Home ರಾಜ್ಯ KRS ಭರ್ತಿಗೆ ಇನ್ನೆರಡೇ ಅಡಿ ಬಾಕಿ ; ಡ್ಯಾಂ ವೀಕ್ಷಿಸಿದ ಸಂಸದೆ ಸುಮಲತಾ

KRS ಭರ್ತಿಗೆ ಇನ್ನೆರಡೇ ಅಡಿ ಬಾಕಿ ; ಡ್ಯಾಂ ವೀಕ್ಷಿಸಿದ ಸಂಸದೆ ಸುಮಲತಾ

ಮಂಡ್ಯ : ರಾಜ್ಯದಲ್ಲಿ ಸುರಿದ ಭಾರಿ ಮಳೆಯಿಂದಾಗಿ ನದಿಗಳು ತುಂಬಿ ಹರಿಯುತ್ತಿದ್ದು, ಈ ನಡುವೆ ಜಲಾಶಯಗಳೂ ಭರ್ತಿಯಾಗಿ ಪ್ರವಾಹದ ಸ್ಥಿತಿ ನಿರ್ಮಾಣವಾಗಿತ್ತು. ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣದಲ್ಲಿರುವ ಕೆ.ಆರ್.ಎಸ್ ಡ್ಯಾಂಗೂ ನೀರು ಹರಿದು ಬಂದಿದ್ದು, ಡ್ಯಾಂ ಭರ್ತಿಗೆ ಇನ್ನೆರಡು ಅಡಿ ಮಾತ್ರ ಬಾಕಿ ಇದೆ.

122 ಅಡಿಗೇರಿದ ಕೆಆರ್​ಎಸ್​ 

124.80 ಅಡಿ ನೀರು ಸಂಗ್ರಹ ಸಾಮರ್ಥ್ಯದ ಅಣೆಕಟ್ಟೆಯಲ್ಲಿಂದು 122.55 ಅಡಿ ನೀರು ಸಂಗ್ರಹವಾಗಿದೆ. ಇನ್ನು ಡ್ಯಾಂಗೆ 25,670 ಕ್ಯೂಸೆಕ್ ಒಳ ಹರಿವು ಇದ್ದರೆ, 3,704 ಕ್ಯೂಸೆಕ್ ನೀರನ್ನ ಡ್ಯಾಂನಿಂದ ಹೊರ ಬಿಡಲಾಗ್ತಿದೆ.

ರೈತರಲ್ಲಿ ಸಂತಸ; ಕೃಷಿ ಚಟುವಟಿಕೆ ಚುರುಕು                                                                ಅಣೆಕಟ್ಟು ಭರ್ತಿಗೆ ದಿನಗಣನೆ ಆರಂಭವಾಗಿರೋದು ಕಾವೇರಿ ಕಣಿವೆ ವ್ಯಾಪ್ತಿ ರೈತರಲ್ಲಿ ಸಂತಸ ಮೂಡುವಂತೆ ಮಾಡಿದೆ. ಹೀಗಾಗಿ ಕಾವೇರಿ ಕಣಿವೆ ವ್ಯಾಪ್ತಿಯಲ್ಲಿ ಮುಂಗಾರು ಹಂಗಾಮಿನ ಕೃಷಿ ಚಟುವಟಿಕೆ ಚುರುಕುಗೊಂಡಿದೆ.

ಸಂಸದೆಯಿಂದ ಅಣೆಕಟ್ಟು ವೀಕ್ಷಣೆ                                                                                          ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಕೆ.ಆರ್.ಎಸ್ ಅಣೆಕಟ್ಟೆಗೆ ಭೇಟಿ ನೀಡಿದ್ರು. ಅಣೆಕಟ್ಟು ಭರ್ತಿ ಹಂತ ತಲುಪಿದ ಹಿನ್ನೆಲೆಯಲ್ಲಿ ಡ್ಯಾಂಗೆ ಭೇಟಿ ನೀಡಿದ್ದ ಸುಮಲತಾ ಅಂಬರೀಶ್, ಕಾವೇರಿ ವೈಭವ ಕಣ್ತುಂಬಿಕೊಂಡು, ಅಣೆಕಟ್ಟು, ಬೃಂದಾವನದ ಸೌಂದರ್ಯ ಸವಿದರು.

