ನವದೆಹಲಿ: ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(BCCI) ರಾಷ್ಟ್ರೀಯ ಆಯ್ಕೆ ಸಮಿತಿ ಮುಖ್ಯಸ್ಥರಾಗಿ ಕನ್ನಡಿಗ ಸುನೀಲ್ ಜೋಶಿ ನೇಮಕಗೊಂಡಿದ್ದಾರೆ.
ಎಂ.ಎಸ್.ಕೆ ಪ್ರಸಾದ್ ಮತ್ತು ಸದಸ್ಯ ಗಗನ್ ಖೋಡಾ ಅವರ ಅವಧಿ ಮುಗಿದ ಹಿನ್ನೆಲೆಯಲ್ಲಿ ಆಯ್ಕೆ ಸಮಿತಿಯ ಮುಖ್ಯಸ್ಥರ ನೇಮಕಾತಿಯ ಪಟ್ಟಿಯಲ್ಲಿ ಮಾಜಿ ಆಟಗಾರ ಸುನೀಲ್ ಜೋಶಿ, ಹರ್ವಿಂದರ್ ಸಿಂಗ್ ಹಾಗೂ ಮಾಜಿ ವೇಗಿ ವೆಂಕಟೇಶ್ ಪ್ರಸಾದ್ ಹೆಸರುಗಳಿದ್ದವು. ಸುನೀಲ್ ಜೋಶಿ ಆಯ್ಕೆ ಸಮಿತಿಯ ಮುಖ್ಯಸ್ಥರಾಗಿ ಹಾಗೂ ಸದಸ್ಯರಾಗಿ ಹರ್ವಿಂದರ್ ಸಿಂಗ್ ಆಯ್ಕೆಯಾಗಿದ್ದಾರೆ.