Home ದೇಶ-ವಿದೇಶ ತಬ್ಲಿಘಿ ಜಮಾತ್​ನಲ್ಲಿ ಪಾಲ್ಗೊಂಡಿದ್ದ ವಿದೇಶಿಗರನ್ನು ವಾಪಸ್​ ಕಳಿಸಲು ಸರ್ಕಾರಕ್ಕೆ ಸುಪ್ರೀಂ ಸೂಚನೆ

ತಬ್ಲಿಘಿ ಜಮಾತ್​ನಲ್ಲಿ ಪಾಲ್ಗೊಂಡಿದ್ದ ವಿದೇಶಿಗರನ್ನು ವಾಪಸ್​ ಕಳಿಸಲು ಸರ್ಕಾರಕ್ಕೆ ಸುಪ್ರೀಂ ಸೂಚನೆ

ನವದೆಹಲಿ: ಲಾಕ್​ಡೌನ್ ಮಾರ್ಗಸೂಚಿಗಳನ್ನು ಉಲ್ಲಂಘಿಸಿದ ಕಾರಣದಿಂದಾಗಿ ಸರ್ಕಾರದ ವಶದಲ್ಲಿರುವ ತಬ್ಲಿಘಿ ಜಮಾತ್​ನಲ್ಲಿ ಪಾಲ್ಗೊಂಡಿದ್ದ 36 ವಿದೇಶಿ ಪ್ರಜೆಗಳನ್ನು ತಮ್ಮ ದೇಶಗಳಿಗೆ ವಾಪಸ್ ಕಳುಹಿಸಲು ಸರ್ಕಾರಕ್ಕೆ ಸುಪ್ರೀಂಕೋರ್ಟ್ ಆದೇಶಿಸಿದೆ.ಸುಪ್ರೀಂಕೋರ್ಟ್​ ನ್ಯಾಯಮೂರ್ತಿ ಎಎಂ ಖಾನ್ವಿಲ್ಕರ್, ನ್ಯಾಯಮೂರ್ತಿ ಬಿ.ಆರ್.ಗವಾಯ್, ನ್ಯಾಯಮೂರ್ತಿ ಕೃಷ್ಣ ಮುರಾರಿ ಅವರಿದ್ದ ಪೀಠ ಈ ರೀತಿಯ ನಿರ್ದೇಶನ ನೀಡಿದ್ದು, ಒಂದು ವೇಳೆ ಅವರು ತಮ್ಮ ಸ್ವದೇಶಕ್ಕೆ ಹಿಂದಿರುಗಲು ಯಾವುದಾದರೂ ಸಮಸ್ಯೆ ಕಂಡುಬಂದರೆ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರ ಕಚೇರಿಯನ್ನು ಸಂಪರ್ಕಿಸುವಂತೆ ವಿದೇಶಿ ಪ್ರಜೆಯ ವಕೀಲರಿಗೆ ಸೂಚಿಸುವಂತೆ ಸುಪ್ರೀಂ ಹೇಳಿದೆ.

ತಬ್ಲಿಘಿ ಜಮಾತ್​​​ನಲ್ಲಿ ಪಾಲ್ಗೊಂಡಿದ್ದ ವಿದೇಶಿಗರ ಅರ್ಜಿ ವಿಚಾರಣೆ ವೇಳೆ ಈ ರೀತಿಯ ಹೇಳಿಕೆಯನ್ನು ಸುಪ್ರೀಂಕೋರ್ಟ್ ನೀಡಿದ್ದು, ಈಗಲೂ ವಿವಿಧ ರಾಜ್ಯಗಳಲ್ಲಿ ಕೆಲವೊಂದು ಪ್ರಕರಣಗಳ ವಿಚಾರಣೆ ನಡೆಯುತ್ತಿದೆ. ಜಾರ್ಖಂಡ್​ನಲ್ಲಿ ವಿದೇಶಿಗರ ವಿರುದ್ಧ ದಾಖಲಾಗಿರುವ ಎರಡು ಎಫ್​ಐಆರ್​ಗಳ ಬಗ್ಗೆ ಸುಪ್ರೀಂಕೋರ್ಟ್​​ಗೆ ಮಾಹಿತಿ ನೀಡಲಾಗಿದ್ದು, ಎರಡು ತಿಂಗಳಿನಲ್ಲಿ ವಿಚಾರಣೆಯನ್ನು ಪೂರ್ಣಗೊಳಿಸುವಂತೆ ಸುಪ್ರೀಂಕೋರ್ಟ್ ವಿಚಾರಣಾ ನ್ಯಾಯಾಲಯಕ್ಕೆ ಸೂಚನೆ ನೀಡಿದೆ.

