Home ಕ್ರೀಡೆ P.Cricket ಸಂಸತ್ತಿನಲ್ಲಿ ಮೊದಲು ಮಂಡ್ಯ ರೈತರನ್ನೇ ನೆನೆದ ಸುಮಲತಾ..!

ಸಂಸತ್ತಿನಲ್ಲಿ ಮೊದಲು ಮಂಡ್ಯ ರೈತರನ್ನೇ ನೆನೆದ ಸುಮಲತಾ..!

ನವದೆಹಲಿ : ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಸಂಸತ್ತಿನಲ್ಲಿ ಇಂದು ತನ್ನ ಚೊಚ್ಚಲ ಭಾಷಣ ಮಾಡಿದ್ರು. ಕನ್ನಡದಲ್ಲಿ ಮಾತುಗಳನ್ನ ಆರಂಭಿಸಿದ ಅವ್ರು,ಮಂಡ್ಯದ ರೈತರ ಸಮಸ್ಯೆಗಳನ್ನು ಪ್ರಸ್ತಾಪಿಸಿದರು. ಈ ಮೂಲಕ ರೈತಪರ ಕಾಳಜಿಯನ್ನು ಸುಮಲತಾ ತೋರಿದರು.

ಚುನಾವಣೆ ನಂತರ ಸಂಸದೆ ಸುಮಲತಾ ರೈತರ ಸಮಸ್ಯೆಗಳಿಗೆ ಸ್ಪಂದಿಸುತ್ತಿಲ್ಲ ಎಂದು ಕೆಲವರು ಟೀಕಿಸಿದ್ದರು. ಆದರೆ ಇದೀಗ ತನ್ನ ಭಾಷಣದ ಮೂಲಕ ತಮ್ಮ ವಿರುದ್ಧ ಕೇಳಿಬಂದ ಟೀಕೆಗಳಿಗೆ ಅವರು ಉತ್ತರಿಸಿದ್ದಾರೆ. ಮಂಡ್ಯ ಜಿಲ್ಲೆಯ ರೈತರು ನೀರಿನ ಸಮಸ್ಯೆಯಿಂದ ತತ್ತರಿಸಿದ್ದಾರೆ. ಸಕಾಲದಲ್ಲಿ ಮಳೆಯಾಗದ ಕಾರಣ ರೈತರಿಗೆ ಬೆಳೆ ಬೆಳೆಯಲು ಅಸಾಧ್ಯವಾಗಿದೆ. ಜಿಲ್ಲೆಯಲ್ಲಿ ಕುಡಿಯುವ ನೀರಿಗೂ ತತ್ವಾರ ಉಂಟಾಗಿದೆ.  ಸರಕಾರ ರೈತರ ಸಮಸ್ಯೆಗೆ ಸ್ಪಂದಿಸಿ ನೀರು ಹರಿಸಬೇಕು ಎಂದು ಮನವಿ ಮಾಡಿದರು.

LEAVE A REPLY

Please enter your comment!
Please enter your name here

- Advertisment -

Most Popular

5 ವರ್ಷದ ಬಾಲಕಿ ಕಾಣೆ

ಬೆಂಗಳೂರು : ನಗರದ ಮೆಜೆಸ್ಟಿಕ್ ಬಸ್ ನಿಲ್ದಾಣದಲ್ಲಿ 5 ವರ್ಷದ ಬಾಲಕಿ ಕಾಣೆಯಾಗಿದ್ದಾಳೆ. ಲೋಕಿತ ಕೆ.ಮರನ್ ಕಾಣೆಯಾಗಿರುವ ಬಾಲಕಿ‌. ಈಕೆ ತನ್ನ ತಾತನ ಜೊತೆ ಸೆ.18 ರಂದು ಮನೆಯಿಂದ ತೆರಳಿದ್ದಳು. ಮೆಜೆಸ್ಟಿಕ್ ನಿಲ್ದಾಣದಲ್ಲಿ...

ಅಕ್ಕ ಗೌರಿ ಲಂಕೇಶ್​ರನ್ನು ನೆನೆದು ಕಣ್ಣೀರಿಟ್ಟ ಇಂದ್ರಜಿತ್ ಲಂಕೇಶ್..!

ಬೆಂಗಳೂರು : ಸ್ಯಾಂಡಲ್​​ವುಡ್​ ಡ್ರಗ್ಸ್​ ಮಾಫಿಯಾ ವಿಚಾರಕ್ಕೆ ಸಂಬಂಧಿಸಿದಂತೆ ಸೋಮವಾರ ಸಿಸಿಬಿ ವಿಚಾರಣೆ ಎದುರಿಸಿದ್ದ ನಿರ್ದೇಶಕ ಇಂದ್ರಜಿತ್ ಲಂಕೇಶ್ ಇಂದು ಮತ್ತೊಮ್ಮೆ ಸಿಸಿಬಿ ಅಧಿಕಾರಿಗಳ ಮುಂದೆ ಹಾಜರಾಗುತ್ತಿದ್ದಾರೆ.  ಇಂದು ಸಿಸಿಬಿ ವಿಚಾರಣೆಗೆ ಹೋಗುವ...

ಸ್ಯಾಂಡಲ್​​ವುಡ್​​​​​ನಲ್ಲಿ ಡ್ರಗ್​ ಮಾಫಿಯಾ : ಇಂದು ಸಿಸಿಬಿಯಿಂದ ನಟಿ ರಾಗಿಣಿ ವಿಚಾರಣೆ

ಬೆಂಗಳೂರು :  ಸ್ಯಾಂಡಲ್​​​​ವುಡ್​​ನಲ್ಲಿ ಡ್ರಗ್​​ ಮಾಫಿಯಾದ ಬಗ್ಗೆ ಬಿಸಿಬಿಸಿ ಚರ್ಚೆ ನಡೀತಾ ಇದೆ. ಚಂದನವನಕ್ಕೆ ಮಾದಕ ಜಾಲ ಹಬ್ಬಿದೆಯೇ ಅಥವಾ ಇಲ್ಲವೇ ಅನ್ನೋದು ಸದ್ಯದ ಗಾಂಧಿನಗರದ ಹಾಟ್ ಸುದ್ದಿ. ಇದಕ್ಕೆ ಸಂಬಂಧಿಸಿದಂತೆ ನಟಿ ರಾಗಿಣಿ...

ಕೊರೋನಾದಿಂದ ಮಾಜಿ ಶಾಸಕ ಅಪ್ಪಾಜಿ ಗೌಡ ನಿಧನ

ಶಿವಮೊಗ್ಗ : ಭದ್ರಾವತಿಯ ಜೆಡಿಎಸ್ ನ ಮಾಜಿ ಶಾಸಕ ಅಪ್ಪಾಜಿಗೌಡ ವಿಧಿವಶರಾಗಿದ್ದಾರೆ. ಕಳೆದ ಕೆಲ ದಿನಗಳಿಂದ ಕೊರೋನಾ ಸೋಂಕಿಗೆ ಒಳಗಾಗಿದ್ದ ಅವರು,  ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ. ಅಪ್ಪಾಜಿಗೌಡರಿಗೆ 69 ವರ್ಷ ವಯಸ್ಸಾಗಿತ್ತು. ಪತ್ನಿ...

Recent Comments