ಬಿಜೆಪಿ ಮುಖಂಡರನ್ನು ಭೇಟಿ ಮಾಡಿದ ಸುಮಲತಾ..! ಗೌಪ್ಯ ಭೇಟಿ ಹಿಂದಿನ ರಹಸ್ಯವೇನು?

0
500

ಮಂಡ್ಯ : ಲೋಕಸಭಾ ಚುನಾವಣೆಯ ಕಾವು ಹೆಚ್ಚುತ್ತಿದೆ. ಮಂಡ್ಯ ರಣಕಣ ಈಗಾಗಲೇ ಸಿಕ್ಕಾಪಟ್ಟೆ ಸೌಂಡು ಮಾಡ್ತಿದೆ. ಮೈತ್ರಿ ಅಭ್ಯರ್ಥಿಯಾಗಿ ಸಿಎಂ ಕುಮಾರಸ್ವಾಮಿ ಅವರ ಪುತ್ರ, ನಟ ನಿಖಿಲ್​ ಕುಮಾರಸ್ವಾಮಿ ಕಣಕ್ಕಿಳಿಯುತ್ತಿದ್ದು, ಇಂದು ಮಂಡ್ಯ ಪ್ರವಾಸ ಕೈಗೊಂಡಿದ್ದಾರೆ..!
ಮೈತ್ರಿ ಪಾಳಯದಿಂದ ನಿಖಿಲ್​ ಸ್ಪರ್ಧಿಸುವುದು ಪಕ್ಕಾ ಆಗುತ್ತಿದ್ದಂತೆ ಕಾಂಗ್ರೆಸ್​ ಟಿಕೆಟ್​ನಿಂದ ಸುಮಲತಾ ವಂಚಿತರಾಗೋದೂ ನಿಶ್ಚಯವಾಗಿದೆ. ಸ್ಪರ್ಧಿಸೋ ಬಗ್ಗೆ ಯಾವ್ದೇ ಗೊಂದಲ ಬೇಡ. ಪಕ್ಷೇತರರಾಗಿಯಾದರೂ ಸ್ಪರ್ಧಿಸಿ ನಾವು ಗೆಲ್ಲಿಸ್ತೀವಿ ಅಂತ ಅಭಿಮಾನಿಗಳು ಭರವಸೆ ನೀಡುತ್ತಿದ್ದಾರೆ. ಹೀಗಾಗಿ ಸುಮಲತಾ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯುವ ಸಾಧ್ಯತೆ ಹೆಚ್ಚಿದೆ.
ಈ ನಡುವೆ ಸುಮಲತಾ ಅವರು ಬಿಜೆಪಿ ಮುಖಂಡರನ್ನು ಭೇಟಿ ಮಾಡಿದ್ದು ಕುತೂಹಲಕ್ಕೆ ಎಡೆಮಾಡಿಕೊಟ್ಟಿದೆ. ಬಿಜೆಪಿಯ ಹಿರಿಯ ಮುಖಂಡ ಬಿ. ಶಿವಲಿಂಗಯ್ಯ ಅವರ ನಿವಾಸಕ್ಕೆ ಭೇಟಿ ನೀಡಿ ಮಾತುಕತೆ ನಡೆಸಿದ್ದಾರೆ ಸುಮಲತಾ. ಆಪ್ತರನ್ನು ದೂರವಿಟ್ಟು ಬಿಜೆಪಿ ಮುಖಂಡರನ್ನು ಭೇಟಿಯಾದ ಸುಮಲತಾ ಒಂದು ಗಂಟೆಗೂ ಹೆಚ್ಚು ಕಾಲ ಶಿವಲಿಂಗಯ್ಯ ಅವರ ಜೊತೆ ಚರ್ಚೆ ನಡೆಸಿದ್ದಾರೆ.
ಸುಮಲತಾ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿಯುತ್ತಾರೋ..? ಅಥವಾ ಅವರು ಪಕ್ಷೇತರರಾಗಿ ನಿಂತರೂ ಅವರ ಬೆನ್ನಿಗೆ ಬಿಜೆಪಿ ನಿಲ್ಲುತ್ತಾ ಅನ್ನೋದನ್ನು ಕಾದು ನೋಡಬೇಕು.

LEAVE A REPLY

Please enter your comment!
Please enter your name here