ಇಂದು ಮೈಸೂರಿನಲ್ಲಿ ಸುಮಲತಾ ಪ್ರಚಾರ

0
229

ಮೈಸೂರು: ಲೋಕಸಭಾ ಚುನಾವಣೆಗೆ ಮಂಡ್ಯ ಕ್ಷೇತ್ರದಿಂದ ಸ್ಪರ್ಧಿಸುತ್ತಿರುವ ಸುಮಲತಾ ಅಂಬರೀಶ್ ಅವರು ಕೆ.ಆರ್​​.ನಗರದಲ್ಲಿ ಚುನಾವಣಾ ಪ್ರಚಾರ ನಡೆಸಲಿದ್ದಾರೆ. ನಾಲ್ವಡಿ ಕೃಷ್ಣರಾಜೇಂದ್ರ ವೃತ್ತದಿಂದ ಪ್ರಚಾರ ನಡೆಯಲಿದೆ. ಸುಮಲತಾಗೆ ಪುತ್ರ ಅಭಿಷೇಕ್ ಅವರೂ ಸಾಥ್ ನೀಡಲಿದ್ದಾರೆ. ಕೆ.ಆರ್​​.ನಗರ ವ್ಯಾಪ್ತಿಯ ದೇವಸ್ಥಾನಗಳಿಗೂ ಸುಮಲತಾ ಅವರು ಭೇಟಿ ನೀಡಲಿದ್ದಾರೆ. ನಿನ್ನೆಯಷ್ಟೇ ಸುಮಲತಾ ಅವರು ಮಾಜಿ ಸಿಎಂ ಎಸ್​. ಎಂ ಕೃಷ್ಣ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ರು. ಮಂಡ್ಯ ಕ್ಷೇತ್ರದಿಂದ ದೋಸ್ತಿ ಅಭ್ಯರ್ಥಿ ನಿಖಿಲ್​ ಕುಮಾರಸ್ವಾಮಿ ಅವರು ಸ್ಪರ್ಧಿಸುತ್ತಿದ್ದು, ಈಗಾಗಲೇ ಸಕ್ಕರೆನಾಡಿನ ಲೋಕಸಭಾ ಕಣದಲ್ಲಿ ಸ್ಟಾರ್ ವಾರ್ ಶುರುವಾಗಿದೆ.

LEAVE A REPLY

Please enter your comment!
Please enter your name here