ನವದೆಹಲಿ: ನಿರ್ಭಯಾ ಅತ್ಯಾಚಾರ ಹಾಗೂ ಕೊಲೆ ಅಪರಾಧಿ ಮುಖೇಶ್ ಸಿಂಗ್ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ವಜಾಗೊಳಿಸಿದೆ.
ರಾಷ್ಟ್ರಪತಿಗಳಿಗೆ ಸಲ್ಲಿಸಿದ್ದ ಕ್ಷಮಾಧಾನ ಅರ್ಜಿ ತಿರಸ್ಕರಿಸಿದ್ದನ್ನು ಪ್ರಶ್ನಿಸಿ ಅಪರಾಧಿ ಮುಖೇಶ್ ಸಿಂಗ್ ಸಲ್ಲಿಸಿದ್ದ. ನ್ಯಾಯಮೂರ್ತಿಗಳಾದ ಆರ್.ಬಾನುಮತಿ, ಅಶೋಕ್ ಭೂಷಣ್ ಹಾಗೂ ಎ.ಎಸ್ ಬೋಪಣ್ಣ ಅವರ ಪೀಠ ಅರ್ಜಿಯ ವಿಚಾರಣೆ ನಡೆಸಿ ಅದನ್ನು ವಜಾಗೊಳಿಸಿದೆ.
ರಾಷ್ಟ್ರಪತಿಗಳು ಆರ್ಟಿಕಲ್ 72ರ ಅಡಿ ಕ್ಷಮಾಧಾನ ಅರ್ಜಿಗೆ ಸಂಬಂಧಿಸಿದಂತೆ ತಮ್ಮ ಆದೇಶವನ್ನು ನೀಡಿದ್ದು, ಅದನ್ನು ಕೋರ್ಟ್ ಮರಿಪರಿಶೀಲಿಸುವಂತಿಲ್ಲ ಎಂದು ಸುಪ್ರೀಂಕೋರ್ಟ್ ಸ್ಪಷ್ಟಪಡಿಸಿದೆ.