ಇಂದೂ ಬಗೆಹರಿಯಲೇ ಇಲ್ಲ ಶಬರಿಮಲೆ ವಿವಾದ !

0
285

ನವದೆಹಲಿ : ಇಡೀ ದೇಶವೇ ಎದುರು ನೋಡುತ್ತಿರುವ ಕೇರಳದ ಶಬರಿಮಲೆ ದೇವಾಲಯಕ್ಕೆ ಮಹಿಳೆಯರ ಪ್ರವೇಶಕ್ಕೆ ಸಂಬಂಧಪಟ್ಟ ಮಹತ್ವದ ಪ್ರಕರಣದ ಕುರಿತು ಸಪ್ರೀಂಕೋರ್ಟ್ ಇಂದು ಅಂತಿಮ ತೀರ್ಪು ಹೊರಡಿಸುತ್ತೆ ಎಂದು ಹೇಳಲಾಗಿತ್ತು. ಆದರೆ,  ಸುಪ್ರೀಂ ಕೋರ್ಟ್​ ಪಂಚ ಸದಸ್ಯ ಪೀಠವು 7 ಸದಸ್ಯರ ವಿಸ್ತೃತ ಪೀಠಕ್ಕೆ ಪ್ರಕರಣವನ್ನು ವರ್ಗಾಯಿಸಿದೆ. 
ಅಯ್ಯಪ್ಪ ಸನ್ನಿಧಾನಕ್ಕೆ ಮಹಿಳೆಯರ ಪ್ರವೇಶ ಸಂಬಂಧಿಸಿದಂತೆ ಮರುಪರಿಶೀಲನಾ ಅರ್ಜಿಯ ತೀರ್ಪನ್ನು ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯ್, ನ್ಯಾ. ರೋಹಿಂಟನ್ ನಾರಿಮನ್, ನ್ಯಾ.ಡಿ.ವೈ.ಚಂದ್ರಚೂಡ್, ನ್ಯಾ.ಇಂದು ಮಲ್ಹೋತ್ರಾ , ಎ.ಎಂ.ಖಾನ್ ವಿಲ್ಕರ್ ಅವರನ್ನೊಳಗೊಂಡ ಪಂಚ ಸದಸ್ಯ ಪೀಠ 7 ಸದಸ್ಯರ ಪೀಠಕ್ಕೆ ವರ್ಗಾಯಿಸಿ ಆದೇಶ ಹೊರಡಿಸಿದೆ.
ನ್ಯಾ. ಚಂದ್ರಚೂಡ್​, ನ್ಯಾ. ನಾರಿಮನ್​ಅವರು ಶಬರಿಮಲೆ ದೇಗುಲ ಮಹಿಳೆಯರ ಪ್ರವೇಶಕ್ಕೆ ನಿರಾಕರಣೆ ಮಾಡಿದರು. ಉಳಿದ ಮೂವರು ನ್ಯಾಯಮೂರ್ತಿಗಳು ಮಹಿಳೆಯರ ಪ್ರವೇಶವನ್ನು ಬೆಂಬಲಿಸಿದರು.
5 ವರ್ಷದಿಂದ 50 ವರ್ಷ ವಯಸ್ಸಿನವರೆಗಿನ ಮಹಿಳೆಯರು ದೇಗುಲ ಪ್ರವೇಶಿಸಬಾರದೆಂಬ ನಿಯಮವನ್ನು ಸುಪ್ರೀಂಕೋರ್ಟ್​ 2018ರ ಸೆಪ್ಟೆಂಬರ್ 28ರಂದು ರದ್ದುಮಾಡಿ ಆದೇಶ ನೀಡಿತ್ತು. ಅಂದಿನ ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ, ನ್ಯಾ.ಡಿ.ವೈ.ಚಂದ್ರಚೂಡರ್, ನ್ಯಾ.ಇಂದು ಮಲ್ಹೋತ್ರಾ, ನ್ಯಾ.ರೋಹಿಂಟನ್ ನಾರಿಮನ್, ನ್ಯಾ.ಎ.ಎಂ.ಖಾನ್ ವಿಲ್ಕರ್ ಅವರನ್ನೊಳಗೊಂಡ ನ್ಯಾಯಪೀಠ 4:1 ಬಹುಮತದ ತೀರ್ಪು ನೀಡಿತ್ತು. ಈ ತೀರ್ಪಿನ ಮರುಪರಿಶೀಲನೆಗೆ ಅರ್ಜಿ ಸಲ್ಲಿಕೆಯಾಗಿದ್ದವು. ಅಷ್ಟೇ ಅಲ್ಲದೆ ಆ ಆದೇಶದ ಬಳಿಕ ಮಹಿಳೆಯರು ಶಬರಿಮಲೆ ಪ್ರವೇಶಿಸಿದ್ದರಿಂದ ಉದ್ವಿಘ್ನ ಪರಿಸ್ಥಿತಿ ನಿರ್ಮಾಣವಾಗಿತ್ತು.

LEAVE A REPLY

Please enter your comment!
Please enter your name here