– ಡಿ.ಶಶಿಕುಮಾರ್

LEAVE A REPLY

Please enter your comment!
Please enter your name here

- Advertisment -

Most Popular

5 ವರ್ಷದ ಬಾಲಕಿ ಕಾಣೆ

ಬೆಂಗಳೂರು : ನಗರದ ಮೆಜೆಸ್ಟಿಕ್ ಬಸ್ ನಿಲ್ದಾಣದಲ್ಲಿ 5 ವರ್ಷದ ಬಾಲಕಿ ಕಾಣೆಯಾಗಿದ್ದಾಳೆ. ಲೋಕಿತ ಕೆ.ಮರನ್ ಕಾಣೆಯಾಗಿರುವ ಬಾಲಕಿ‌. ಈಕೆ ತನ್ನ ತಾತನ ಜೊತೆ ಸೆ.18 ರಂದು ಮನೆಯಿಂದ ತೆರಳಿದ್ದಳು. ಮೆಜೆಸ್ಟಿಕ್ ನಿಲ್ದಾಣದಲ್ಲಿ...

ಅಕ್ಕ ಗೌರಿ ಲಂಕೇಶ್​ರನ್ನು ನೆನೆದು ಕಣ್ಣೀರಿಟ್ಟ ಇಂದ್ರಜಿತ್ ಲಂಕೇಶ್..!

ಬೆಂಗಳೂರು : ಸ್ಯಾಂಡಲ್​​ವುಡ್​ ಡ್ರಗ್ಸ್​ ಮಾಫಿಯಾ ವಿಚಾರಕ್ಕೆ ಸಂಬಂಧಿಸಿದಂತೆ ಸೋಮವಾರ ಸಿಸಿಬಿ ವಿಚಾರಣೆ ಎದುರಿಸಿದ್ದ ನಿರ್ದೇಶಕ ಇಂದ್ರಜಿತ್ ಲಂಕೇಶ್ ಇಂದು ಮತ್ತೊಮ್ಮೆ ಸಿಸಿಬಿ ಅಧಿಕಾರಿಗಳ ಮುಂದೆ ಹಾಜರಾಗುತ್ತಿದ್ದಾರೆ.  ಇಂದು ಸಿಸಿಬಿ ವಿಚಾರಣೆಗೆ ಹೋಗುವ...

ಸ್ಯಾಂಡಲ್​​ವುಡ್​​​​​ನಲ್ಲಿ ಡ್ರಗ್​ ಮಾಫಿಯಾ : ಇಂದು ಸಿಸಿಬಿಯಿಂದ ನಟಿ ರಾಗಿಣಿ ವಿಚಾರಣೆ

ಬೆಂಗಳೂರು :  ಸ್ಯಾಂಡಲ್​​​​ವುಡ್​​ನಲ್ಲಿ ಡ್ರಗ್​​ ಮಾಫಿಯಾದ ಬಗ್ಗೆ ಬಿಸಿಬಿಸಿ ಚರ್ಚೆ ನಡೀತಾ ಇದೆ. ಚಂದನವನಕ್ಕೆ ಮಾದಕ ಜಾಲ ಹಬ್ಬಿದೆಯೇ ಅಥವಾ ಇಲ್ಲವೇ ಅನ್ನೋದು ಸದ್ಯದ ಗಾಂಧಿನಗರದ ಹಾಟ್ ಸುದ್ದಿ. ಇದಕ್ಕೆ ಸಂಬಂಧಿಸಿದಂತೆ ನಟಿ ರಾಗಿಣಿ...

ಕೊರೋನಾದಿಂದ ಮಾಜಿ ಶಾಸಕ ಅಪ್ಪಾಜಿ ಗೌಡ ನಿಧನ

ಶಿವಮೊಗ್ಗ : ಭದ್ರಾವತಿಯ ಜೆಡಿಎಸ್ ನ ಮಾಜಿ ಶಾಸಕ ಅಪ್ಪಾಜಿಗೌಡ ವಿಧಿವಶರಾಗಿದ್ದಾರೆ. ಕಳೆದ ಕೆಲ ದಿನಗಳಿಂದ ಕೊರೋನಾ ಸೋಂಕಿಗೆ ಒಳಗಾಗಿದ್ದ ಅವರು,  ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ. ಅಪ್ಪಾಜಿಗೌಡರಿಗೆ 69 ವರ್ಷ ವಯಸ್ಸಾಗಿತ್ತು. ಪತ್ನಿ...

Recent Comments