ್ನ ಇಬ್ಬರು ಗಂಡುಮಕ್ಕಳು ಮತ್ತು ನನಗೆ ಕೊರೋನಾ ನೆಗೆಟಿವ್ ಬಂದಿದೆ.ನಮ್ಮೆಲ್ಲರ ಒಳಿತಿಗಾಗಿ ಪ್ರಾರ್ಥಿಸಿದ, ಶುಭಕೋರಿದ ಎಲ್ಲರಿಗೂ ನಾನು ಆಭಾರಿಯಾಗಿದ್ದೇನೆ’ ಎಂದಿದ್ದಾರೆ.

ಬೆಂಗಳೂರಿನ ಸದಾಶಿವ ನಗರದಲ್ಲಿರೋ ನಿವಾಸದಲ್ಲಿ ಅಡುಗೆ ಕೆಲಸ ಮಾಡುತ್ತಿದ್ದ ವ್ಯಕ್ತಿಗೆ ಕೊರೋನಾ ಸೋಂಕು ತಗುಲಿರುವುದು ದೃಢವಾಗಿತ್ತು. ಇದರ ಬೆನ್ನಲ್ಲೇ ಸಚಿವ ಸುಧಾಕರ್ ಅವರ ತಂದೆಗೆ ಕೊರೋನಾ ಲಕ್ಷಣಗಳಾದ ಜ್ವರ, ಕೆಮ್ಮು ಸಮಸ್ಯೆ ಕಂಡುಬಂದಿದ್ದವು.ಈಗ ಅವರ ಪತ್ನಿ ಹಾಗೂ ಪುತ್ರಿಗೂ ಕೊರೋನಾ ಇರೋದು ಧೃಡಪಟ್ಟಿದೆ.

LEAVE A REPLY

Please enter your comment!
Please enter your name here

- Advertisment -

Most Popular

Recent Comments