LEAVE A REPLY

Please enter your comment!
Please enter your name here

- Advertisment -

Most Popular

‘ಉಗ್ರ ಸ್ವರೂಪ ಪಡೆಯುತ್ತಿರುವ ಅನ್ನದಾತರ ಹೋರಾಟ’

ದೆಹಲಿ: ಕೃಷಿ ಕಾಯ್ದೆ ವಿರೋಧಿಸಿ ಇಂದು ದೆಹಲಿಯಲ್ಲಿ ನಡೆಯುತ್ತಿರುವ ಬೃಹತ್ ಪ್ರತಿಭಟನೆ ನಡೆಯುತ್ತಿದೆ. ರೈತರ ಪ್ರತಿಭಟನೆ ಕ್ಷಣ-ಕ್ಷಣಕ್ಕೂ ಉಗ್ರ ಸ್ವರೂಪ ಪಡೆಯುತ್ತಿದೆ. ರೈತರು ಸಿಂಘು ಬಾರ್ಡ್ ನಿಂದ ದೆಹಲಿ ರಿಂಗ್ ರೋಡ್ ಗೆ...

ಬೆಂಗಳೂರಿನಲ್ಲಿ ಸಿಡಿದೆದ್ದ ಅನ್ನದಾತರು..!

ಬೆಂಗಳೂರು: ಬೆಂಗಳೂರಿನಲ್ಲಿ ಸಿಡಿದೆದ್ದ ಅನ್ನದಾತರು. ಬೆಂಗಳೂರಿನ ಹೆಬ್ಬಾಳದಲ್ಲಿ ಟ್ರಾಫಿಕ್ ಜಾಮ್ ಉಂಟಾಗಿದೆ. ರೈತರು ಪ್ರತಿಭಟನೆ ಆಗಮಿಸುವ ಹಿನ್ನಲೆಯಲ್ಲಿ ಪೊಲೀಸರು ಹೆಬ್ಬಾಳದ ಮುಖ್ಯ ರಸ್ತೆಗೆ ಬ್ಯಾರಿಕೆಡ್ ಗಳನ್ನು ಹಾಕಿ ತಡೆಹಿಡೆಯಲಾಗಿದೆ. 50ಕ್ಕೂ ಹೆಚ್ಚು ಕಾರು...

‘ರಾಷ್ಟ್ರಗೀತೆ ಹಾಡುವ ಮೂಲಕ ಪ್ರತಿಭಟನೆಗೆ ಚಾಲನೆ’

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ರೈತರ ಬೃಹತ್ ಪ್ರತಿಭಟನಾ ರ್ಯಾಲಿ ಆರಂಭವಾಗಿದೆ. ರಾಜ್ಯದ ಮೂಲೆ ಮೂಲೆಗಳಿಂದ ರೈತರು ಆಗಮಿಸಿದ್ದಾರೆ. ನಗರದ ಆರು ದಿಕ್ಕೂಗಳಿಂದ ರೈತರು ಬರುತ್ತಿದ್ದಾರೆ. ರಾಷ್ಟ್ರಗೀತೆ ಹಾಡುವ ಮೂಲಕ ರ್ಯಾಲಿಗೆ ಚಾಲನೆ...

‘ದೆಹಲಿಯಲ್ಲಿ ರೈತರ ಮೇಲೆ ಲಾಠಿ ಚಾರ್ಜ್’

ದೆಹಲಿ: ಕೃಷಿ ಕಾಯ್ದೆ ವಿರೋಧಿಸಿ ರೈತರು ದೆಹಲಿಯ ಸಿಂಘು, ಟಿಕ್ರಿ ಗಡಿಯಲ್ಲಿ ಬ್ಯಾರಿಕೇಡ್ ಮುರಿದು ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪರಿಸ್ಥಿತಿಯನ್ನು ನಿಯಂತ್ರಿಸಲು ದೆಹಲಿಯಲ್ಲಿ ಪೊಲೀಸರು ರೈತರ ಮೇಲೆ ಲಾಠಿ ಚಾರ್ಜ್ ನಡೆಸಿದ್ದಾರೆ.   ರೈತರು...

Recent Comments